Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಸರಗೋಡಿನ ಮಂಜೇಶ್ವರ, ಕೆಲ ಗ್ರಾಮಗಳ...

ಕಾಸರಗೋಡಿನ ಮಂಜೇಶ್ವರ, ಕೆಲ ಗ್ರಾಮಗಳ ಹೆಸರು ಮಲಯಾಳೀಕರಣ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ25 Jun 2021 10:10 PM IST
share

ಬೆಂಗಳೂರು, ಜೂ. 25: `ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡಿನ ಕೆಲವು ಗ್ರಾಮಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿದ್ದ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಮಾಡಿದ್ದು, ರಾಜ್ಯದ ಅಭಿಪ್ರಾಯವನ್ನು ಕೇಳದೆ ಕೇರಳ ರಾಜ್ಯದ ಗ್ರಾಮಗಳ ಹೆಸರು ಬದಲಾವಣೆ ಸರಿಯಲ್ಲ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಮಂಜೇಶ್ವರ ಮತ್ತು ಕಾಸರಗೋಡಿನ ಕನ್ನಡ ಸಾಂಸ್ಕೃತಿಕ ಪರಂಪರೆಯನ್ನು ಸೂಚಿಸುವ ಹೆಸರುಗಳನ್ನು ಹೊಂದಿದ್ದ ಕೆಲವು ಹಳ್ಳಿಗಳ ಹೆಸರನ್ನು ಕೇರಳ ಸರಕಾರ ಸ್ಥಳೀಯ ಸಂಸ್ಥೆಗಳು ಬದಲಾಯಿಸುವಂತಹ ಪ್ರಕ್ರಿಯೆ ನಡೆಸುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಕೇರಳ ಸರಕಾರವು ಮಂಜೇಶ್ವರ ಹಾಗೂ ಕಾಸರಗೋಡಿನ ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಿ ಮಲಯಾಳಂ ಭಾಷೆಯ ಹೆಸರುಗಳನ್ನು ನೀಡಲು ಹೊರಟಿರುವುದು ಆ ಭಾಗದ ಕನ್ನಡಿಗರ ಪರಂಪರಾಗತ ಭಾವನೆಗಳಿಗೆ ಧಕ್ಕೆ ತರುವಂತಾಗಿರುತ್ತದೆ. ಇಂತಹ ಬದಲಾವಣೆಗಳನ್ನು ತರಲು ಪ್ರಯತ್ನಿಸುವ ಮುನ್ನ ಆ ಭಾಗದ ಕನ್ನಡಿಗರ ಅಭಿಪ್ರಾಯವನ್ನು ಅಥವಾ ಅಲ್ಲಿನ ನಾಗರಿಕರ ಅಭಿಪ್ರಾಯವನ್ನು ಕೇಳಿಲ್ಲ ಎಂದು ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಗಡಿ ಪ್ರದೇಶ ಅಭಿವೃದ್ಧಿಯ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಕೇರಳ ಸರಕಾರದ ಮತ್ತು ಲೋಕೋಪಯೋಗಿ ಹಾಗೂ ಕಂದಾಯ ಸಚಿವರಿಗೆ 2021ರ ಜೂ.24ರಂದು ಪತ್ರ ಬರೆದು ಕನ್ನಡದ ಗ್ರಾಮಗಳ ಹೆಸರುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದೆಂದು ಕೋರಿದ್ದಾರೆ. ದಶಕ ಮತ್ತು ಶತಮಾನಗಳಿಂದ ಬಂದಿರುವ ಗ್ರಾಮಗಳ ಹೆಸರುಗಳನ್ನು ಸೂಚಿಸುವ ಕನ್ನಡ ಭಾಷಾ ಸೂಚಕ ನಾಮಫಲಕಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಪ್ರಾಧಿಕಾರ ಆಗ್ರಹಿಸಿದೆ.

ಕನ್ನಡ ಗ್ರಾಮಗಳ ಹೆಸರು ಬದಲಾವಣೆ: `ಮಧೂರು-ಮಧುರಮ್, ಮಲ್ಲ-ಮಲ್ಲಮ್, ಕಾರಡ್ಕ-ಕಡಗಮ್, ಬೇದಡ್ಕ-ಬೆಡಗಮ್, ಪಿಲಿಕುಂಜೆ-ಪಿಲಿಕುನ್ನು, ಆನೆಬಾಗಿಲು-ಆನೆವಾಗಿಲ್, ಮಂಜೇಶ್ವರ-ಮಂಜೇಶ್ವರಮ್, ಹೊಸದುರ್ಗ-ಪುದಿಯಕೋಟ, ಕುಂಬಳೆ-ಕುಂಬ್ಳಾ, ಸಸಿಹಿತ್ಲು-ಶೈವಲಪ್, ನೆಲ್ಲಿಕುಂಜ-ನೆಲ್ಲಿಕುನ್ನಿ' ಇವುಗಳ ಮೂಲ ಹೆಸರನ್ನೆ ಉಳಿಸಿಕೊಳ್ಳಬೇಕು ಎಂದು ಪ್ರಾಧಿಕಾರದ ಪ್ರಕಟಣೆಯಲ್ಲಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X