Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಯಮಾವಳಿ ರೂಪಿಸಿ ಎನ್‍ಡಿಪಿಎಸ್...

ನಿಯಮಾವಳಿ ರೂಪಿಸಿ ಎನ್‍ಡಿಪಿಎಸ್ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುತ್ತೇವೆ: ಗೃಹ ಸಚಿವ ಬೊಮ್ಮಾಯಿ

''ಡಾರ್ಕ್‍ವೆಬ್ ಮೂಲಕ ಡ್ರಗ್ಸ್ ಜಾಲ ಬೇಧಿಸಿದ ಮೊದಲ ರಾಜ್ಯ ಕರ್ನಾಟಕ''

ವಾರ್ತಾಭಾರತಿವಾರ್ತಾಭಾರತಿ26 Jun 2021 6:40 PM IST
share
ನಿಯಮಾವಳಿ ರೂಪಿಸಿ ಎನ್‍ಡಿಪಿಎಸ್ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುತ್ತೇವೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಜೂ. 26: `ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾಗಿರುವ ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್ ಕಾಯ್ದೆ(ಎನ್‍ಡಿಪಿಎಸ್)ಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಇದರೊಂದಿಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ `ಅಂತರರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ' ಅಂಗವಾಗಿ ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, `ಕೇಂದ್ರ ಸರಕಾರ ಎನ್‍ಡಿಪಿಎಸ್ ಕಾನೂನನ್ನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಹಾಗೂ ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ದೃಢ ನಿರ್ಧಾರ. ಹೀಗಾಗಿ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ನ್ಯಾಷನಲ್ ಲಾ ಸ್ಕೂಲ್ ಜತೆ ಸಭೆ ನಡೆದಿದ್ದು ಕಾನೂನಿನನ್ವಯ ನಿಯಮ ರೂಪಿಸಿ ಜಾರಿಗೆ ತರಲು ಅಧ್ಯಯನ ನಡೆಯುತ್ತಿದೆ' ಎಂದು ವಿವರಿಸಿದರು.

`ಡಾರ್ಕ್‍ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ರಾಜ್ಯದ ಪೊಲೀಸರು ನಿಯಂತ್ರಿಸಿದ್ದಾರೆ. ಡಾರ್ಕ್‍ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿವೆ. ಅದರ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರರಾಷ್ಟ್ರೀಯ ಮಟ್ಟದ ಪೆಡ್ಲರ್ ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು' ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ: `ಡ್ರಗ್ಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಕರ್ನಾಟಕ ಪೊಲೀಸರ ಡ್ರಗ್ ವಿರೋಧಿ ಕಾರ್ಯಾಚರಣೆಯಿಂದ ಬೇರೆ ಎಲ್ಲ ತನಿಖಾ ಏಜೆನ್ಸಿಗಳು ಜಾಗೃತವಾದವು ಅನ್ನುವುದು ಬಹಳ ಮುಖ್ಯ. ಸಾಮಾನ್ಯವಾಗಿ ಇದುವರೆಗೆ ಬೇರೆ ಏಜೆನ್ಸಿಗಳು ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದವು. ಆದರೆ, ಈಗ ರಾಜ್ಯದ ಪೊಲೀಸರು ಅಪರಾಧ ಪತ್ತೆ ವಿಚಾರದಲ್ಲಿ ಬೇರೆ ಸಂಸ್ಥೆಗಳನ್ನು ಜಾಗೃತಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ' ಎಂದರು.

50 ಕೋಟಿ ರೂ. ಮೊತ್ತದ ಮಾದಕ ವಸ್ತುಗಳ ನಾಶ: 2020-21ನೆ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 3 ಸಾವಿರ ಕೆಜಿಗೂ ಹೆಚ್ಚು ತೂಕದ 50 ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ' ಎಂದು ಹೇಳಿದರು.

ಇದುವರೆಗಿನ ಡ್ರಗ್ಸ್ ವಿರುದ್ಧದ ಹೋರಾಟದ ಇತಿಹಾಸದಲ್ಲಿ ಅತಿಹೆಚ್ಚು ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಒಂದೇ ವರ್ಷದಲ್ಲಿ ವಶಪಡಿಸಿಕೊಂಡಿರುವುದು ಐತಿಹಾಸಿಕ. ಇದು ಕರ್ನಾಟಕ ಪೊಲೀಸರ ಸಣ್ಣ ಸಾಧನೆಯೇನಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿಗಳು ನಡೆದವು. ಇದರ ಜಾಡು ಹಿಡಿದು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತುಗಳ ಜಾಲವನ್ನು ನಮ್ಮ ಪೊಲೀಸರು ಭೇದಿಸಿದರು. ಅದೆಷ್ಟೋ ಯುವಕರು, ಕುಟುಂಬಗಳು ಮಾದಕ ವಸ್ತುಗಳಿಂದ ಹಾಳಾಗುವುದನ್ನು ತಪ್ಪಿಸಿದರು' ಎಂದು ಬಸರಾಜ್ ಬೊಮ್ಮಾಯಿ ತಿಳಿಸಿದರು.

`ಮಾದಕ ವಸ್ತುಗಳ(ಡ್ರಗ್ಸ್) ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ಡ್ರಗ್ಸ್ ಮಾರಾಟ ಜಾಲವನ್ನು ಮೆಟ್ಟಿ ನಿಲ್ಲುವುದೇ ನಮ್ಮ ಸಂಕಲ್ಪ. ಡಾರ್ಕ್‍ವೆಬ್ ಮೂಲಕ ಡ್ರಗ್ಸ್ ಜಾಲ ಬೇಧಿಸಿದ ಮೊದಲ ರಾಜ್ಯ ಕರ್ನಾಟಕ'

-ಬಸವರಾಜ್ ಬೊಮ್ಮಾಯಿ, ಗೃಹ ಹಾಗೂ ಕಾನೂನು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X