Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಮ್ತಾಝ್ ಬೇಗಮ್‌ರ 'ಸ್ವಾತಂತ್ರ್ಯದ...

ಮುಮ್ತಾಝ್ ಬೇಗಮ್‌ರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ'

ವಾರ್ತಾಭಾರತಿವಾರ್ತಾಭಾರತಿ25 Jun 2021 11:22 AM IST
share
ಮುಮ್ತಾಝ್ ಬೇಗಮ್‌ರ ಸ್ವಾತಂತ್ರ್ಯದ ಕಹಳೆ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು, ಜೂ.25: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ನೀಡುವ 2019ನೇ ಸಾಲಿನ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ'ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಝ್ ಬೇಗಮ್‌  ಅವರ 'ಸ್ವಾತಂತ್ರ್ಯದ ಕಹಳೆ' ಕೃತಿ ಆಯ್ಕೆಯಾಗಿದೆ.

ಖತರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್'ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದ ಮುಮ್ತಾಝ್ ಬೇಗಮ್, ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ದೈನಿಕ ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

‘ಅವ್ಯಕ್ತ’ ಮತ್ತು ‘ಅಂಕುರ' (ಕಥಾ ಸಂಕಲನ), ‘ಪರದೇಶಿ' (ಧಾರವಾಹಿ-ತರಂಗ), ‘ವರ್ತುಲ' ಮತ್ತು ‘ಬಂದಳಿಕೆ’ (ಕಾದಂಬರಿ), ‘ಚಿಂಪಿ’(ಮಕ್ಕಳ ಸಾಹಿತ್ಯ), ‘ಸರ್ವ ಋತುಗಳೂ ನಿನಗಾಗಿ' (ಕವನ ಸಂಕಲನ) ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ (ಇಂಗ್ಲಿಷ್ ಕಾದಂಬರಿ) ಇವರ ಪ್ರಕಟಿತ ಕೃತಿಗಳು.

ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಮಗಳ ಜೊತೆಗಿದ್ದ ಇವರು ತನ್ನ ‘ಸೂರ್ಯಾಸ್ತ’ಕೃತಿಯ ಬಿಡುಗಡೆಗಾಗಿ ಊರಿಗೆ ಬಂದವರು 2021ರ ಮಾರ್ಚ್ ಕೊನೆಯಲ್ಲಿ ಪುಸ್ತಕ ಬಿಡುಗಡೆಗೊಳಿಸಿದ್ದರು. ಎಪ್ರಿಲ್ 6ರಂದು ಅವರು ನಿಧನರಾದರು.

ಅತ್ತಿಮಬ್ಬೆ, ಚೆನ್ನಶ್ರೀ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ, ಜಿಲ್ಲಾ ರಾಜ್ಯೋತ್ಸವ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಮುಮ್ತಾಝ್ ಬೇಗಮ್‌  ರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರದಂತಹಾ ಅನೇಕ ಗೌರವ, ಬಹುಮಾನಗಳು ಪ್ರಾಪ್ತವಾಗಿವೆ.

'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ'ಯು ಹತ್ತು ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವುಗೊಂಡ ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ.ಹಸೀನಾ ಖಾದ್ರಿ, ಅಬ್ದುರ‍್ರಹ್ಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುರ್ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X