ಕಾರ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಕಾರ್ಕಳ: ನಗರ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಗರದ ವಿವಿಧೆಡೆ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಯಿತು.
ಕಾರ್ಕಳ ನಗರ ಠಾಣಾ ವ್ಯಾಪ್ತಿಯ ರಾಣೆಕೆರಿ ಎಂಬಲ್ಲಿ ನಡೆದ ಸಭೆಯಲ್ಲಿ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ನಗರ ಠಾಣೆ ಎಸ್‌ಐ ಮಧು ಮಾಹಿತಿ ನೀಡಿದರು. ಅಪರಾಧ ವಿಭಾಗದ ಎಸ್‌ಐ ದಾಮೋದರ ಕೆ.ಬಿ., ಎಎಸ್‌ಐ ರಾಜೇಶ್ ಉಪಸ್ಥಿತರಿದ್ದರು.
Next Story





