Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣದ ನುಹ್ ಜಿಲ್ಲೆಯಲ್ಲಿ ಬಲವಂತದ...

ಹರ್ಯಾಣದ ನುಹ್ ಜಿಲ್ಲೆಯಲ್ಲಿ ಬಲವಂತದ ಮತಾಂತರ ಕುರಿತು ಸಿಟ್ ತನಿಖೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ28 Jun 2021 8:47 PM IST
share
ಹರ್ಯಾಣದ ನುಹ್ ಜಿಲ್ಲೆಯಲ್ಲಿ ಬಲವಂತದ ಮತಾಂತರ ಕುರಿತು ಸಿಟ್ ತನಿಖೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ,ಜೂ.28: ಹರ್ಯಾಣದ ನುಹ್ ಜಿಲ್ಲೆಯಲ್ಲಿ ಹಿಂದುಗಳ ಬಲವಂತದ ಮತಾಂತರ ಆರೋಪಗಳ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಸಿಟ್)ವನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರಾಕರಿಸಿತು.

ಕ್ಷಮಿಸಿ, ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿದಾರರ ಪರ ವಕೀಲ ವಿಕಾಸ ಸಿಂಗ್ ಅವರಿಗೆ ತಿಳಿಸಿತು.
 
ಅರ್ಜಿದಾರರ ಪೈಕಿ ಇಬ್ಬರು ನುಹ್ ಜಿಲ್ಲೆಗೆ ಭೇಟಿ ನೀಡಿದ್ದರು ಮತ್ತು ಕಳೆದ ವರ್ಷದ ಅಕ್ಟೋಬರ್ನಲ್ಲಿ ವಲ್ಲಭಗಡದ ತನ್ನ ಕಾಲೇಜಿನ ಹೊರಗೆ ಗುಂಡಿಗೆ ಬಲಿಯಾಗಿದ್ದ ನಿಕಿತಾ ತೋಮರ್(21) ಕುಟುಂಬ ಸೇರಿದಂತೆ ಜನರನ್ನು ಮುಖತಃ ಮಾತನಾಡಿಸಿದ್ದರು ಎಂದು ಸಿಂಗ್ ಪೀಠಕ್ಕೆ ತಿಳಿಸಿದರು. ವೃತ್ತಪತ್ರಿಕೆಗಳ ವರದಿಗಳ ಆಧಾರದಲ್ಲಿ ಈ ಅರ್ಜಿಯನ್ನು ಅಂಗೀಕರಿಸಬಹುದು ಎಂದು ನಾವು ಭಾವಿಸಿಲ್ಲ ಎಂದು ಪೀಠವು ಹೇಳಿತು.
  
ನಿಕಿತಾ ಹತ್ಯೆ ಆರೋಪಿಗಳ ಪೈಕಿ ತೌಸಿಫ್ ಎಂಬಾತ ತನ್ನನ್ನು ಮದುವೆಯಾಗುವಂತೆ ಆಕೆಯನ್ನು ಬಲವಂತಗೊಳಿಸುತ್ತಿದ್ದ ಎಂದು ಪೊಲೀಸರು ಆರೋಪಿಸಿದ್ದು,ಈ ವರ್ಷದ ಮಾರ್ಚ್ ನಲ್ಲಿ ಫರೀದಾಬಾದಿನ ತ್ವರಿತ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.
   
ನುಹ್ನಲ್ಲಿ ಪ್ರಾಬಲ್ಯ ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ ಜನರಿಂದ ಹಿಂದುಗಳ ಜೀವ, ವೈಯಕ್ತಿಕ ಸ್ವಾತಂತ್ರ ಮತ್ತು ಧಾರ್ಮಿಕ ಹಕ್ಕುಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ವಕೀಲರ ಗುಂಪು ಮತ್ತು ಓರ್ವ ಸಾಮಾಜಿಕ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿಯು ಆರೋಪಿಸಿತ್ತು. ರಾಜ್ಯ ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸರು ತಮ್ಮ ಅಧಿಕಾರಗಳನ್ನು ಚಲಾಯಿಸುವಲ್ಲಿ ವಿಫಲರಾಗಿರುವುದರಿಂದ ಹಿಂದುಗಳು,ವಿಶೇಷವಾಗಿ ಮಹಿಳೆಯರು ಹಾಗೂ ದಲಿತರ ಬದುಕು ಮತ್ತು ಸ್ವಾತಂತ್ರ ಸಂಕಷ್ಟದಲ್ಲಿವೆ ಮತ್ತು ಅವರು ಅಲ್ಲಿಯ ಪ್ರಬಲ ಗುಂಪಿನ ಖಡ್ಗದಲಗಿನಡಿ ಬದುಕುವಂತಾಗಿದೆ ಎಂದು ಪ್ರತಿಪಾದಿಸಿದ್ದ ಅರ್ಜಿಯು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಸಿಬಿಐ ಮತ್ತು ಎನ್ಐಎ ಅಧಿಕಾರಿಗಳನ್ನೊಳಗೊಂಡ ಸಿಟ್ ರಚನೆಗೆ ನಿರ್ದೇಶ ನೀಡುವಂತೆ ಕೋರಿತ್ತು.

ಹಿಂದುಗಳ ಬಲವಂತದ ಮತಾಂತರ, ಅವರ ಆಸ್ತಿಗಳ ಕಾನೂನು ಬಾಹಿರ ಮಾರಾಟ, ಹಿಂದು ಮಹಿಳೆಯರು ಮತ್ತು ಬಾಲಕಿಯರ ವಿರುದ್ಧದ ದೌರ್ಜನ್ಯಗಳು,ಸರಕಾರಿ ಭೂಮಿಯ ಅತಿಕ್ರಮಣ,ಪ್ರದೇಶದಲ್ಲಿಯ ದೇವಸ್ಥಾನಗಳು, ಧಾರ್ಮಿಕ ಸ್ಥಳಗಳು ಮತ್ತು ರುದ್ರಭೂಮಿಗಳ ಸ್ಥಿತಿಗತಿಗಳ ಬಗ್ಗೆಯೂ ಸಿಟ್ ತನಿಖೆ ನಡೆಯಬೇಕು ಎಂದು ಅರ್ಜಿಯು ಆಗ್ರಹಿಸಿತ್ತು.
 
2011ರ ಜನಗಣತಿಯಂತೆ ನುಹ್ (ಹಿಂದಿನ ಮೇವಾತ್ ಜಿಲ್ಲೆ)ನ ಒಟ್ಟು ಜನಸಂಖ್ಯೆ 10,89,263 ಆಗಿದ್ದು,ಈ ಪೈಕಿ ಅಂದಾಜು ಶೇ.79.20ರಷ್ಟು ಮುಸ್ಲಿಮರಾಗಿದ್ದರೆ, ಶೇ.20.37ರಷ್ಟು ಹಿಂದುಗಳಾಗಿದ್ದಾರೆ. ಉಳಿದ ಶೇ.0.43 ಜನಸಂಖ್ಯೆಯಲ್ಲಿ ಸಿಕ್ಖರು, ಬೌದ್ಧರು, ಜೈನರು ಮತ್ತಿತರರು ಸೇರಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X