Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ವಾರ ಪ್ರವಾಸೋದ್ಯಮ ಕ್ಷೇತ್ರ...

ಮುಂದಿನ ವಾರ ಪ್ರವಾಸೋದ್ಯಮ ಕ್ಷೇತ್ರ ಸಾರ್ವಜನಿಕರಿಗೆ ಮುಕ್ತ: ಸಚಿವ ಸಿ.ಪಿ.ಯೋಗೇಶ್ವರ್

''ಜೋಗ ಮೈದುಂಬಿ ಹರಿಯಲು 200 ಕ್ಯೂಸೆಕ್ಸ್ ನೀರು ಬಿಡುಗಡೆ''

ವಾರ್ತಾಭಾರತಿವಾರ್ತಾಭಾರತಿ25 Jun 2021 6:51 PM IST
share
ಮುಂದಿನ ವಾರ ಪ್ರವಾಸೋದ್ಯಮ ಕ್ಷೇತ್ರ ಸಾರ್ವಜನಿಕರಿಗೆ ಮುಕ್ತ: ಸಚಿವ ಸಿ.ಪಿ.ಯೋಗೇಶ್ವರ್

ಬೆಂಗಳೂರು, ಜೂ. 25: `ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ 185 ಕೋಟಿ ರೂ.ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲು ಟೆಂಡರ್ ಅಂತಿಮವಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಿಂದ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ' ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಜೋಗ ಜಲಪಾತಕ್ಕೆ 35 ಕಿ.ಮೀ.ಉದ್ದದ ಜಲಮಾರ್ಗದಲ್ಲಿ ಪ್ರವಾಸಿಗರು ಆಗಮಿಸಲು ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದೆ. ರಜಾ ದಿನಗಳಂದು ಲಿಂಗನಮಕ್ಕಿ ಜಲಾಶಯದಿಂದ ಪ್ರಥಮ ಹಂತವಾಗಿ 200 ಕ್ಯೂಸೆಕ್ಸ್ ನೀರನ್ನು ಹರಿಸಿ 'ಜೋಗ'ದ ಸೊಬಗನ್ನು ಪ್ರವಾಸಿಗರಿಗೆ ಉಣಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣವನ್ನು 300 ಕ್ಯೂಸೆಕ್ಸ್ ಗೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸಾವಿರ ಪ್ರವಾಸಿಗರು ವಾಸ್ತವ್ಯ ಮಾಡಲು 2 ಹೋಟೆಲ್‍ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ಯೋಜನೆಯಾಗಿರುವ 'ಹೆಲಿ ಟೂರಿಸಂ ಸರ್ಕೀಟ್'ಗೆ ಜೋಗ ಜಲಪಾತವನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟಾರೆ ವರ್ಷದ 365 ದಿನಗಳು ಜೋಗದ ಸೊಬಗನ್ನು ರಾಜ್ಯ, ಹೊರ ರಾಜ್ಯಗಳು ಹಾಗೂ ದೇಶ ವಿದೇಶಗಳ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದು ಎಂದು ಅವರು ವಿವರಿಸಿದರು.

ಕೋವಿಡ್ ವೈರಸ್ ಸೋಂಕು ತಡೆಗಟ್ಟಲು ಹೇರಿದ್ದ ಸುದೀರ್ಘ ಅವಧಿಯ ಲಾಕ್‍ಡೌನ್‍ನಿಂದ ಮುಚ್ಚಲ್ಪಟ್ಟಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಸಾರ್ವಜನಿಕರಿಗೆ ಹಾಗೂ ಜನರಿಗೆ ತೆರೆಯಲಾಗುವುದು' ಎಂದ ಅವರು, `ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರವಾಸಿ ಮಾರ್ಗದರ್ಶಿಗಳಿಗೆ ನೆರವು ನೀಡಲಾಗುತ್ತಿದೆ. ಪ್ರವಾಸೋದ್ಯಮ ಕ್ಷೇತ್ರದ ಉತ್ತೇಜನಕ್ಕೆ ಸರಕಾರ ಕ್ರಮ ವಹಿಸಲಿದೆ ಎಂದರು.

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ಹಾಗೂ ವಸತಿ ವಿಹಾರಧಾಮ ಕಚೇರಿಯಲ್ಲಿ ಸಚಿವ ಯೋಗೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಕಾರ್ಯದರ್ಶಿ ಪೊನ್ನುರಾಜ್, ಪ್ರವಾಸೋದ್ಯಮ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ಜೆಎಲ್‍ಆರ್ ಹಾಗೂ ಕೆಎಸ್‍ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಹಾಗೂ ವಿಜಯ ಶರ್ಮ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ರೂಪೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಕೇರಳ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ ಪ್ರವಾಸಿಗರಿಗೆ ಸ್ಪೀಡ್ ಬೋಟ್ ಸೌಕರ್ಯ ಕಲ್ಪಿಸಲಾಗುವುದು. ಅಲ್ಲದೆ, ಜೋಗ ಮೈದುಂಬಿ ಹರಿಯಲಿ ಲಿಂಗನಮಕ್ಕಿ ಜಲಾಶಯದಿಂದ 200 ಕ್ಯೂಸೆಕ್ಸ್ ನೀಡಲು ಬಿಡುಗಡೆ ಕ್ರಮ ವಹಿಸಲಾಗುತ್ತಿದೆ. ಇದರಿಂದ ಪ್ರವಾಸಿಗರ ಆಕರ್ಷಣೆಗೆ ಅನುಕೂಲವಾಗಲಿದೆ

-ಸಿ.ಪಿ.ಯೋಗೇಶ್ವರ್, ಪ್ರವಾಸೋದ್ಯಮ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X