ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಪ್ರಕರಣ: ನಾಲ್ವರು ವಿದ್ಯಾರ್ಥಿಗಳ ಬಂಧನ

Photo Credit: AFP
ಹೊಸದಿಲ್ಲಿ: ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸ್ ವಿಶೇಷ ಘಟಕವು ಲಡಾಖ್ನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮೂಲಗಳ ಪ್ರಕಾರ, ವಿದ್ಯಾರ್ಥಿಗಳನ್ನು ಕಾರ್ಗಿಲ್ ನಲ್ಲಿ ಬಂಧಿಸಲಾಗಿದ್ದು ಅವರನ್ನು ಸಾರಿಗೆ ರಿಮಾಂಡ್ ನಲ್ಲಿ ದಿಲ್ಲಿಗೆ ಕರೆ ತರಲಾಗುತ್ತಿದೆ.
ಜನವರಿ 29 ರಂದು ದಿಲ್ಲಿಯ ಹೃದಯಭಾಗದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ಸಣ್ಣ ಐಇಡಿ ಸ್ಫೋಟಗೊಂಡಿತ್ತು.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ
Next Story





