Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕ...

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕ ಪಡಬೇಕಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ25 Jun 2021 5:06 PM IST
share
ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕ ಪಡಬೇಕಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜೂ.25: ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಈ ವೈರಾಣು ಬಗ್ಗೆ ವಿಶೇಷವಾಗಿ ಆತಂಕಪಡುವ ಅಗತ್ಯವಿಲ್ಲ. ಪ್ರತಿ ದಿನ ಜೀನೋಮ್ ಸೀಕ್ವೆನ್ಸಿಂಗ್ ಆಗುತ್ತಿರುತ್ತದೆ. ಈ ವೇಳೆ ವೈರಾಣು ಪತ್ತೆಯಾಗುತ್ತದೆ ಎಂದರು.

ಕೇರಳದಲ್ಲಿ ಸೋಂಕು ಹೆಚ್ಚಿದ್ದು, ಪಾಸಿಟಿವಿಟಿ ದರ 10% ಗಿಂತ ಅಧಿಕವಾಗಿದೆ. ನಮ್ಮ ರಾಜ್ಯ ಕೇರಳ ಗಡಿ ಹಂಚಿಕೊಳ್ಳುವುದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ಮಹಾರಾಷ್ಟ್ರ ಕೂಡ ಗಡಿ ಹಂಚಿಕೊಂಡಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಪರೀಕ್ಷೆ ಮಾಡಬೇಕು, ಮುಂಜಾಗ್ರತಾ ಕ್ರಮ ವಹಿಸಬೇಕು, ಅಲ್ಲಿಂದ ಒಳಬರುವ ಪ್ರಯಾಣಿಕರಿಗೆ ರ್‍ಯಾಂಡಮ್ ಪರೀಕ್ಷೆ ಮಾಡಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

ಗಡಿಭಾಗಗಳನ್ನು ಮುಚ್ಚುವುದು ಸಮಂಜಸವಲ್ಲ. ಆದರೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಸ್, ರೈಲು ಎಲ್ಲಿಂದ ಬಂದರೂ ಆಯಾ ನಿಲ್ದಾಣಗಳಲ್ಲಿ ಎಚ್ಚರ ವಹಿಸಬೇಕು. ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ನಾಲ್ಕು ವೈದ್ಯಕೀಯ ಕಾಲೇಜುಗಳು ಹಾಗೂ ಮಂಗಳೂರು ಮತ್ತು ವಿಜಯಪುರ ಜಿಲ್ಲಾಸ್ಪತ್ರೆಗಳಲ್ಲಿ ಒಟ್ಟು 6 ಜೀನೋಮ್ ಸೀಕ್ವೆನ್ಸ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮ ಕುರಿತು ಚರ್ಚೆಯಾಗಲಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಚಿಕಿತ್ಸೆಯಲ್ಲಿ ಕೆಲ ವ್ಯತ್ಯಾಸ ಇದೆ. ಈ ಬಗ್ಗೆ ತಜ್ಞರು ತಿಳಿಸಿದ್ದಾರೆ ಎಂದರು.

500 ಸಾಂದ್ರಕ ಹಸ್ತಾಂತರ

ಸ್ನೇಹ ಚಾರಿಟೇಬಲ್ ಟ್ರಸ್ಟ್ ವತಿಯಿಂದ 500 ಆಕ್ಸಿಜನ್ ಸಾಂದ್ರಕ, 10 ಸಾವಿರ ಕಾನ್ಸಂಟ್ರೇಟರ್ ಟ್ಯೂಬ್, ಸರ್ಕಾರಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡರು. ಕೋವಿಡ್ ನಿಯಂತ್ರಣಕ್ಕೆ 28 ಕೋಟಿ ರೂ. ಮೊತ್ತದ ಸಹಕಾರ ನೀಡುವುದಾಗಿ ಟ್ರಸ್ಟ್ ತಿಳಿಸಿದೆ. ಪೋಸ್ಟ್ ಕೋವಿಡ್ ಗಾಗಿ ಆಸ್ಪತ್ರೆ ನಿರ್ಮಿಸುವ ಕಾರ್ಯವನ್ನೂ ಮಾಡಲಾಗಿದೆ. ಇದಕ್ಕಾಗಿ ಟ್ರಸ್ಟ್ ಗೆ ಕೃತಜ್ಞತೆಗಳು ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X