Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡದ ಹೆಸರುಗಳನ್ನು ಬದಲಾಯಿಸಿದರೆ ಕೇರಳ...

ಕನ್ನಡದ ಹೆಸರುಗಳನ್ನು ಬದಲಾಯಿಸಿದರೆ ಕೇರಳ ಗಡಿ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Jun 2021 9:40 PM IST
share
ಕನ್ನಡದ ಹೆಸರುಗಳನ್ನು ಬದಲಾಯಿಸಿದರೆ ಕೇರಳ ಗಡಿ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

ಮೈಸೂರು,ಜೂ.27: ಕೇರಳ ಸರ್ಕಾರ ಕನ್ನಡದ ಹೆಸರುಗಳನ್ನು ಬದಲಾಯಿಸಿದರೆ ಕೇರಳ ಗಡಿ ಬಂದ್ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ನಗರದ ಆರ್‍ಗೇಟ್ ವೃತ್ತದಲ್ಲಿ ರವಿವಾರ ಮದ್ಯ ಬೆಲೆ ಏರಿಕೆ ಹಿನ್ನಲೆ ಮದ್ಯ ಪ್ರಿಯರ ಬೆಂಬಲಕ್ಕೆ ನಿಂತು ಪ್ರತಿಭಟನೆ ನಡೆಸಿದ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಕೆಲವು ಕನ್ನಡದ ಹೆಸರುಗಳನ್ನು ಬದಲಾಯಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. ಕೇರಳ ಸರ್ಕಾರ ಇದಕ್ಕೆ ಮುಂದಾದರೆ ಕೇರಳದಿಂದ ಕರ್ನಾಟಕ್ಕೆ ಬರಲು ಬಿಡುವುದಿಲ್ಲ. ಕೇರಳ ಗಡಿಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದರು.

ಸರ್ಕಾರ ಮದ್ಯ ಮಾರಾಟ ಮಾಡುವುದನ್ನ ಸಂಪೂರ್ಣ ನಿಲ್ಲಿಸಬೇಕು. ಇಲ್ಲದಿದ್ದರೆ ಕಡಿಮೆ ಬೆಲೆಯಲ್ಲಿ ಮದ್ಯ ನೀಡಬೇಕು. ನಾನು ಮದ್ಯ ಕುಡಿಯೋದಿಲ್ಲ ಆದರೆ ಸಾಂಕೇತಿಕ ಬೆಂಬಲ ನೀಡುತ್ತೇನೆ. ಸರ್ಕಾರ ಮದ್ಯದ ಬೆಲೆ ಕಡಿಮೆ ಮಾಡಿಲಿಲ್ಲ ಅಂದರೆ ಸರ್ಕಾರಕ್ಕೆ ಮದ್ಯ ಅಭಿಷೇಕ ಮಾಡುತ್ತೇವೆ ಎಂದು ಹೇಳಿದರು.

ಒಂದು ತಿಂಗಳ ನಂತರ ಬಿ.ಎಸ್.ಯಡಿಯೂರಪ್ಪ ಸರ್ಕಾರ ಪತನಗೊಳ್ಳಲಿದೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ. ಜೈಲಿಗೆ ಹೋಗಿ ಬಂದ ಮೊದಲ ಸಿಎಂ. ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ. ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ ಪುತ್ಥಳಿ ಇದೆ. ಈ ನಡುವೆ ಮತ್ತೊಂದು ಪುತ್ಥಳಿ ನಿರ್ಮಾಣದ ಅವಶ್ಯಕತೆ ಇಲ್ಲ. ಒಬ್ಬ ಭ್ರಷ್ಟ ಸಿಎಂ ವಿಶ್ವಮಾನವ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡುವುದು ಅಪಮಾನ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು. 

ಎನ್‍ಟಿಎಂಎಸ್ ಸರ್ಕಾರಿ ಹೆಣ್ಣು ಮಕ್ಕಳ ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಒಡೆಯಬಾರದು. ಕನ್ನಡ ಶಾಲೆ ಉಳಿಯಬೇಕು. ನೂರಾರು ವರ್ಷಗಳ ಇತಿಹಾಸ ಇರುವ ಶಾಲೆ ಮುಚ್ಚಲು ಬಿಡುವುದಿಲ್ಲ. ಕನ್ನಡ ಶಾಲೆ ಉಳಿಸಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣ ಮಾಡಲಿ. ಇಲ್ಲದಿದ್ದರೆ ಕರ್ನಾಟಕದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X