Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೃತೀಯ ಲಿಂಗಿಗಳನ್ನು ಗೌರವಿಸಿ, ಅವರ...

ತೃತೀಯ ಲಿಂಗಿಗಳನ್ನು ಗೌರವಿಸಿ, ಅವರ ಸ್ವಾಭಿಮಾನದ ಬದುಕಿಗೆ ಕೈಜೋಡಿಸೋಣ: ಡಿ.ಕೆ. ಶಿವಕುಮಾರ್

ಡಾ.ಅಕ್ಕೈ ಪದ್ಮಶಾಲಿ ಅವರ ಆತ್ಮಕತೆ ‘ಕರುಣೆಗೊಂದು ಸವಾಲು’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Jun 2021 9:28 PM IST
share
ತೃತೀಯ ಲಿಂಗಿಗಳನ್ನು ಗೌರವಿಸಿ, ಅವರ ಸ್ವಾಭಿಮಾನದ ಬದುಕಿಗೆ ಕೈಜೋಡಿಸೋಣ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.28: ‘ಭೂಮಿಯ ಮೇಲೆ ಹುಟ್ಟಿದ ಎಲ್ಲ ಜೀವಿಗೂ ತಮ್ಮದೇ ಆದ ಗೌರವವಿದೆ. ಹೀಗಿರುವಾಗ ಗಂಡು, ಹೆಣ್ಣು, ತೃತೀಯ ಲಿಂಗಿಗಳು ಎಂಬ ತಾರತಮ್ಯ ಸರಿಯಲ್ಲ. ಎಲ್ಲರನ್ನೂ ಸಮಾನವಾಗಿ ಗೌರವಿಸಬೇಕು. ತೃತೀಯ ಲಿಂಗಿಗಳ ಸ್ವಾಭಿಮಾನದ ಬದುಕಿಗೆ ನಾವೆಲ್ಲರೂ ಕೈಜೋಡಿಸೋಣ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರ ಆತ್ಮಕತೆ ‘ಕರುಣೆಗೊಂದು ಸವಾಲು’ ಪುಸ್ತಕವನ್ನು ಬೆಂಗಳೂರಿನಲ್ಲಿ ಸೋಮವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ನಾನು ಇಲ್ಲಿಗೆ ಬರುವ ಪರಿಸ್ಥಿತಿಯಲ್ಲೇ ಇರಲಿಲ್ಲ. ನಾನು ನಿನ್ನೆ ಬೆಳಗ್ಗೆ ಆರೂವರೆಗೆ ಮನೆ ಬಿಟ್ಟು, ಇಂದು ಬೆಳಗ್ಗೆ ಆರೂವರೆಗೆ ವಾಪಾಸಾಗಿದ್ದೇನೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿ, ಪಕ್ಷದಿಂದ ಪರಿಹಾರ ನೀಡುವ ಕಾರ್ಯಕ್ರಮದಲ್ಲಿದ್ದೆ. ಆ 36 ಕುಟುಂಬಗಳ ಕಥೆ, ಸರಕಾರ, ಅಧಿಕಾರಿಗಳು, ಸೇವೆ ಮಾಡಬೇಕಾದವರು ತೋರಿದ ಪ್ರೀತಿ, ವಾತ್ಸಲ್ಯ, ಮಮಕಾರ ಕೇಳಿದರೆ ನೋವಾಗುತ್ತೆ. ಸದ್ಯದಲ್ಲೇ ನಾನು ಆ ನೋವಿನ ಕಥೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದರು.

ಅಕ್ಕೈ ಪದ್ಮಶಾಲಿ ಅವರು ಆತ್ಮಕಥನದಲ್ಲಿ ಕುಟುಂಬ, ಹೊರಗಿನ ಸಮಾಜ ತಮ್ಮನ್ನು ಯಾವ ರೀತಿ ನೋಡುತ್ತಿತ್ತು, ತಮಗಾದ ಗಾಯಗಳು, ಅನುಭವಿಸಿದ ಯಾತನೆಗಳನ್ನು ವಿವರಿಸಿದ್ದಾರೆ. ಯಾರೇ ಆಗಲಿ ನೋವು ಅನುಭವಿಸದೇ ಸಾಧನೆ ಮಾಡಲಾಗುವುದಿಲ್ಲ. ಕಲ್ಲು ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ನಾನು ಅಧಿಕಾರ ಸ್ವೀಕರಿಸುವಾಗ ಹೇಳಿದ್ದೆ. ಅದೇ ರೀತಿ ಅಕ್ಕೈ ಪದ್ಮಶಾಲಿ ಅವರು ಕೂಡ ಅನೇಕ ಪೆಟ್ಟುಗಳನ್ನು ತಿಂದು ಇಂದು ಈ ಮಟ್ಟಕ್ಕೆ ಬಂದು ನಿಂತಿದ್ದಾರೆ. ಅದಕ್ಕಾಗಿ ನನ್ನಿಂದ ಹಿಡಿದು ಅಮೆರಿಕದ ಅಧ್ಯಕ್ಷರವರೆಗೂ ಎಲ್ಲರೂ ಅವರನ್ನು ಕರೆಯುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಒಂದು ರಾಜಕೀಯ ಪಕ್ಷದ ಅಧ್ಯಕ್ಷನಾಗಿ ನಾನು ನಿಮ್ಮ ಜತೆ ಇದ್ದೇನೆ ಎಂದು ಹೇಳಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮೊದಲು ಮನುಷ್ಯತ್ವ. ಆಮೇಲೆ ಗಂಡು, ಹೆಣ್ಣು, ಬೇರೆ, ಬೇರೆ ವಿಚಾರ ಬರುತ್ತವೆ. ಪ್ರತಿಯೊಬ್ಬರೂ ಒಂದೊಂದು ಜೀವ. ಆ ಜೀವಕ್ಕೆ ನಾವು ಏನು ಗೌರವ ಕೊಡಬೇಕೋ ಅದನ್ನು ಕೊಡಬೇಕು. ನಮ್ಮ ಧರ್ಮದಲ್ಲಿ ಇಲಿಯನ್ನು ಗಣೇಶನ ವಾಹನ, ಕಾಗೆಯನ್ನು ಶನೇಶ್ವರನ ವಾಹನ, ನವಿಲು ಸುಬ್ರಹ್ಮಣ್ಯನ ವಾಹನ ಎಂದು ಪೂಜನೀಯ ಸ್ಥಾನ ನೀಡುತ್ತಾ ಬಂದಿದ್ದೇವೆ ಎಂದು ಅವರು ಹೇಳಿದರು.

ನಮ್ಮ ಊರುಗಳಲ್ಲಿ ಈ ಹಿಂದೆ ದೇವರಿಗೆ ಕೋಣಗಳನ್ನು ಬಲಿ ಕೊಡುತ್ತಿದ್ದರು. ಈಗ ಕುರಿ, ಕೋಳಿ ಕೊಡುತ್ತಾರೆ. ಸಂಸ್ಕೃತದಲ್ಲಿ ಒಂದು ಶ್ಲೋಕ ಇದೆ. ಅದರರ್ಥ, ಈ ದೇವರಲ್ಲೂ ಬಹಳ ತಾರತಮ್ಯ ಇದೆ. ದೇವರು ಬಲಿ ತೆಗೆದುಕೊಳ್ಳುವಾಗ ಹುಲಿ, ಆನೆ, ಸಿಂಹವನ್ನು ಬಲಿ ಪಡೆಯುವುದಿಲ್ಲ. ಕುರಿ, ಮೇಕೆ ಅಥವಾ ಕೋಣವನ್ನು ಮಾತ್ರ ಬಲಿ ತೆಗೆದುಕೊಳ್ಳುತ್ತದೆ. ಬಲಿಷ್ಠವಾಗಿರುವುದನ್ನು ಮುಟ್ಟುವುದಿಲ್ಲ. ಅದೇ ರೀತಿ ಈ ಸಮಾಜದಲ್ಲಿ ನೀವು ಬಲಿ ಆಗಿದ್ದೀರಿ ಎಂದು ಶಿವಕುಮಾರ್ ಹೇಳಿದರು.

ಈ ಹೊಸ ಯುಗದಲ್ಲಿ ಇದನ್ನು ಹೇಗೆ ತಪ್ಪಿಸಬೇಕು? ಈ ವರ್ಗದವರಿಗೆ ಆರ್ಥಿಕ, ಸಾಮಾಜಿಕ, ಮಾನಸಿಕ ಶಕ್ತಿಯನ್ನು ಹೇಗೆ ತುಂಬಬೇಕು ಎಂಬುದರ ಬಗ್ಗೆ ಚಿಂತನೆ ಮಾಡೋಣ. ನೀವೂ ನಾಯಕರಾಗಿ ಬೆಳೆಯಬೇಕು, ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ನಿಮ್ಮ ಧ್ವನಿ ಇರಬೇಕು. ಆ ಬಗ್ಗೆ ಸೂಕ್ತ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ಅವರು ಹೇಳಿದರು. 

ಬೇರೆ ದೇಶಗಳಲ್ಲಿ ತೃತೀಯ ಲಿಂಗಿಗಳ ವಿಚಾರವಾಗಿ ಸಾಕಷ್ಟು ಚರ್ಚೆ ಆಗುತ್ತಿದೆ. 1988ರಲ್ಲಿ ನಾನು ಉತ್ತರ ಕೊರಿಯಾದ ಪೊಗ್ಯೊಂಗ್‍ನಲ್ಲಿ ನಡೆದ ವರ್ಲ್ಡ್ ಯೂಥ್ ಅಂಡ್ ಸ್ಟೂಡೆಂಟ್ ಫೆಸ್ಟಿವಲ್‍ನಲ್ಲಿ ಭಾಗವಹಿಸಿದ್ದೆ. ಅಲ್ಲಿ ಎಲ್ಲ ದೇಶಗಳ ಸಂಸ್ಕೃತಿಯ ಪ್ರದರ್ಶನ ಏರ್ಪಡಿಸಲಾಗಿತ್ತು. ಅಲ್ಲಿ ತೃತೀಯ ಲಿಂಗಿಗಳ ಸಂಸ್ಕೃತಿ ಪ್ರದರ್ಶನ ಅತ್ಯುತ್ತಮ ಎಂದು ಆಯ್ಕೆಯಾಯಿತು ಎಂದು ಶಿವಕುಮಾರ್ ಸ್ಮರಿಸಿದರು.

ಈ ಸಮಾಜದ ಮೂಲ ರಾಮಾಯಣ, ಮಹಾಭಾರತ ಕಾಲದಿಂದಲೂ ಇದೆ. ಅರ್ಜುನ, ಕೃಷ್ಣ ಏನೆಲ್ಲ ರೂಪ ತೊಟ್ಟರು ಎಂಬುದನ್ನು ನೋಡಿದ್ದೇವೆ. ಹೀಗಾಗಿ ನಿಮಗೆ ಯಾವುದೇ ಕೀಳರಿಮೆ ಬೇಡ. ಅಕ್ಕೈ ಪದ್ಮಶಾಲಿ ಅವರು ರಾಜಕೀಯಕ್ಕೆ ಬಂದಿದ್ದು, ಅವರು ನಮ್ಮ ಜತೆ ಇರುತ್ತಾರೆ. ಅವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಸೂಕ್ತ ವೇದಿಕೆಯಲ್ಲಿ ನಾನು ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಗಂಡಿನ ರೂಪ ಕಳೆದುಕೊಂಡು, ಹೆಣ್ಣಿನ ರೂಪ ಹೊತ್ತಿರುವ ಈ ವರ್ಗದವರು ಸಮಾಜ ನೀಡಿರುವ ಕೊಡುಗೆಗಳು ಹಾಗೂ ಮನುಷ್ಯರನ್ನು ಮನುಷ್ಯರನ್ನಾಗಿ ನೋಡುತ್ತಾ ಹೇಗೆ ಸಾಗಬೇಕು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮುನ್ನುಡಿ ನೀಡುತ್ತೇನೆ. ಮಾನವೀಯತೆಯೇ ಒಂದು ಧರ್ಮ. ಅದಕ್ಕೆ ನಾವು ಹೆಚ್ಚಿನ ಗೌರವ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ಈ ಸಮಾಜದವರು ತಮ್ಮ ಕಾಲ ಮೇಲೆ ನಿಂತು ಹೇಗೆ ಜೀವನ ನಡೆಸಬಹುದು ಎಂಬುದರ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಲು ನೀವು ಶಕ್ತಿ ತುಂಬಬೇಕು. ಅವರನ್ನು ರಸ್ತೆಯಲ್ಲಿ ಭಿಕ್ಷೆ ಬೇಡಲು ನಿಲ್ಲಿಸಬಾರದು. ಅವರನ್ನು ಕಂಡರೆ ಸಮಾಜ ಗೌರವ ನೀಡುವಂತಾಗಬೇಕು. ಆ ಬಗ್ಗೆ ನೀವು ಚಿಂತನೆ ಮಾಡಬೇಕು. ಮುಂದೆ ನಾವೆಲ್ಲ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.

ಕರುಣೆಗೆ ನಿಮ್ಮ ಸವಾಲಿನ ಜೊತೆ ನಾವು ನಿಲ್ಲುತ್ತೇವೆ. ನಿಮ್ಮ ರೀತಿಯಲ್ಲೇ ನಮ್ಮದೂ ಬೇರೆ, ಬೇರೆ ಅನೇಕ ನೋವಿನ ಕಥೆಗಳಿವೆ. ಅದನ್ನು ಬರೆಯುತ್ತಾ ಕೂತರೆ ಬೇರೆಯದೇ ಆಗುತ್ತದೆ. ನಾವು ಅದನ್ನು ಸಹಿಸಿಕೊಂಡು, ಭಕ್ತ ಕುಂಬಾರ ಮಣ್ಣು ತುಳಿದಂತೆ, ತುಳಿಸಿಕೊಂಡು, ತುಳಿಸಿಕೊಂಡು ಸಮಾಜಕ್ಕೆ ಒಳ್ಳೆಯದು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ರಂಗಕರ್ಮಿ ಪ್ರಸನ್ನ, ಸಾಮಾಜಿಕ ಹೋರಾಟಗಾರ್ತಿ ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಲೇಖಕ ಡಾ.ಡೊಮಿನಿಕ್, ಹಿರಿಯ ಪತ್ರಕರ್ತ, ಪ್ರಕಾಶಕ ಜಿ.ಎನ್.ಮೋಹನ್, ಶಾಸಕಿ ಸೌಮ್ಯಾರೆಡ್ಡಿ, ಶಾಸಕ ಎ.ಮಂಜು, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X