ಜೂ. 27: ಸಿಎ/ಸಿಎಸ್ ಫೌಂಡೇಶನ್ ಕೋಚಿಂಗ್ ಉದ್ಘಾಟನೆ
ಮಂಗಳೂರು : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಕಾಮರ್ಸ್ ಅಡ್ವಾನ್ಸ್‌ಡ್ ಲರ್ನಿಂಗ್ ಹಾಗೂ ನಗರದ ಕೆವಿಸಿ ಅಕಾಡಮಿ ಕೋಚಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಮುಂದಿನ ನೂತನ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಸಿಎ/ಸಿಎಸ್ ಫೌಂಡೇಶನ್ ಕೋಚಿಂಗ್‌ನ್ನುಜೂ.27ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಕೆವಿಸಿ ಅಕಾಡಮಿಯ ಸಹಯೋಗದೊಂದಿಗೆ ಸಿ.ಎ. ಕಿರಣ್ ವಸಂತ ಉದ್ಘಾಟಿಸಿ, ಸಿಎ/ಸಿಎಸ್‌ನ ಮಹತ್ವದ ಬಗ್ಗೆ ತಿಳಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲ ಟಿ.ರಾಜರಾಮ್ ರಾವ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಕ್ತಿ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸಂಜೀತ್ ನಾಯಕ್, ಆಡಳಿತಾಧಿಕಾರಿ ಡಾ.ಕೆ.ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಚಾಲಕಿ ನೀಮಾ ಸಕ್ಸೇನಾ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





