Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್...

ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪ ಶುದ್ಧ ಸುಳ್ಳು: ಡಾ.ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ28 Jun 2021 6:21 PM IST
share
ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪ ಶುದ್ಧ ಸುಳ್ಳು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಜೂ.28: ‘ಪೆಟ್ರೋಲ್ ಬೆಲೆ ಏರಿಕೆಗೆ ಯುಪಿಎ ಸರಕಾರವೇ ಕಾರಣ ಎಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರವಾದ ವಿಚಾರ. ಕೇಂದ್ರ ಸರಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ. ಕಾಂಗ್ರೆಸ್ 70 ವರ್ಷಗಳಲ್ಲಿ ಮಾಡಿದ ಸಾಲವನ್ನು ಮೋದಿ ಸರಕಾರ 7 ವರ್ಷಗಳಲ್ಲಿ ಮಾಡಿರುವುದೇ ಅವರ ನಿಜವಾದ ಸಾಧನೆ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್.ಹನುಮಂತಯ್ಯ ವ್ಯಂಗ್ಯವಾಡಿದ್ದಾರೆ.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಇತ್ತೀಚೆಗೆ ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಬೆಲೆ ಏರಿಕೆಗೆ ಬಿಜೆಪಿ ಸರಕಾರ ಕಾರಣವಲ್ಲ, ಈ ಹಿಂದಿನ ಯುಪಿಎ ಸರಕಾರ ಕಾರಣ ಎಂದು ಆರೋಪಿಸಿದ್ದಾರೆ ಎಂದರು.

ಬಿಜೆಪಿಯ ಈ ಆರೋಪ ಸತ್ಯಕ್ಕೆ ದೂರವಾದುದ್ದು. ಕಾರಣ, ಕಚ್ಚಾ ತೈಲ ಬೆಲೆ ಆಧಾರದ ಮೇಲೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಗದಿ ಮಾಡುವ ಪ್ರಕ್ರಿಯೆ ಯುಪಿಎ ಸರಕಾರದಿಂದಲೇ ಆರಂಭವಾಗಿದೆ. 2008ರಲ್ಲಿ ಕಚ್ಚಾತೈಲ ಬೆಲೆ 139.10 ಡಾಲರ್ ಇತ್ತು. ಆಗ ದೇಶದಲ್ಲಿ ಪೆಟ್ರೋಲ್ ಬೆಲೆ 50.62 ರೂಪಾಯಿ ಇತ್ತು. 2013ರಲ್ಲಿ ಕಚ್ಚಾತೈಲ ಬೆಲೆ 110.80 ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ 66.09 ರೂಪಾಯಿ ಇತ್ತು. ಆದರೆ 2014ರಲ್ಲಿ ಬಿಜೆಪಿ ಸರಕಾರ ಬಂದ ನಂತರ ಕಚ್ಚಾತೈಲ ಬೆಲೆ 57.33 ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ 72.23 ರೂಪಾಯಿ ಇತ್ತು. 2018ರಲ್ಲಿ ಕಚ್ಚಾತೈಲ ದರ 53.80 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 75.55 ರೂಪಾಯಿ ಆಗಿತ್ತು ಎಂದು ಅವರು ಹೇಳಿದರು.

2020ರಲ್ಲಿ ಕಚ್ಚಾತೈಲ ಬೆಲೆ 51.08 ಡಾಲರ್ ಗೆ ಬಂದಾಗ ಪೆಟ್ರೋಲ್ 86.52 ರೂಪಾಯಿ ಆಗಿತ್ತು. 2021ರಲ್ಲಿ 72.22 ಡಾಲರ್ ಆಗಿದ್ದು ಪೆಟ್ರೋಲ್ ಬೆಲೆ 99.81 ರೂಪಾಯಿ ಆಗಿದೆ. ಕಾಂಗ್ರೆಸ್ ಸರಕಾರ ಕಚ್ಚಾತೈಲ ಬೆಲೆ 139 ಡಾಲರ್ ಇದ್ದಾಗ 50 ರೂಪಾಯಿಗೆ ಪೆಟ್ರೋಲ್ ಮಾರಾಟ ಮಾಡಲಾಗಿತ್ತು, ಆದರೆ ಎನ್‍ಡಿಎ ಅವಧಿಯಲ್ಲಿ ಕಚ್ಚಾತೈಲ ಬೆಲೆ 72 ಡಾಲರ್ ಇದ್ದಾಗ ಪೆಟ್ರೋಲ್ 98 ರೂಪಾಯಿ ಆಗಿದೆ ಎಂದು ಅವರು ವಿವರಿಸಿದರು.

‘2014ರಲ್ಲಿ ಪೆಟ್ರೋಲ್ ಮೇಲೆ ಕೇಂದ್ರ ಸರಕಾರ ಶೇ.9.84 ರಷ್ಟು ತೆರಿಗೆ ಹಾಕಲಾಗಿತ್ತು. ಈಗ ಶೇ.31.90ರಷ್ಟು ತೆರಿಗೆ ಹಾಕಲಾಗುತ್ತಿದೆ. ಡೀಸೆಲ್ ಮೇಲೆ ಆಗಿನ ಸರಕಾರ ಶೇ.3.56ರಷ್ಟು ತೆರಿಗೆ ಹಾಕಿದರೆ ಈಗಿನ ಸರಕಾರ ಶೇ.31.80ರಷ್ಟಕ್ಕೆ ಏರಿಕೆಯಾಗಿದೆ. ಅಲ್ಲಿಗೆ ಡೀಸೆಲ್ ಮೇಲಿನ ತೆರಿಗೆಯನ್ನು 10 ಪಟ್ಟು ಹೆಚ್ಚು ಮಾಡಲಾಗಿದೆ. ಇದರಿಂದ ಮಧ್ಯಮವರ್ಗ, ಕೆಳ ವರ್ಗದವರಿಗೆ ಹೊರೆಯಾಗಿದೆ. ಈ ಮಧ್ಯೆ ಬಿಜೆಪಿ ಸರಕಾರ ಇದಕ್ಕೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಹನುಮಂತಯ್ಯ ತಿರುಗೇಟು ನೀಡಿದರು.

‘ಯುಪಿಎ ಅವಧಿಯಲ್ಲಿ ಪೆಟ್ರೋಲ್ ಬಾಂಡ್‍ಗಳನ್ನು ಮಾರಾಟ ಮಾಡಲಾಗಿತ್ತು. ಈವರೆಗೂ 1.30 ಲಕ್ಷ ಕೋಟಿಯಷ್ಟು ಆಯಿಲ್ ಬಾಂಡ್‍ಗಳನ್ನು ನೀಡಲಾಗಿದೆ. ಇದನ್ನು 2002ರಲ್ಲಿ ವಾಜಪೇಯಿ ಅವರ ಸರಕಾರ ಇದ್ದಾಗ ಆರಂಭಿಸಲಾಗಿತ್ತು. ಆಗಿನ ಎನ್‍ಡಿಎ ಸರಕಾರ 9 ಸಾವಿರ ಕೋಟಿಯಷ್ಟು ತೈಲ ಬಾಂಡ್ ವಿತರಣೆ ಮಾಡಿತ್ತು. ಅದನ್ನೇ ಯುಪಿಎ ಸರಕಾರ ಮುಂದುವರಿಸಿತ್ತು ಎಂದು ಅವರು ಹೇಳಿದರು.

ಇದರ ಬಡ್ಡಿ ಹೊರೆಯನ್ನು ನಾವು ಹೊತ್ತಿದ್ದು, ಹೀಗಾಗಿ ಜನರ ಮೇಲೆ ತೆರಿಗೆ ಹಾಕಲಾಗಿದೆ ಎಂದು ಹೇಳುತ್ತಿದ್ದಾರೆ. ಇದು ನಿಜವೇ ಆಗಿದ್ದರೆ ಕೇಂದ್ರ ಸರಕಾರ ಈ ಹೊರೆ ನಿಭಾಯಿಸಲು ಎಷ್ಟು ಹಣ ಖರ್ಚು ಮಾಡಿದೆ ಎಂಬ ಲೆಕ್ಕ ನೀಡಬೇಕು. ಆವರೆಗೂ ತೈಲ ಬಾಂಡ್‍ಗಳನ್ನು ವಾಪಸ್ ಮಾಡಿರುವುದು ಕೇವಲ ಮೂರೂವರೆ ಸಾವಿರದಷ್ಟು ಮಾತ್ರ ಎಂದು ಅವರು ಹೇಳಿದರು.

‘ಕೇಂದ್ರ ಸರಕಾರ ಇತರೆ ಮೂಲಗಳಿಂದ ಸಂಗ್ರಹಿಸಬೇಕಾದ ತೆರಿಗೆ ಪ್ರಮಾಣ ಕಡಿಮೆಯಾಗಿದ್ದು, ಇದನ್ನು ಸರಿದೂಗಿಸಲು ಪೆಟ್ರೋಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡುತ್ತಿದೆ. ಕಳೆದ ಏಳು ವರ್ಷಗಳಿಂದ ಕೇಂದ್ರ ಸರಕಾರ 20 ಲಕ್ಷ ಕೋಟಿ ರೂ.ತೆರಿಗೆ ಸಂಗ್ರಹಿಸಿದೆ. ಇದು ಕರ್ನಾಟಕದ 10 ವರ್ಷಗಳ ಬಜೆಟ್ ಆಗಿದೆ. ಪ್ರಧಾನಮಂತ್ರಿಗಳು ಹಾಗೂ ಅವರ ಮಂತ್ರಿಗಳು ಹೀಗೆ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುವುದರಲ್ಲಿ ನಿಸ್ಸೀಮರು’ ಎಂದು ಹನುಮಂತಯ್ಯ ಕಿಡಿಗಾರಿದರು.

‘ಕಾಂಗ್ರೆಸ್ ಸರಕಾರ 70 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ.ಸಾಲ ಮಾಡಿತ್ತು. ಆದರೆ ಬಿಜೆಪಿ ಮೋದಿ ಅವರ ಅವಧಿಯಲ್ಲಿ 50 ಲಕ್ಷ ಕೋಟಿ ರೂ.ಸಾಲ ಮಾಡಿದೆ. ಒಂದು ಕಡೆ ಆತ್ಮನಿರ್ಭರ ಭಾರತ ಕಟ್ಟುತ್ತೇವೆ ಎನ್ನುವ ಬಿಜೆಪಿ, ಕಾಂಗ್ರೆಸ್ 70 ವರ್ಷದಲ್ಲಿ ಮಾಡಿದ ಸಾಲವನ್ನು ಬಿಜೆಪಿ 7 ವರ್ಷಗಳಲ್ಲಿ ಮಾಡಿದೆ. ಆತ್ಮನಿರ್ಭರ ಭಾರತ ಎಂಬುದು ಬೋಗಸ್ ಘೋಷಣೆಯಾಗಿದೆ. ಕಾಂಗ್ರೆಸ್ ದೇಶದ ಜನರಿಗೆ ಕೊಂಡುಕೊಳ್ಳಬಹುದಾದ ಬೆಲೆಗೆ ಅಡುಗೆ ಅನಿಲ ಪೂರೈಸಿದೆ. ಆದರೆ ಬಿಜೆಪಿ 7 ವರ್ಷದಲ್ಲಿ ಅಡುಗೆ ಅನಿಲದ ದರ ದುಪ್ಪಟ್ಟು ಮಾಡಿ ಸುಲಿಗೆ ಮಾಡುತ್ತಿದೆ’ ಎಂದು ಅವರು ಹೇಳಿದರು.

‘ಕೋವಿಡ್ ಪಿಡುಗಿನಲ್ಲಿ ಮೃತಪಟ್ಟವರಿಗೆ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲವೆಂದು ಕೇಂದ್ರ ಸರಕಾರ ಹೇಳುತ್ತಿರುವುದು ನಾಚಿಕೆಗೇಡಿನ ವಿಚಾರ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನೀಡಿರುವ ಅಫಿಡವಿಟ್‍ನಲ್ಲಿ, ವಿಪತ್ತು ನಿರ್ವಹಣಾ ನಿಧಿಯಲ್ಲಿ 2,22,184 ಕೋಟಿ ರೂಪಾಯಿ ಮಾತ್ರ ಇದೆ ಎಂದು ಹೇಳಿದೆ ಎಂದು ಹನುಮಂತಯ್ಯ ತಿಳಿಸಿದರು.

ಇದನ್ನು ಕೋವಿಡ್ ಮೃತರಿಗೆ ಪರಿಹಾರವಾಗಿ 4 ಲಕ್ಷ ರೂ.ನೀಡಿದರೆ ದೇಶದ ಇತರೆ ವಿಪತ್ತಿನ ಸಮಯದಲ್ಲಿ ಹಾಗೂ ಸಾರ್ವಜನಿಕರಿಗೆ ನೀಡುವ ಇತರೆ ಪರಿಹಾರ ನೀಡಲು ಹಣ ಉಳಿಯುವುದಿಲ್ಲ ಎಂದು ಹೇಳಿದೆ. ಇನ್ನು ಸಂವಿಧಾನದ 7ನೇ ಶೆಡ್ಯುಲ್‍ನಲ್ಲಿ ಆರೋಗ್ಯ ಕ್ಷೇತ್ರ ರಾಜ್ಯ ಸರಕಾರಗಳ ವ್ಯಾಪ್ತಿಗೆ ಬರುತ್ತದೆ ಎಂದಿದೆ. ಆದರೆ ನಾವು ಕೇಳುತ್ತಿರುವುದು ಪಿಎಂ ಕೇರ್ ಮೂಲಕ ಸಂಗ್ರಹಿಸಲಾದ ದೇಣಿಗೆಯಲ್ಲಿ ಎಷ್ಟು ಖರ್ಚಾಗಿದೆ, ಎಷ್ಟು ಉಳಿದಿದೆ? ಇದರಲ್ಲಿ ಉಳಿದ ಹಣವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಗೆ ಯಾಕೆ ವರ್ಗಾಯಿಸಿ ಪರಿಹಾರ ನೀಡಬಾರದು?’ ಎಂದು ಅವರು ಪ್ರಶ್ನಿಸಿದರು.

‘ಆಂಧ್ರಪ್ರದೇಶದಲ್ಲಿ ಕೋವಿಡ್‍ನಿಂದ ಅನಾಥರಾದ ಮಕ್ಕಳಿಗೆ 10 ಲಕ್ಷ, ಅಸ್ಸಾಂನಲ್ಲಿ ವಾರಿಯರ್ಸ್ ಗಳಿಗೆ 50 ಲಕ್ಷ, ದೆಹಲಿಯಲ್ಲಿ 1 ಕೋಟಿ ಪರಿಹಾರ ನೀಡಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಕೊಟ್ಟಿರೋದು ಕೇವಲ 1 ಲಕ್ಷ ರೂಪಾಯಿ ಮಾತ್ರ. ಆರೋಗ್ಯ ಕ್ಷೇತ್ರ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿದ್ದರೂ ಎಲ್ಲ ರಾಜ್ಯಗಳ ಆರೋಗ್ಯ ಸಚಿವರು ಅಥವಾ ಮುಖ್ಯಮಂತ್ರಿಗಳ ಸಭೆ ಕರೆದು ಎಲ್ಲರೂ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡುವ ಜವಾಬ್ದಾರಿ ಕೇಂದ್ರ ಸರಕಾರದಲ್ಲವೇ? ಈ ಸಮಯದಲ್ಲಿ ರಾಜ್ಯಗಳ ನೆರವಿಗೆ ಕೇಂದ್ರ ಸರಕಾರ ಬರಬೇಕು ಎಂದು ಹನುಮಂತಯ್ಯ ಆಗ್ರಹಿಸಿದರು.

ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ:

‘ದಲಿತರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ಎಲ್ಲರ ಇಚ್ಛೆಯಾದರೂ ಅದರ ಚರ್ಚೆ ಈಗ ಅಪ್ರಸ್ತುತ. ಮುಖ್ಯಮಂತ್ರಿ ಚರ್ಚೆ ಯಾವಾಗ ಬರುತ್ತದೆ ಎಂದರೆ ಚುನಾವಣೆಯಲ್ಲಿ ಪಕ್ಷ ಬಹುಮತ ಗಳಿಸಿದಾಗ ಮಾತ್ರ ಸಿಎಂ ಯಾರಾಗಬೇಕು ಎಂಬ ಚರ್ಚೆ ಬರುತ್ತದೆ. ಕೆ.ಎಚ್.ಮುನಿಯಪ್ಪ ಹಾಗೂ ಬಿ.ಕೆ.ಹರಿಪ್ರಸಾದ್ ಭೇಟಿಯಾಗುತ್ತಲೇ ಇರುತ್ತಾರೆ. ಇವರ ಜತೆ ಪರಮೇಶ್ವರ್ ಅವರು ಕುಶಲೋಪರಿ ಭೇಟಿ ಮಾಡಿದ್ದು, ಅದನ್ನು ದಲಿತ ಸಿಎಂ ಚರ್ಚೆ ಎಂದು ಬಿಂಬಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ದಲಿತರು ಮುಖ್ಯಮಂತ್ರಿ ಆಗುವುದಾದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ. ದಲಿತ ಸಿಎಂ ಚರ್ಚೆ ಎಂಬುದು ಹೊಸ ವಿಚಾರವಲ್ಲ. ಈ ಹಿಂದೆಯೂ ದಲಿತ ಸಿಎಂ ಚರ್ಚೆಗೆ ಬಂದಿತ್ತು. ಆದರೆ ಕಾಲಾವಕಾಶ ಕೂಡಿ ಬಂದಿಲ್ಲ. ಚುನಾವಣೆಗೂ ಮುನ್ನವೇ ಸಿಎಂ ಅಭ್ಯರ್ಥಿ ಘೋಷಿಸಿ ಚುನಾವಣೆಗೆ ಹೋಗುವ ಸಂಸ್ಕೃತಿ ಕಾಂಗ್ರೆಸ್‍ನಲ್ಲಿಲ್ಲ. ಚುನಾವಣೆ ಮುಗಿದ ಬಳಿಕ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಮಾಡಲಿದೆ. ನಮ್ಮ ಅಧ್ಯಕ್ಷರು ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿಎಂ ವಿಚಾರ ಈಗ ಅಪ್ರಸ್ತುತ’ ಎಂದು ಡಾ.ಹನುಮಂತಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X