ಹಿಮಾಚಲ ಪ್ರದೇಶ ಹೈಕೋರ್ಟ್ ಸಿಜೆ ಆಗಿ ಕನ್ನಡಿಗ ರವಿ ಮಳಿಮಠ ನೇಮಕ

ಬೆಂಗಳೂರು, ಜೂ.28: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಕನ್ನಡಿಗ ರವಿ ವಿ. ಮಳಿಮಠ ಅವರನ್ನು ರಾಷ್ಟ್ರಪತಿಗಳ ಆದೇಶದಂತೆ ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಮಾಡಿದೆ.
ಕೇಂದ್ರ ಸರಕಾರದ ಆದೇಶದಂತೆ ಜು.28ರಿಂದ ಕನ್ನಡಿಗ ನ್ಯಾಯಮೂರ್ತಿ ರವಿ ವಿ. ಮಳಿಮಠ ಅವರು ಹಿಮಾಚಲ ಪ್ರದೇಶದ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಆರಂಭಿಸಲಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ ನ್ಯಾ.ರವಿ ಮಳಿಮಠ್ ಅವರನ್ನು ಸಿಜೆಯಾಗಿ ನೇಮಿಸುವ ಕುರಿತು ಫೆಬ್ರವರಿ 12ರಂದು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಇವರು ರಾಜ್ಯ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ.ಎಸ್.ಮಳಿಮಠ್ ಅವರ ಪುತ್ರ. ರವಿ ಮಳಿಮಠ್ ಅವರು 1987ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದರು. 2008ರಲ್ಲಿ ರಾಜ್ಯ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಇವರು, 2010ರಲ್ಲಿ ಪೂರ್ಣಾವಧಿ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.
Next Story





