ವಾರಾಂತ್ಯ ಕರ್ಫ್ಯೂ ಮುಕ್ತಾಯ: ಸೋಮವಾರದಿಂದ ಖರೀದಿಗೆ ಅವಕಾಶ
ಮಂಗಳೂರು, ಜೂ. 27: ದ.ಕ. ಜಿಲ್ಲೆಯಲ್ಲಿ ಶುಕ್ರವಾರದಿಂದ ರವಿವಾರದವರೆಗೆ ಇದ್ದ ವಾರಾಂತ್ಯ ಕರ್ಫ್ಯೂ ಸೋಮವಾರ ಬೆಳಗ್ಗೆ 7 ಗಂಟೆಗೆ ಮುಕ್ತಾಯಗೊಂಡಿದ್ದು, ನಂತರ ಮಧ್ಯಾಹ್ನ 2 ಗಂಟೆವರೆಗೆ ಎಸಿ ಹೊರತುಪಡಿಸಿ ಎಲ್ಲ ಅಂಗಡಿಗಳು ತೆರೆದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ಚಾಲ್ತಿಯಲ್ಲಿರುತ್ತದೆ. ರಿಕ್ಷಾ ಹಾಗೂ ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಇಬ್ಬರು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story





