Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಂಪೇಗೌಡ ಜಯಂತಿಯನ್ನು ಮುಂದಿನ ವರ್ಷದಿಂದ...

ಕೆಂಪೇಗೌಡ ಜಯಂತಿಯನ್ನು ಮುಂದಿನ ವರ್ಷದಿಂದ 3 ದಿನ 'ಬೆಂಗಳೂರು ಹಬ್ಬ'ವಾಗಿ ಆಚರಣೆ: ಡಿಸಿಎಂ ಅಶ್ವತ್ಥನಾರಾಯಣ

''ಫೆಬ್ರವರಿಯಲ್ಲಿ 108 ಅಡಿ ಎತ್ತರದ ನಾಡಪ್ರಭು ಲೋಹ ಪ್ರತಿಮೆ ಅನಾವರಣ''

ವಾರ್ತಾಭಾರತಿವಾರ್ತಾಭಾರತಿ27 Jun 2021 6:00 PM IST
share
ಕೆಂಪೇಗೌಡ ಜಯಂತಿಯನ್ನು ಮುಂದಿನ ವರ್ಷದಿಂದ 3 ದಿನ ಬೆಂಗಳೂರು ಹಬ್ಬವಾಗಿ ಆಚರಣೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಜೂ. 27: `ಮುಂದಿನ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ `ಬೆಂಗಳೂರು ಹಬ್ಬ'ವನ್ನಾಗಿ ಆಚರಿಸಲಾಗುವುದು' ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ಪ್ರಕಟಿಸಿದ್ದಾರೆ.

ರವಿವಾರ ನಾಡಪ್ರಭು ಕೆಂಪೇಗೌಡರ ಜಯಂತಿ ನಿಮಿತ್ತ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಚೆ ಲಕೋಟೆ ಲೋಕಾರ್ಪಣೆ ಹಾಗೂ ಅಧ್ಯಯನ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ಜೂ.27ರಂದು ನಾಡಪ್ರಭು ಜಯಂತಿಯನ್ನು ಆಚರಿಸಲಾಗುತ್ತದೆ. 3 ದಿನಗಳ ಕಾಲ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ `ಬೆಂಗಳೂರು ಹಬ್ಬ'ದ ಹೆಸರಿನಲ್ಲಿ ಆಚರಿಸಲಾಗುವುದು. ಆ 3 ದಿನ ನಗರದಲ್ಲಿನ ಎಲ್ಲ ಪಾರಂಪರಿಕ ತಾಣ, ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ವಿಶ್ವವಿಖ್ಯಾತ ಹಬ್ಬದ ಮಾದರಿಯಲ್ಲಿ ಆಚರಿಸಲಾಗುವುದು ಎಂದು ಹೇಳಿದರು.

ಮುಂದಿನ ವರ್ಷ ಲೋಕಾರ್ಪಣೆ: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಪಾರ್ಕ್ ನಡುವೆ ಸ್ಥಾಪನೆಯಾಗುತ್ತಿರುವ 108 ಅಡಿ ಎತ್ತರದ ಲೋಹ ಪ್ರತಿಮೆ ಲೋಕಾರ್ಪಣೆ ಮುಂದಿನ ವರ್ಷದ ಫೆಬ್ರವರಿ ಅಥವಾ ಮಾರ್ಚ್‍ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ.ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ವರ್ಷದ ಜಯಂತಿ ದಿನವೇ ಪ್ರತಿಮೆ ಲೋಕಾರ್ಪಣೆ ಆಗಬೇಕಿತ್ತು. ಕೋವಿಡ್ ಕಾರಣದಿಂದ ತಡವಾಯಿತು. ಈಗಾಗಲೇ ನೋಯಿಡಾದಲ್ಲಿ ಪ್ರತಿಮೆ ಭರದಿಂದ ತಯಾರಾಗುತ್ತಿದೆ. ಏರ್ಪೋರ್ಟ್ ನಲ್ಲೂ ಕಾಮಗಾರಿ ಪುನರ್ ಆರಂಭವಾಗಿದೆ. ಈ ಯೋಜನೆ ಕಾರ್ಯಗತವಾದ ಮೇಲೆ ಅದು ಬೆಂಗಳೂರಿನ ದೊಡ್ಡ ಹೆಗ್ಗುರುತಾಗಿ ಕಾಣಲಿದೆ ಎಂದು ಅವರು ವಿವರಿಸಿದರು.

ಪ್ರವಾಸೋದ್ಯಮ ಸರ್ಕ್ಯೂಟ್: ಬೆಂಗಳೂರು ನಗರದ ಸುತ್ತಮುತ್ತ ಈಗಲೂ 15 ಸಾವಿರ ಹೆಕ್ಟೇರ್ ದಟ್ಟ ಅರಣ್ಯವಿದೆ. ಅದರ ಜತೆಗೆ ರಾಜಧಾನಿಯ ಸುತ್ತಮುತ್ತಲಿನಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ 46 ಪಾರಂಪರಿಕ ತಾಣಗಳಿವೆ. ಇವೆಲ್ಲವನ್ನೂ ಅನುಸಂಧಾನಗೊಳಿಸಿ ಒಂದು ಬೃಹತ್ತಾದ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಮಾಡಲು ಉದ್ದೇಶಿಸಲಾಗಿದೆ. ಈ ಮೂಲಕ ಕೆಂಪೇಗೌಡರ ಬಗ್ಗೆ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇನ್ನೆರಡು ವರ್ಷದೊಳಗೆ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಉಳಿದಂತೆ ಕೆಂಪೇಗೌಡರು ಐಕ್ಯರಾಗಿರುವ, ಅವರ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದು ಭೂಸ್ವಾಧೀನ ನಡೆಯುತ್ತಿದೆ. ಮುಂದಿನ ವರ್ಷದ ಜಯಂತಿ ಕಾರ್ಯಕ್ರಮವನ್ನು ನಾಡಪ್ರಭುಗಳ ವೀರ ಸಮಾಧಿ ಮುಂದೆ ಆಚರಿಸುವ ಸಂಕಲ್ಪ ಸರಕಾರದ್ದಾಗಿದೆ ಎಂದು ಅವರು ನುಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜ್ಞಾನಭಾರತಿಯಲ್ಲಿ ನಿರ್ಮಾಣ ಆಗುತ್ತಿರುವ ಕೆಂಪೇಗೌಡ ಅಧ್ಯಯನ ಕೇಂದ್ರದ ನಿರ್ಮಾಣ ಕಾಮಗಾರಿಗೆ ವರ್ಚುಯಲ್ ಮೂಲಕ ಚಾಲನೆ ನೀಡಿ, ನಾಡಪ್ರಭುಗಳ ಅಂಚೆ ಲಕೋಟೆಯನ್ನು ಲೋಕಾರ್ಪಣೆ ಮಾಡಿದರು. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಡೆಯುತ್ತಿರುವ ಸೆಂಟ್ರಲ್ ಪಾರ್ಕ್-ಕೆಂಪೇಗೌಡ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿಯ ವಿಡಿಯೋ ಹಾಗೂ ಅಧ್ಯಯನ ಕೇಂದ್ರದ ಪ್ರಾತ್ಯಕ್ಷಿಕೆಯನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ಆದಿಚುಂನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿ, ಬ್ರಹ್ಮಗುಂಡ ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮಿ, ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಕೆ.ಸಿ.ನಾರಾಯಣಗೌಡ, ಗೋಪಾಲಯ್ಯ, ಶಾಸಕರಾದ ಎಸ್.ಆರ್.ವಿಶ್ವನಾಥ್, ಮಂಜುನಾಥ್, ರಿಜ್ವಾನ್ ಅರ್ಶದ್, ವೈ.ಎ.ನಾರಾಯಣ ಸ್ವಾಮಿ, ಸಂಸದ ಪಿ.ಸಿ.ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X