Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಯಾಣ ಕರ್ನಾಟಕಕ್ಕೆ 1,493 ಕೋಟಿ ರೂ....

ಕಲ್ಯಾಣ ಕರ್ನಾಟಕಕ್ಕೆ 1,493 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರ ಅನುಮೋದನೆ

ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧ: ಸಚಿವ ಡಾ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ25 Jun 2021 8:56 PM IST
share

ಬೆಂಗಳೂರು, ಜೂ. 25: `ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು ಅನುಮೋದನೆ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ್ದ 1,492.97 ಕೋಟಿ ರೂ.ಅನುದಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ' ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಗಿರಿಜನ ಉಪಯೋಜನೆಗೆ 100 ಕೋಟಿ ರೂ., ವಿಶೇಷ ಘಟಕ ಯೋಜನೆಯಡಿ 300 ಕೋಟಿ ರೂ. ಹಾಗೂ ಸಾಮಾನ್ಯ 1092.97 ಕೋಟಿ ರೂ.ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಹಸಿರು ನಿಶಾನೆ ದೊರೆತಿದೆ. 2021-22ನೆ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ 1,492.97 ಕೋಟಿ ರೂ.ಅನುದಾನಕ್ಕೆ ಮಂಡಳಿ ವ್ಯಾಪ್ತಿಯ ಜಿಲ್ಲೆ ಹಾಗೂ ತಾಲೂಕುಗಳಿಗೆ ನಂಜುಂಡಪ್ಪ ವರದಿ ಆದರಿಸಿ ಅನುದಾನ ಹಂಚಿಕೆ ಮಾಡಲಾಗಿದೆ.

ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಮಂಡಳಿಯ ಒಟ್ಟು ಅನುದಾನದ ಶೇ.84ರಷ್ಟು ಅನುದಾನದಲ್ಲಿ ಮೈಕ್ರೋ ಯೋಜನೆಗೆ ಶೇ.70ರಷ್ಟು ಅನುದಾನವನ್ನು ತಾಲೂಕುವಾರು ಹಂಚಿಕೆ ಮಾಡಲಾಗುವುದು. ಮ್ಯಾಕ್ರೋ ಯೋಜನೆಗೆ ಶೇ.30ರಷ್ಟು ಅನುದಾನವನ್ನು ಬೃಹತ್ ಮೊತ್ತದ 3ರಿಂದ 4ಯೋಜನೆಗಳಿಗೆ ಮಾತ್ರ ಹಂಚಿಕೆ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಮಗಾರಿ ನಡೆಸಲಾಗುವುದು. ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಜಿಲ್ಲಾವಾರು ಸಾಮಾನ್ಯ, ಎಸ್‍ಸಿಪಿ ಮತ್ತು ಟಿಎಸ್ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಲ್ಲಿಸಿ ಸರಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕು. ವಿಶೇಷ ಘಟಕ ಯೋಜನೆ (ಎಸ್‍ಸಿಪಿ) ಮತ್ತು ಗಿರಿಜನ ಉಪಯೋಜನೆ (ಟಿಎಸ್‍ಪಿ) ಯಡಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಗೆ ಕ್ರಿಯಾಯೋಜನೆಯನ್ನು ಪ್ರತ್ಯೇಕವಾಗಿ ರೂಪಿಸಿ ಅನುಷ್ಟಾನಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.

ಅನುದಾನ ಹಂಚಿಕೆ: ಶಿಕ್ಷಣ, ಆರೋಗ್ಯ, ಕ್ರೀಡಾ, ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ, ಅಂತರ್ಜಲ ಸಂರಕ್ಷಣೆ, ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಮೂಲ ಸೌಕರ್ಯ, ರಸ್ತೆ ಮತ್ತು ಸಂಪರ್ಕ, ನೀರು ಸರಬರಾಜು, ಪ್ರವಾಸೋಧ್ಯಮ ವಲಯಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಳಕೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಳೆದ ಸಾಲಿನಲ್ಲಿ ನಿಗದಿಯಾಗಿದ್ದ 1,131 ಕೋಟಿ ರೂ.ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪೂರ್ಣ ಅನುದಾನವನ್ನು ವೆಚ್ಚ ಭರಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಗುಣಮಟ್ಟದಲ್ಲಿ ರಾಜಿ ಇಲ್ಲ: ಇದೇ ಮೊದಲ ಬಾರಿಗೆ ಕೋವಿಡ್-19ರ ದುಷ್ಪರಿಣಾಮದಿಂದ ರಾಜ್ಯ ಆರ್ಥಿಕ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ಅನುದಾನವನ್ನು ಕಡಿತಗೊಳಿಸದೆ, ಪೂರ್ಣ ಅನುದಾನವನ್ನು ನೀಡಿರುವುದು, ಅವರ ಕಲ್ಯಾಣ ಕರ್ನಾಟಕದ ಮೇಲಿನ ಪ್ರೀತಿಗೆ ಸಾಕ್ಷಿ. ಆ ಭಾಗದ ಸಮಗ್ರ ಅಭಿವೃದ್ಧಿಗೆ ಈ ಅನುದಾನ ವಿನಿಯೋಗಿಸಲಾಗುವುದು. ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ಕಳಪೆ ಕಾಮಗಾರಿ ನಡೆದು ದೂರು ಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಕಣ್ಣಿಗೆ ಕಾಣುವಂತಹ ಬಹು ಜನೋಪಯೋಗಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ನಂಜುಂಡಪ್ಪ ವರದಿ ಅನ್ವಯ ಕಲ್ಯಾಣ ಕರ್ನಾಟಕದ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ 32 ತಾಲೂಕುಗಳು ಹಿಂದುಳಿದಿದ್ದು, ಆ ತಾಲೂಕುಗಳ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರಸಕ್ತ ಸಾಲಿನಲ್ಲೂ ಸುಮಾರು 1,500ಕೋಟಿ ರೂ.ಅನುದಾನ ನೀಡಿದ್ದು, ಸಮರ್ಪಕವಾಗಿ ವಿನಿಯೋಗವಾಗಬೇಕು. ನಿಗದಿತ ಅವಧಿಯೊಳಗೆ ಪೂರ್ಣ ಅನುದಾನವನ್ನು ವೆಚ್ಚಭರಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X