Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀವು ಬೇಕಾದರೂ ಸಿಎಂ ಸ್ಥಾನಕ್ಕೆ...

ನೀವು ಬೇಕಾದರೂ ಸಿಎಂ ಸ್ಥಾನಕ್ಕೆ ಪ್ರಯತ್ನಿಸಿ: ಡಿ.ಕೆ.ಶಿವಕುಮಾರ್ ಚಟಾಕಿ

ವಾರ್ತಾಭಾರತಿವಾರ್ತಾಭಾರತಿ24 Jun 2021 7:26 PM IST
share
ನೀವು ಬೇಕಾದರೂ ಸಿಎಂ ಸ್ಥಾನಕ್ಕೆ ಪ್ರಯತ್ನಿಸಿ: ಡಿ.ಕೆ.ಶಿವಕುಮಾರ್ ಚಟಾಕಿ

ಬೆಂಗಳೂರು, ಜೂ.24: ಚುನಾವಣೆಗೆ ಸ್ಪರ್ಧಿಸುವ 224 ಜನರಲ್ಲಿ ಗೆಲ್ಲುವವರ ಜತೆಗೆ, ಸೋತವರು ಕೂಡ ಮುಖ್ಯಮಂತ್ರಿಯಾಗಿದ್ದನ್ನು ರಾಜ್ಯ ರಾಜಕೀಯದ ಇತಿಹಾಸದಲ್ಲಿ ನೋಡಿದ್ದೇವೆ. ದೇವರಾಜ ಅರಸು ಅವರು ಚುನಾವಣೆಯಲ್ಲಿ ಗೆದ್ದಿರಲಿಲ್ಲ, ಆದರೂ ಮುಖ್ಯಮಂತ್ರಿ ಆಗಲಿಲ್ಲವೇ? ರಾಮಕೃಷ್ಣ ಹೆಗಡೆ ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ, ಆದರೂ ಮುಖ್ಯಮಂತ್ರಿ ಆಗಲಿಲ್ಲವೇ? ನೀವು (ಮಾಧ್ಯಮದವರು) ಕೂಡ ಪ್ರಯತ್ನಿಸಿ ಮಾಡಿ, ಒಂದು ಚಾನ್ಸ್ ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಟಾಕಿ ಹಾರಿಸಿದರು.

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಅವರ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಪರಮೇಶ್ವರ ಎಂದು ಜೈಕಾರ ಹಾಕಿದ್ದರ ಬಗ್ಗೆ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರು ಪ್ರಸ್ತಾಪಿಸಿದಾಗ ಶಿವಕುಮಾರ್ ಈ ರೀತಿ ಚಟಾಕಿ ಹಾರಿಸಿದರು.

‘ಮೈಸೂರಿನ ಸುತ್ತೂರು ಶ್ರೀಗಳಿಗೆ ರಾಜಕೀಯ ಪಕ್ಷಗಳ ಭೇದ-ಭಾವವಿಲ್ಲ. ಎಲ್ಲ ಪಕ್ಷಗಳ ನಾಯಕರಿಗೂ ಕಷ್ಟಕಾಲದಲ್ಲಿ ಧೈರ್ಯ ತುಂಬಿ, ಆಶೀರ್ವಾದ ಮಾಡುತ್ತಾರೆ. ಅವರ ಪೂರ್ವಾಶ್ರಮದ ಮಾತೃಶ್ರೀ ಅವರು ತೀರಿಕೊಂಡಾಗ ನಾವು ಹೋಗಲು ಸಾಧ್ಯವಾಗಲಿಲ್ಲ. ಆನಂತರ ನಾನು ಹೋಗಿ ಭೇಟಿ ಮಾಡಿದ್ದೇನೆ. ಅದೇ ರೀತಿ ಪರಮೇಶ್ವರ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ’ ಎಂದು ಶಿವಕುಮಾರ್ ಹೇಳಿದರು.

ಅಶೋಕಣ್ಣ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ಎತ್ತಿಹಾಕಲಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ದುರ್ಬಲವಾಗಿದೆ. ಹೀಗಾಗಿ ಪಕ್ಷದಲ್ಲಿ ನಾಯಕತ್ವದ ವಿಚಾರವಾಗಿ ಚರ್ಚೆ ನಡೆಯುತ್ತಿದೆ ಎಂದು ಸಚಿವ ಆರ್.ಅಶೋಕ್ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಉತ್ತರಿಸಿದ ಶಿವಕುಮಾರ್, ‘ಅಶೋಕಣ್ಣ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ತೆಗೆದುಹಾಕಲಿ, ಆಮೇಲೆ ಬೇರೆಯವರ ಬಗ್ಗೆ ಮಾತನಾಡಲಿ’. ಅವರ ಪಕ್ಷದಲ್ಲಿ ಆದ ರಾಮಾಯಣ ನೀವೇ(ಮಾಧ್ಯಮದವರು) ತೋರಿಸಿದ್ದೀರಲ್ಲಾ ಎಂದೂ ಹೇಳಿದರು.

ನಾಗರಿಕ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಸದಾ ಸಿದ್ಧ: ಸಿಎಎ ಆಂದೋಲನ ಮತ್ತೆ ಆರಂಭವಾಗಬೇಕು ಎಂದು ಕೆಲವು ರಾಜಕೀಯ ಪಕ್ಷಗಳು ಹೇಳಿರುವ ಬಗ್ಗೆ ಪ್ರಸ್ತಾಪಿಸಿದಾಗ ಉತ್ತರಿಸಿದ ಅವರು, ‘ಜನರ ಹಿತಾಸಕ್ತಿ, ಅವರ ಸಾರ್ವಭೌಮತ್ವ, ಪೌರತ್ವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಇವು ದೇಶದ ಪ್ರತಿ ಪ್ರಜೆಯ ಹಕ್ಕು. ಅವರ ರಕ್ಷಣೆಗೆ ನಾವು ಸದಾ ನಿಲ್ಲುತ್ತೇವೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X