ಕಗ್ಗೋಡ್ಲುವಿನಲ್ಲಿ ಗೋಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಮಡಿಕೇರಿ, ಜೂ.25: ಕಗ್ಗೋಡ್ಲುವಿನಲ್ಲಿ ನಡೆದ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕುಂಜಿಲ ಗ್ರಾಮದ ನಿವಾಸಿ ಮಹಮ್ಮದ್ ರಿಯಾಜ್ ಎಂಬಾತನೇ ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಗುರುವಾರ ಕೊಳಕೇರಿ ಗ್ರಾಮದ ಆಶಿಕ್ ಎಂಬಾತನನ್ನು ಬಂಧಿಸಲಾಗಿತ್ತು.
Next Story





