Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಆಫ್ರಿಕಾದಲ್ಲಿ ಡೆಲ್ಟಾ ಸೋಂಕು...

ದಕ್ಷಿಣ ಆಫ್ರಿಕಾದಲ್ಲಿ ಡೆಲ್ಟಾ ಸೋಂಕು ಪ್ರಕರಣ ತೀವ್ರ ಉಲ್ಬಣ: ನಿರ್ಬಂಧ ಇನ್ನಷ್ಟು ಬಿಗಿಗೊಳಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ28 Jun 2021 9:48 PM IST
share
ದಕ್ಷಿಣ ಆಫ್ರಿಕಾದಲ್ಲಿ ಡೆಲ್ಟಾ ಸೋಂಕು ಪ್ರಕರಣ ತೀವ್ರ ಉಲ್ಬಣ: ನಿರ್ಬಂಧ ಇನ್ನಷ್ಟು ಬಿಗಿಗೊಳಿಸಿದ ಸರಕಾರ

ಜೊಹಾನ್ಸ್ ಬರ್ಗ್, ಜೂ.28: ಕೊರೋನ ವೈರಸ್ ಸೋಂಕಿನ ಜತೆಗೆ, ರೂಪಾಂತರಿತ ವೈರಸ್ ಡೆಲ್ಟಾ ಸೋಂಕು ಪ್ರಕರಣ ಉಲ್ಬಣಗೊಂಡಿರುವುದರಿಂದ ದಕ್ಷಿಣ ಆಫ್ರಿಕಾ ಸರಕಾರ ನಿರ್ಬಂಧಗಳನ್ನು ಇನ್ನಷ್ಟು ಕಠಿಣಗೊಳಿಸಿದೆ. 4ನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು , ಕರ್ಫ್ಯೂ ಜಾರಿಗೊಳಿಸಲಾಗಿದೆ. ಎಲ್ಲಾ ರೀತಿಯ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಸರಕಾರ ಘೋಷಿಸಿದೆ. 

ಹೊಸ ನಿರ್ಬಂಧಗಳು ಮೇ 27ರ ಮಧ್ಯರಾತ್ರಿಯಿಂದ ಮುಂದಿನ 15 ದಿನ ಚಾಲ್ತಿಯಲ್ಲಿರುತ್ತವೆ. ಆ ಬಳಿಕ ಪರಿಸ್ಥಿತಿ ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ರವಿವಾರ ಬಾನುಲಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಸಿರಿಲ್ ರಮಾಫೋಸ ಘೋಷಿಸಿದ್ದಾರೆ. ಅಧ್ಯಕ್ಷರ ಭಾಷಣಕ್ಕೂ ಮುನ್ನ ಹೇಳಿಕೆ ನೀಡಿದ್ದ ಗೃಹ ಇಲಾಖೆ, ರವಿವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಯಲ್ಲಿ ಕೊರೋನ ಸೋಂಕಿಗೆ ಸಂಬಂಧಿಸಿದ ರೋಗದ 15,036 ಹೊಸ ಪ್ರಕರಣ ಹಾಗೂ 122 ಸಾವಿನ ಪ್ರಕರಣ ದಾಖಲಾಗಿದೆ ಎಂದು ಹೇಳಿತ್ತು. 

ಸೋಂಕಿನ ಪ್ರಕರಣಗಳ 60%ಕ್ಕೂ ಅಧಿಕ ಪ್ರಕರಣ ಆರ್ಥಿಕ ಚಟುವಟಿಕೆಯ ಕೇಂದ್ರ ಎನಿಸಿರುವ ಗೌಟೆಂಗ್ ಪ್ರಾಂತ್ಯದಲ್ಲೇ ದಾಖಲಾಗಿರುವುದರಿಂದ ಇಲ್ಲಿ ಹೆಚ್ಚುವರಿ ನಿರ್ಬಂಧ ಜಾರಿಯಾಗಿದೆ. ವ್ಯಾಪಾರದ ಉದ್ದೇಶ, ಅಥವಾ ಹುಟ್ಟೂರಿಗೆ ವಾಪಸಾಗುವವರನ್ನು ಹೊರತುಪಡಿಸಿ, ಈ ನಗರಕ್ಕೆ ಬರುವ ಅಥವಾ ನಗರದಿಂದ ಹೊರಗೆ ಹೋಗುವುದನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ಮೊದಲು ಪತ್ತೆಯಾದ, ಈಗ ಕನಿಷ್ಟ 85 ನಗರಗಳಲ್ಲಿ ಕಂಡುಬಂದಿರುವ ಡೆಲ್ಟಾ ಸೋಂಕು, ಗೌಟೆನ್ ನಲ್ಲಿ  ಸೋಂಕಿನ ಪ್ರಕರಣ ತೀವ್ರಗತಿಯಲ್ಲಿ ಉಲ್ಬಣಗೊಳ್ಳಲು ಮೂಲಕಾರಣವಾಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಎಲ್ಲಾ ರೀತಿಯ ಸಭೆ, ಸಮಾರಂಭಕ್ಕೆ ನಿಷೇಧ ಜಾರಿಯಾಗಿದೆ. ಮಾಸ್ಕ್, ಸುರಕ್ಷಿತ ಅಂತರ ಪಾಲನೆ ಮತ್ತಿತರ ನಿಯಮ ಪಾಲಿಸಿ, 50 ಜನರ ಸೀಮಿತ ಪಾಲ್ಗೊಳ್ಳುವಿಕೆಯಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರೆಸ್ಟಾರೆಂಟ್ ಗಳಲ್ಲಿ ಪಾರ್ಸೆಲ್ ಒಯ್ಯಲು ಮಾತ್ರ ಅವಕಾಶವಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. 14 ದಿನದ ಬಳಿಕ ಪರಿಸ್ಥಿತಿಯನ್ನು ಗಮನಿಸಿ ನಿರ್ಬಂಧ ಮುಂದುವರಿಸಬೇಕೇ ಎಂದು ನಿರ್ಧರಿಸಲಾಗುವುದು. ಆರ್ಥಿಕ ಚಟುವಟಿಕೆಗೆ ಅಡ್ಡಿಯಾಗದ ರೀತಿಯಲ್ಲಿ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಅಧ್ಯಕ್ಷ ರಮಾಫೋಸ್ ಹೇಳಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X