Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಡೀಲು ಭೂಮಿಯಲ್ಲಿ ಕೃಷಿಗೆ ಒತ್ತು : ಸಚಿವ...

ಹಡೀಲು ಭೂಮಿಯಲ್ಲಿ ಕೃಷಿಗೆ ಒತ್ತು : ಸಚಿವ ಬಿ.ಸಿ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 Jun 2021 5:28 PM IST
share
ಹಡೀಲು ಭೂಮಿಯಲ್ಲಿ ಕೃಷಿಗೆ ಒತ್ತು : ಸಚಿವ ಬಿ.ಸಿ. ಪಾಟೀಲ್

ಮಂಗಳೂರು, ಜೂ. 25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8000 ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕು ಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ದ.ಕ. ಜಿಲ್ಲೆಯ ಮುಂಗಾರು ಪೂರ್ವ ಸಿದ್ಧತೆಯ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ಹಡೀಲು ಭೂಮಿಯಲ್ಲಿ ಸುಮಾರು 3000 ಎಕರೆ ಭೂಮಿಯಲ್ಲಿ ಈ ಬಾರಿ ಕೃಷಿಗೆ ಸ್ಥಳೀಯ ಶಾಸಕರು ನಿರ್ಧರಿಸಿದ್ದಾರೆ ಎಂದವರು ಹೇಳಿದರು.

ಕೃಷಿ ಚಟುವಟಿಕೆಗಳ ಸಮಗ್ರ ವರದಿಗೆ ಸೂಚನೆ

ಕರಾವಳಿಯು ಭೌಗೋಳಿಕವಾಗಿ ವಿಭಿನ್ನವಾಗಿರುವುದರಿಂದ ಇಲ್ಲಿನ ಕೃಷಿ ಚಟುವಟಿಕೆಗಳು ಕೂಡಾ ಇತರ ಜಿಲ್ಲೆಗಳಿಗಿಂತ ಭಿನ್ನವಾಗಿದೆ. ಹಾಗಾಗಿ ಇಲ್ಲಿನ ಕೃಷಿಗೆ ಪೂರಕವಾಗಿ ಸೂಕ್ತ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಗ್ರ ವರದಿಯನ್ನು ತಯಾರಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಹೆಕ್ಟೇರೊಂದಕ್ಕೆ 7500 ರೂ.ನಂತೆ ಭತ್ತ ಕೃಷಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ನಿಲ್ಲಿಸಲಾಗಿದ್ದು, ಅದನು ಮುಂದುವರಿಸಲು ಹಾಗೂ ಬಂಟ್ವಾಳದ ರೈತ ಸಂಪರ್ಕ ಕೇಂದ್ರದಲ್ಲಿ ಈ ಬಾರಿ ಕೃಷಿ ಯಂತ್ರ ಧಾರೆ ಮಂಜೂರು ಮಾಡಲಾಗುವುದು ಎಂದು ಸಚಿವರು ಈ ಸಂದರ್ಭ ತಿಳಿಸಿದರು.

ಜಿಲ್ಲೆಯಲ್ಲಿ ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸುವ ನಿಟ್ಟಿನಲ್ಲಿ 12 ಲಕ್ಷ ಕ್ವಿಂಟಾಲ್ ಅಕ್ಕಿಯ ಬೇಡಿಕೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ನವೆಂಬರ್‌ನಲ್ಲಿ ಆಹಾರ ಇಲಾಖೆಯ ಮೂಲಕ ಕುಚ್ಚಲಕ್ಕಿ ದ.ಕ. ಜಿಲ್ಲೆಗೆ ವಿತರಣೆಯಾಗುವ ಸಾಧ್ಯತೆ ಇದೆ. ಈ ನಡುವೆ ಪ್ರಸ್ತುತ ಗುರುತು ಮಾಡಲಾಗಿರುವ ಹಡೀಲು ಭೂಮಿಯಿಂದ ಹೆಕ್ಟೇರೊಂದಕ್ಕೆ 15 ಕ್ವಿಂಟಾಲ್ ಅಕ್ಕಿಯಂತೆ ಜಿಲ್ಲೆಯಲ್ಲಿ ಸುಮಾರು 20000 ಕ್ವಿಂಟಾಲ್ ಅಕ್ಕಿ ಬೆಳೆಯುವ ಅಂದಾಜು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಗೋಷ್ಠಿಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್ , ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X