ನಿರಾಶ್ರಿತರ ಕೇಂದ್ರದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ಅಧಿಕಾರಿ ಬಂಧನ

ಬೆಂಗಳೂರು, ಜೂ.28: ನಿರಾಶ್ರಿತರ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಓರ್ವ ಅಧಿಕಾರಿಯನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಂದ್ರಪ್ಪ (52) ಎಂಬಾತ ಬಂಧಿತ ಅಧಿಕಾರಿ ಎಂದು ಪೊಲೀಸರು ಹೇಳಿದ್ದಾರೆ.
ನಿರಾಶ್ರಿತರ ಕೇಂದ್ರದಲ್ಲಿ ಮಹಿಳೆ ಕೆಲಸ ಮಾಡುವ ಸ್ಥಳಕ್ಕೆ ಹೋಗುತ್ತಿದ್ದ ಚಂದ್ರಪ್ಪ, ಅಲ್ಲಿದ್ದ ಇತರೆ ನೌಕರರನ್ನು ಹೊರಗೆ ಕಳುಹಿಸುತ್ತಿದ್ದರು. ಮಹಿಳೆಯನ್ನು ಮಾತ್ರ ಕೊಠಡಿಯಲ್ಲಿ ಇರಿಸಿಕೊಂಡು ಅಸಭ್ಯವಾಗಿ ವರ್ತಿಸಿ, ದೌರ್ಜನ್ಯವೆಸಗುತ್ತಿದ್ದರು ಎಂದು ಆರೋಪಿಸಿ ನೀಡಿದ ದೂರಿನ್ವಯ ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story





