Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮಗಳ ಹೆಸರು ಬದಲಾವಣೆ ಇಲ್ಲ ಎಂದ...

ಗ್ರಾಮಗಳ ಹೆಸರು ಬದಲಾವಣೆ ಇಲ್ಲ ಎಂದ ಮಂಜೇಶ್ವರ ಶಾಸಕ ಅಶ್ರಫ್: ಅಭಿನಂದಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 Jun 2021 4:11 PM IST
share
ಗ್ರಾಮಗಳ ಹೆಸರು ಬದಲಾವಣೆ ಇಲ್ಲ ಎಂದ ಮಂಜೇಶ್ವರ ಶಾಸಕ ಅಶ್ರಫ್: ಅಭಿನಂದಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ

ಬೆಂಗಳೂರು, ಜೂ.29: ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸ್ವಾಗತಾರ್ಹ ಎಂದ ಸಿದ್ದರಾಮಯ್ಯ 

ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಭೌಗೋಳಿಕವಾದ ಗಡಿರೇಖೆಯಿದ್ದರೂ ಎರಡೂ ರಾಜ್ಯಗಳ ನಡುವೆ ಸಾಂಸ್ಕೃತಿಕವಾದ ಅವಿನಾಭಾವ ಸಂಬಂಧ ಇದೆ. ಗಡಿ ಪ್ರದೇಶದಲ್ಲಿ ಕನ್ನಡಿಗರು ಮತ್ತು ಕೇರಳಿಗರು ಸೋದರ-ಸೋದರಿಯರಂತೆ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಕಾಸರಗೋಡಿನ ಸ್ಥಳೀಯ ಸಂಸ್ಥೆಗಳು ಅಲ್ಲಿನ ಕೆಲವು ಹಳ್ಳಿಗಳ ಹೆಸರುಗಳನ್ನು ಕನ್ನಡ ಮತ್ತು ತುಳು ಭಾಷೆಯಿಂದ ಮಲೆಯಾಳಿ ಭಾಷೆಗೆ ಬದಲಾಯಿಸುವ ನಿರ್ಣಯ ಕೈಗೊಂಡಿರುವುದು ವಿಷಾದನೀಯ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

''ಸಾಮಾನ್ಯವಾಗಿ ಗ್ರಾಮಗಳ ಹೆಸರಿನ ಜೊತೆ ಅಲ್ಲಿನ ಸ್ಥಳೀಯರು ಭಾವನಾತ್ಮಕ ಸಂಬಂಧ ಹೊಂದಿರುತ್ತಾರೆ. ಹೆಸರಿನ ಬದಲಾವಣೆಯಿಂದ ತಾಯ್ನಾಡಿನ ಜೊತೆಗಿನ ಅವರ ಕರುಳಬಳ್ಳಿಯ ಸಂಬಂಧವನ್ನು ಕಿತ್ತುಕೊಂಡ ಹಾಗಾಗುತ್ತದೆ. ಹೀಗಿದ್ದರೂ ಕೆಲ ಗುಂಪುಗಳು ಈ ಸಂಬಂಧವನ್ನು ಕಲಕಲು ಪ್ರಯತ್ನಿಸುತ್ತಿರುವುದು ಖೇದಕರ ಸಂಗತಿ. ಮಂಜೇಶ್ವರದ ಕನ್ನಡ ಪ್ರೇಮಿ ಶಾಸಕ ಎ.ಕೆ.ಎಂ.ಆಶ್ರಫ್ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿ ಹೆಸರು ಬದಲಾವಣೆಯ ಪ್ರಸ್ತಾಪ ಇಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹವಾಗಿದೆ''

ಕೇರಳದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ಅವರು ಈ ಬಗ್ಗೆ ತಕ್ಷಣ ಗಮನ ಹರಿಸಿ ಉಭಯ ರಾಜ್ಯಗಳ ನಡುವಿನ ಸಂಬಂಧವನ್ನು ಹಾಳುಗೆಡಹುವ ಪ್ರಯತ್ನವನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಭೌಗೋಳಿಕವಾದ ಗಡಿರೇಖೆಯಿದ್ದರೂ ಎರಡೂ ರಾಜ್ಯಗಳ ನಡುವೆ ಸಾಂಸ್ಕೃತಿಕವಾದ ಅವಿನಾಭಾವ ಸಂಬಂಧ ಇದೆ. ಗಡಿ ಪ್ರದೇಶದಲ್ಲಿ ಕನ್ನಡಿಗರು ಮತ್ತು ಕೇರಳಿಗರು ಸೋದರ-ಸೋದರಿಯರಂತೆ ಸಹಬಾಳ್ವೆ ನಡೆಸುತ್ತಿದ್ದಾರೆ. 1/5#ಕರ್ನಾಟಕ pic.twitter.com/M4U47LmKsn

— Siddaramaiah (@siddaramaiah) June 29, 2021

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ @vijayanpinarayi ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ.
1/4

— H D Kumaraswamy (@hd_kumaraswamy) June 29, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X