ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು, ಜೂ. 28: `2020-21ನೆ ಸಾಲಿನ ದ್ವಿತೀಯ ಪಿಯುಸಿ ತರಗತಿಗಳ ಫಲಿತಾಂಶಗಳನ್ನು ಜುಲೈ 2ನೆ ವಾರದಲ್ಲಿ ಪ್ರಕಟಿಸಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದಿಲ್ಲಿ ಮಾಹಿತಿ ನೀಡಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಯಾವ ಆಧಾರದಲ್ಲಿ ಘೋಷಣೆ ಮಾಡಬೇಕೆಂಬ ಕುರಿತು 12 ಮಂದಿ ಶಿಕ್ಷಣ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಸಲಹೆಯನ್ನು ಪರಿಶೀಲಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುವುದು' ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಯಾವುದೇ ವಿದ್ಯಾರ್ಥಿಗೆ ಪರೀಕ್ಷೆಯ ಫಲಿತಾಂಶ ಕುರಿತು ಸಂತೃಪ್ತಿ ಇಲ್ಲದೆ ಹೋದಲ್ಲಿ ಮುಂದೆ ಭೌತಿಕವಾಗಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಬಹುದಾಗಿದೆ. ಏಕಮಾನದಂಡದಲ್ಲಿ ಯಾರಿಗೂ ಅನ್ಯಾಯವಾಗದಂತೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೀಡಲಾಗುವುದು ಎಂದು ಸುರೇಶ್ ಕುಮಾರ್ ವಿವರ ನೀಡಿದರು.
Next Story





