Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಾಯ ಚಾರಿಟೇಬಲ್ ಟ್ರಸ್ಟ್ ನೆರವು:...

ಸಹಾಯ ಚಾರಿಟೇಬಲ್ ಟ್ರಸ್ಟ್ ನೆರವು: ನೆಲ್ಯಹುದಿಕೇರಿ ಸಂತ್ರಸ್ತರಿಗೆ 15 ಮನೆಗಳ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ28 Jun 2021 4:29 PM IST
share
ಸಹಾಯ ಚಾರಿಟೇಬಲ್ ಟ್ರಸ್ಟ್ ನೆರವು: ನೆಲ್ಯಹುದಿಕೇರಿ ಸಂತ್ರಸ್ತರಿಗೆ 15 ಮನೆಗಳ ನಿರ್ಮಾಣ

ಮಡಿಕೇರಿ, ಜೂ.28: ನೆಲ್ಯಹುದಿಕೇರಿ ಭಾಗದ ಮಳೆಹಾನಿ ಸಂತ್ರಸ್ತರಿಗಾಗಿ ಸಹಾಯ ಚಾರಿಟೇಬಲ್ ಟ್ರಸ್ಟ್ 15 ಮನೆಗಳನ್ನು ನಿರ್ಮಿಸಿದೆ. ಜಾತ್ಯತೀತವಾಗಿ ಎಲ್ಲಾ ಜಾತಿ ಧರ್ಮದ ನಿರಾಶ್ರಿತರಿಗೆ ಆಶ್ರಯ ನೀಡಲು ಟ್ರಸ್ಟ್ ಮುಂದಾಗಿದೆ.

ಕಾವೇರಿ ನದಿ ಹರಿಯುವ ನೆಲ್ಯಹುದಿಕೇರಿ ಭಾಗದಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗುತ್ತಿದ್ದು, ಅನೇಕ ಮನೆಗಳು ಮುಳುಗಡೆಯಾಗುತ್ತವೆ. ನದಿತೀರದ ನಿವಾಸಿಗಳು ಪ್ರವಾಹ ಬಂದಾಗಲೆಲ್ಲಾ ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಗೊಳ್ಳುತ್ತಾರೆ. ಮಳೆ ನಿಂತ ಮೇಲೆ ಮತ್ತೆ ಅದೇ ಮನೆಗಳಲ್ಲಿ ವಾಸ ಮಾಡುತ್ತಾರೆ. ಕಳೆದ ಮೂರು ವರ್ಷಗಳಿಂದ ಮಳೆ ಮತ್ತು ಪ್ರವಾಹದ ತೀವ್ರತೆ ಅತಿಯಾಗಿರುವುದರಿಂದ ಎಲ್ಲಾ ಕುಟುಂಬಗಳು ಶಾಶ್ವತವಾಗಿ ಇಲ್ಲಿಂದ ಸ್ಥಳಾಂತರಗೊಳ್ಳಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. 

ಆದರೆ ಸಂತ್ರಸ್ತರಿಗೆ ಪರ್ಯಾಯ ನಿವೇಶನ ಅಥವಾ ಮನೆಗಳನ್ನು ನೀಡಲು ಇಲ್ಲಿಯವರೆಗೆ ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ಆದ್ದರಿಂದ ಕೆಲವು ದಾನಿಗಳು ಹಾಗೂ ಸಂಘ, ಸಂಸ್ಥೆಗಳು ಮನೆ ಕಳೆದುಕೊಂಡವರ ನೆರವಿಗೆ ಬಂದಿವೆ. ನೆಲ್ಯಹುದಿಕೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎ.ಕೆ.ಹಕೀಂ ಅವರು ನೆಲ್ಯಹುದಿಕೇರಿ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಿಸಲು ಸಮೀಪದಲ್ಲೇ ಇರುವ ಬೆಟ್ಟದ ಕಾಡು ಪ್ರದೇಶದ ತಮ್ಮ ಸ್ವಂತ ಜಮೀನು 1.94 ಎಕರೆಯಷ್ಟನ್ನು ದಾನವಾಗಿ ನೀಡಿದ್ದಾರೆ. 

ಸಹಾಯ ಚಾರಿಟೇಬಲ್ ಟ್ರಸ್ಟ್ ಮನೆ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡು ನೆಲ್ಯಹುದಿಕೇರಿ ಗುತ್ತಿಗೆದಾರ ವಿಜೇಶ್ ಅವರ ಮೂಲಕ 15 ಸುಸಜ್ಜಿತ ಮನೆಗಳನ್ನು ನಿರ್ಮಿಸಿದೆ. ಈ ಭಾಗದ ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್ ಅವರು ತಾವು ಸದಸ್ಯರಾಗಿದ್ದಾಗ ಟ್ರಸ್ಟ್ ನ ಬಡಾವಣೆಗೆ ಕುಡಿಯುವ ನೀರು, ರಸ್ತೆ ಮತ್ತು ವಿದ್ಯುತ್ ವ್ಯವಸ್ಥೆ ಮಾಡಿಸಿ ಕೊಟ್ಟಿದ್ದಾರೆ.

ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ 15 ಮನೆಗಳಿರುವ ಸಹಾಯ ಚಾರಿಟೇಬಲ್ ಟ್ರಸ್ಟ್ ನಿರ್ಮಾಣದ ಬಡಾವಣೆ ಉದ್ಘಾಟನೆಗೆ ಸಜ್ಜಾಗಿದೆ. ಎಲ್ಲಾ ಧರ್ಮೀಯರನ್ನೊಳಗೊಂಡ ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ನದಿ ಪಕ್ಕದಲ್ಲೇ ಇದ್ದ ಕಡುಬಡ ನೈಜ ಫಲಾನುಭವಿಗಳನ್ನೇ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ನ ಪ್ರಮುಖರು ತಿಳಿಸಿದ್ದಾರೆ.

ಉಳಿದ ಸುಮಾರು 40 ಕುಟುಂಬಗಳು ಜಿಲ್ಲಾಡಳಿತದ ಸಹಕಾರ ದೊರೆಯದೆ ಮತ್ತು ಸಂಘ ಸಂಸ್ಥೆಗಳ ನೆರವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿವೆ. ಈ ಬಾರಿಯ ಮಳೆಗೆ ಮತ್ತೆ ಕುಟುಂಬಗಳು ಪ್ರವಾಹಕ್ಕೆ ಸಿಲುಕುವ ಸಾಧ್ಯತೆಗಳಿದೆ.

ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ 15 ಮನೆಗಳನ್ನು ಪರಿಶೀಲಿಸಿದರು. ಕೋವಿಡ್ ಲಾಕ್ ಡೌನ್ ಮುಗಿದ ನಂತರ ಉದ್ಘಾಟಿಸಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಟ್ರಸ್ಟ್ ನ ಪ್ರಮುಖರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X