ಉಡುಪಿ: ಯೋಗ ದಿನದ ಅಂಚೆ ಚೀಟಿ ಬಿಡುಗಡೆ

ಉಡುಪಿ, ಜೂ.24: ಭಾರತೀಯ ಅಂಚೆ ಇಲಾಖೆಯು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಂದರ್ಭದಲ್ಲಿ ದೇಶದ ಸುಮಾರು 810 ಪ್ರಧಾನ ಅಂಚೆ ಕಚೇರಿಗಳಲ್ಲಿ ಯೋಗ ದಿನದ ಲಾಂಛನವಿರುವ ಸ್ಪೆಷಲ್ ಸ್ಟಾಂಪ್ ಕ್ಯಾನ್ಸಲೇಷನ್ (ವಿಶೇಷ ಅಂಚೆ ರದ್ಧತಿ ಮೊಹರು)ನ ವಿಶೇಷ ಅಂಚೆ ಚೀಟಿಗಳನ್ನು ಇಲಾಖೆಯು ಬಿಡುಗಡೆಗೊಳಿಸಿದೆ.
ಅಂತಾರಾಷ್ಟ್ರೀಯ ಯೋಗ ದಿನವಾದ ಜೂ.21 ರಂದು ಜಿಲ್ಲೆಯ ಉಡುಪಿ, ಮಣಿಪಾಲ ಹಾಗೂ ಕುಂದಾಪುರ ಪ್ರಧಾನ ಅಂಚೆ ಕಚೇರಿಗಳಲ್ಲಿ ಅಂಚೆ ಪತ್ರ ಹಾಗೂ ಅಂಚೆ ಪರಿಕರಗಳಿಗೆ ಅಂಚೆ ಮೊಹರನ್ನು ಮುದ್ರಿಸಲಾಯಿತು.
ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ನೇತೃತ್ವದಲ್ಲಿ ಸಹಾಯಕ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ ಹಾಗೂ ಕೃಷ್ಣರಾಜ ವಿಠಲ ಭಟ್ ಅವರು ಮಾಹೆಯ ಯೋಗ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ಆಚಾರ್ಯ ಹಾಗೂ ನಗರದ ಹಿರಿಯ ಫಿಲಾಟಲಿಸ್ಟ್ ಕೃಷ್ಣಯ್ಯ ಅವರ ನಿವಾಸಕ್ಕೆ ತೆರಳಿ ಯೋಗ ದಿನದ ಸ್ಪೆಷಲ್ ಕ್ಯಾನ್ಸಲೇಷನ್ ಮಾಡಿದ ಕವರ್ ಮತ್ತು ಪೋಸ್ಟ್ ಕಾರ್ಡ್‌ಗಳನ್ನು ನೀಡಿ ಗೌರವಿಸಿದರು.
Next Story





