ಕುಂಡಾಜೆ: ಎರಡು ಕಾರುಗಳ ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಕಡಬ, ಜೂ.25: ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ-800 ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರಿನ ನಡುವೆ ಕುಂಡಾಜೆ ಸಮೀಪದ ಕಿರು ಸೇತುವೆಯ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದೆ.
ಸ್ಥಳಕ್ಕೆ ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್, ಎಎಸ್ಐ ಸುರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






.gif)
.gif)
.gif)

