Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೌತಿಕ ತರಗತಿ ಆರಂಭಕ್ಕೆ ಕ್ರಿಯಾ ಯೋಜನೆ...

ಭೌತಿಕ ತರಗತಿ ಆರಂಭಕ್ಕೆ ಕ್ರಿಯಾ ಯೋಜನೆ ರೂಪಿಸಲು ಕ್ರಮ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Jun 2021 1:54 PM IST
share
ಭೌತಿಕ ತರಗತಿ ಆರಂಭಕ್ಕೆ ಕ್ರಿಯಾ ಯೋಜನೆ ರೂಪಿಸಲು ಕ್ರಮ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂ. 28: `ಜುಲೈ 1ರಿಂದ 2021-22ನೆ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದರೂ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಆರಂಭವಾಗಿಲ್ಲ. ಮಕ್ಕಳು ಕಲಿಕೆಯಿಂದ ವಂಚಿತರಾಗದಿರಲು ಕ್ರಿಯಾ ಯೋಜನೆಯನ್ನು ರೂಪಿಸಬೇಕೆನ್ನುವುದು ಎಲ್ಲರ ಒಲವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, `ಈ ಕುರಿತು ಶಿಕ್ಷಣ ತಜ್ಞರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಡಾ.ದೇವಿಶೆಟ್ಟಿ ಅವರ ವರದಿಯನ್ನು ಸಭೆಯಲ್ಲಿ ಅವಲೋಕಿಸಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಕಲಿಕೆಯಿಂದ ವಂಚಿತರಾಗದಿರಲು ಕ್ರಿಯಾಯೋಜನೆಯನ್ನು ರೂಪಿಸಬೇಕೆನ್ನುವುದು ಎಲ್ಲರ ಒಲವಾಗಿದೆ. ಕಳೆದ ಸಾಲಿನಲ್ಲಿ ನಾವು ಜಾರಿಗೆ ತಂದ ಯಶಸ್ವಿ ಉಪಕ್ರಮವಾದ ವಿದ್ಯಾಗಮ 2.0 ಅನುಷ್ಠಾನ ಮಾಡಬೇಕೆನ್ನುವುದು ಎಲ್ಲರ ಅಪೇಕ್ಷೆಯಾಗಿದೆ. ಆರೋಗ್ಯ ಇಲಾಖೆ ಹಲವು ಆಯಾಮಗಳನ್ನು ಅವಲೋಕಿಸಿ ಶಾಲೆ ತೆರೆಯಲು ಅನುಮತಿ ನೀಡಬೇಕಾಗುತ್ತದೆ ಎಂದರು.

ಅದಕ್ಕಾಗಿಯೇ, ವಿಷಯ ಪರಿಣಿತರು, ಸರಕಾರದ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಮಕ್ಕಳ ತಜ್ಞರು ಸೇರಿದಂತೆ ಈ ಬಗ್ಗೆ ನಿರಂತರವಾದ ಸಲಹೆಗಳನ್ನು ನೀಡುವ ಶಿಕ್ಷಣ 'ಟಾಸ್ಕ್ ಫೋರ್ಸ್' ರಚನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇನ್ನೆರಡು ಮೂರು ದಿನಗಳಲ್ಲಿ ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ' ಎಂದ ಅವರು, 'ಈ ಸಮಿತಿ ವರ್ಷ ಪೂರ್ತಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಅವಲೋಕಿಸಲಿದೆ. ಕಾಲಕಾಲಿಕ ವರದಿಗಳನ್ನು ಸಲ್ಲಿಸಲಿದೆ. ಇಂದಿನ ಸಂದರ್ಭದಲ್ಲಿ ಕೇಂದ್ರೀಕೃತ ನಿರ್ಧಾರಗಳಿಗಿಂತ ಸ್ಥಳೀಯ ಅವಶ್ಯಕತೆಗೆ ಅನುಗುಣವಾದ ನಿರ್ಧಾರಗಳು ಮುಖ್ಯವಾಗುತ್ತವೆ. ಉದ್ದೇಶಿತ ಟಾಸ್ಕ್ ಫೋರ್ಸ್ ಈ ರೀತಿಯ ನಿರಂತರತೆಗೆ, ಶಿಕ್ಷಣ ಉತ್ತರದಾಯಿತ್ವಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

`ಕಲಿಕೆಯ ಮಟ್ಟವನ್ನು ಅಳೆಯುವುದು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತರಬಹುದಾದ ಸುಧಾರಣೆಗಳನ್ನು ಅವಲೋಕಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಈ ಸಮಿತಿ ನಿರ್ವಹಿಸಲಿದೆ. ಇನ್ನು ಇದೇ ಜುಲೈ ಒಂದರಿಂದ 1ರಿಂದ 10ನೆ ತರಗತಿಗಳ ಮಕ್ಕಳ ಉಪಯೋಗಕ್ಕಾಗಿ `ದೂರದರ್ಶನದ ಚಂದನ ವಾಹಿನಿ'ಯ ಮೂಲಕ ಪಾಠಗಳನ್ನು ನಾವು ಪ್ರಾರಂಭಿಸುತ್ತಿದ್ದೇವೆ. ದೀಕ್ಷಾ ಪೋರ್ಟಲ್‍ನಲ್ಲಿ ಎಲ್ಲ ಪಾಠಗಳ ವಿಡಿಯೋಗಳು, ಆಡಿಯೋಗಳು ಲಭ್ಯವಾಗುವಂತೆ ಮಾಡಿದ್ದೇವೆ. ಸುಮಾರು 22 ಸಾವಿರ ಇ-ಕಂಟೆಂಟ್ ಅಲ್ಲಿ ಲಭ್ಯವಿದೆ' ಎಂದು ಅವರು ಹೇಳಿದರು.

`ಮಕ್ಕಳ ವಾಣಿ-ಯೂ ಟ್ಯೂಬ್ ಚಾನೆಲ್‍ನಲ್ಲಿಯೂ ಪಾಠಗಳು ಲಭ್ಯವಿರಲಿದೆ. ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಿ ಅವರ ಕಲಿಕೆಯನ್ನು ಪರಾಮರ್ಶೆ ಮಾಡಲಿದ್ದಾರೆ. ಕಳೆದ ಸಾಲಿನಲ್ಲಿ ಆದ ಕಲಿಕೆಯ ನಷ್ಟವನ್ನು ಸರಿತೂಗಿಸುವ ಜವಾಬ್ದಾರಿಯನ್ನು ನಾವು ಹೊರಲಿದ್ದೇವೆ. ಕೋವಿಡ್ ಸಮಯದಲ್ಲಿ ವಾರ್ಷಿಕ ಪರೀಕ್ಷೆಯೆನ್ನುವ ಪರಿಕಲ್ಪನೆಯ ಆಚೆಯೂ ನಾವು ಆಲೋಚನೆ ಮಾಡಬೇಕಾಗಿದೆ. ಅದಕ್ಕಾಗಿ, ಈಗಿನಿಂದಲೇ ಶಿಕ್ಷಕರು ಸಿದ್ಧತೆಗಳನ್ನು ಪ್ರಾರಂಭಿಸಿಕೊಳ್ಳಲಿದ್ದಾರೆ. ನಿರಂತರ ಮೌಲ್ಯಮಾಪನ ಈ ಬಾರಿ ಹಿಂದೆಂದಿಗಿಂತಲೂ ಪರಿಣಾಮಕಾರಿಯಾಗಿರಲಿದೆ' ಎಂದು ಸುರೇಶ್ ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X