ಪಡುಬಿದ್ರೆ : ಕೊರೋನ ವಾರಿಯರ್ಸ್‍ಗೆ ಪಡಿತರ ಕಿಟ್ ವಿತರಣೆ

ಪಡುಬಿದ್ರಿ : ಕೊರೋನ ಸಂದರ್ಭದಲ್ಲಿ ಸಾಮಾನ್ಯ ಜನರು ಸುರಕ್ಷಿತವಾಗಿರಲು ಶ್ರಮ ವಹಿಸಿದ ವಾರಿಯರ್ಸ್‍ಗಳನ್ನು ಗುರುತಿಸಿ ಗೌರವಿಸುವ ಕೆಲಸ ದೇವರು ಮೆಚ್ಚುವ ಕೆಲಸ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ನುಡಿದರು.
ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶಾ ಕಾರ್ಯಕರ್ತರಿಗೆ, ಎಸ್‍ಎಲ್‍ಆರ್‍ಎಮ್ ಘಟಕದ ಪೌರ ಕಾರ್ಮಿಕರಿಗೆ, ಗೃಹರಕ್ಷಕ ದಳ ಸಿಬ್ಬಂದಿಗಲಿಗೆ ಮೆಸ್ಕಾಂ ಸಿಬ್ಬಂದಿಗಳಿಗೆ ದಿನ ಬಳಕೆಯ ರೇಶನ್ ಕಿಟ್ ಗಳನ್ನು ಹಾಗು ಮಾಸ್ಕ್, ಸ್ಯಾನಿಟ್ಯಸರ್, ಸಾಬೂನು, ಹ್ಯಾಂಡ್ ಗ್ಲೌಸ್‍ಗಳನ್ನು ವಿತರಿಸಿ ಮಾತನಾಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೇನ್, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಾಜ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಹೆಜಮಾಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಕಬೀರ್, ನಿರ್ಮಲ ಹೆಜಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ್ ಸಾಲ್ಯಾನ್, ಕುಸುಮ ಸಾಲ್ಯಾನ್, ಲಿಡಿಯಾ ಪೂರ್ಟಾಡು, ಹೆಜಮಾಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಮುಖಂಡ ಸುಧಾಕರ್ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







