Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಕಲೇಶಪುರ: 17 ದಿನಗಳ ಅಂತರದಲ್ಲಿ...

ಸಕಲೇಶಪುರ: 17 ದಿನಗಳ ಅಂತರದಲ್ಲಿ ವಿವಾಹಿತ ಸಹೋದರಿಯರಿಬ್ಬರು ಮೃತ್ಯು; ಕೊಲೆ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Jun 2021 11:55 AM IST
share
ಸಕಲೇಶಪುರ: 17 ದಿನಗಳ ಅಂತರದಲ್ಲಿ ವಿವಾಹಿತ ಸಹೋದರಿಯರಿಬ್ಬರು ಮೃತ್ಯು; ಕೊಲೆ ಆರೋಪ

ಸಕಲೇಶಪುರ : ತಾಲೂಕಿನ ಬೆಳಗೊಡು ಗ್ರಾಮದ ಕಾಫಿ ತೋಟದ ಕಾರ್ಮಿಕ ಉದಯ್ ಎಂಬವರ ಇಬ್ಬರು ವಿವಾಹಿತ ಪುತ್ರಿಯರು 17 ದಿನಗಳ ಅಂತರದಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕೊಲೆ ಶಂಕೆಯಲ್ಲಿ ದೂರು ನೀಡಲಾಗಿದೆ.

ಉದಯ್ ಅವರ ಪುತ್ರಿ ಸೌಂದರ್ಯ(21) ಮತ್ತು ಐಶ್ವರ್ಯ (19)  ಮೃತರು ಎಂದು ಗುರುತಿಸಲಾಗಿದೆ.

ಉದಯ್ ಅವರಿಗೆ ನಾಲ್ವರು ಪುತ್ರಿಯರಿದ್ದು, ಈ ಪೈಕಿ ಎರಡನೇ ಮಗಳು ತುಮಕೂರಿನಲ್ಲಿ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಲಾಗಿದ್ದು, ಇದಾದ 17 ದಿನಗಳಲ್ಲಿ ಹಿರಿಯ ಮಗಳೂ ಹೊಸನಗರದ ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಪುತ್ರಿಯರು ಪಿಯುಸಿ ಹಾಗು ಎಸ್ಸೆಸೆಲ್ಸಿಯಲ್ಲಿ ಓದುತ್ತಿದ್ದಾರೆ.

ಸೌಂದರ್ಯ ಪತ್ರಿಕೋದ್ಯಮ ವಿದ್ಯಾರ್ಥಿ

ಹಿರಿಯ ಮಗಳು ಸೌಂದರ್ಯ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಓದುತ್ತಿದ್ದು, ಈ ಕಾರಣಕ್ಕಾಗಿಯೇ ಮದವೆಯಾಗಲು ನಿರಾಕರಿಸಿದ್ದರು ಎನ್ನಲಾಗಿದ್ದು, ಬಳಿಕ ಈಕೆಯ ತಂಗಿ ಐಶ್ವರ್ಯಾಗೆ ಕಳೆದ ವರ್ಷ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಾವೇರಿಪುರ ನಿವಾಸಿ ನಾಗರಾಜು ಎಂಬಾತನಿಗೆ ಮದುವೆ ಮಾಡಲಾಗಿತ್ತು. ನಾಗರಾಜು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರು ತುಮಕೂರು ನಗರದ ಸರಸ್ವತಿಪುರಂನಲ್ಲಿ ವಾಸವಾಗಿದ್ದರು.

ಹಿರಿಯ ಮಗಳು ಸೌಂದರ್ಯಗೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಾಡಿಗ್ಗೇರಿ ನಿವಾಸಿ ಉಮೇಶ್ ಎಂಬಾತನನ್ನು ಕುಟುಂಬದ ಹಿರಿಯರ ವಿರೋಧದ ನಡುವೆ 2020ರ ನವೆಂಬರ್‌ನಲ್ಲಿ ಮದುವೆ ಆಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಜೂ.8ರಂದು ಐಶ್ವರ್ಯ ಸಾವು

2021ರ ಜೂ.8ರಂದು ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡನೇ ಮಗಳು ಐಶ್ವರ್ಯಳ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ಕೊಡುತ್ತಿದ್ದರು. ಐಶ್ವರ್ಯಳನ್ನು ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಪಾಲಕರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜೂ. 25ಕ್ಕೆ ಸೌಂದರ್ಯ ಸಾವು

ಜೂ. 25ರಂದು ಸೌಂದರ್ಯ ಕೂಡ ತನ್ನ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮಗಳ ಸಾವಿನಿಂದ ಆಕ್ರೋಶಗೊಂಡ ಆಕೆಯ ಪಾಲಕರು ಆಕೆಯ ಪತಿ ಉಮೇಶನ ಮನೆ ಬಳಿಯೇ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದರು. ಅಲ್ಲದೆ ಸೂಕ್ತ ರಕ್ಷಣೆಗಾಗಿ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಫ್ಯಾನ್ ಹುಕ್‌ಗೆ ನೇತು ಹಾಕಿದ್ದಾರೆ ಎಂದು ಮೃತಳ ತಂದೆ ಉದಯ್ ಆರೋಪಿಸಿದ್ದು, ಮಗಳ ಸಾವಿಗೆ ಉಮೇಶ್, ಆತನ ತಂದೆ ಪಾಂಡುರಂಗ, ತಾಯಿ ಶಾಂತಮ್ಮ, ಸಹೋದರಿ ರೂಪಾ ಕಾರಣ. ಬೇರೆ ಜಾತಿ ಎಂಬ ಕಾರಣಕ್ಕೆ ನನ್ನ ಮಗಳಿಗೆ ಹಿಂಸೆ ನೀಡಿದ್ದಾರೆ. ಅಲ್ಲದೆ ಉಮೇಶ್ ನಿಗೆ ಬೇರೊಂದು ಮದುವೆ ಮಾಡಲು ಯೋಜನೆ ಮಾಡಿದ್ದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X