Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು...

ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು ಮನೆ ಬಾಗಿಲಿಗೆ ತೆರಳಿ ಪರೀಕ್ಷೆ: ಡಾ. ನವೀನ್ ಚಂದ್ರ

ವಾರ್ತಾಭಾರತಿವಾರ್ತಾಭಾರತಿ29 Jun 2021 5:56 PM IST
share
ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು ಮನೆ ಬಾಗಿಲಿಗೆ ತೆರಳಿ ಪರೀಕ್ಷೆ: ಡಾ. ನವೀನ್ ಚಂದ್ರ

ಮಂಗಳೂರು, ಜೂ. 29: ನಗರ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು ಮನೆ ಬಾಗಿಲಿಗೆ ತೆರಳಿ ಪರೀಕ್ಷೆ ನಡೆಸುವ ವ್ಯವಸ್ಥೆಯನ್ನು ಮಾಡಲಾಗಿದೆ. ವರದಿ ಕೂಡ ಸ್ಥಳದಲ್ಲಿಯೇ ದೊರೆಯಲಿದ್ದು, ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ರೋಗವಾಹ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ ಚಂದ್ರ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ಮಲೇರಿಯಾ ಜ್ವರದ ಲಕ್ಷಣಗಳು ಕಂಡುಬಂದರೆ 9448556872 ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದ ಅವರು, ದ.ಕ. ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸುವಲ್ಲಿ ಒತ್ತು ನೀಡಲಾಗುತ್ತಿದೆ ಎಂದರು.

ಮಳೆಗಾಲ ಆರಂಭವಾಗುತ್ತಿದ್ದಂತೆ ಮಲೇರಿಯಾ, ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ವಿಶೇಷ ಒತ್ತು ನೀಡಬೇಕು. ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಯಾವುದೇ ಜ್ವರ ಬರಲಿ, ಮಲೇರಿಯಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ನಿಂತಿರುವ ಸ್ವಚ್ಛ ನೀರಿನಿಂದಲೇ ಡೆಂಗ್ಯೂ, ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುತ್ತಿದ್ದು, ಇದರ ಬಗ್ಗೆ ಜಾಗರೂಕರಾಗಿರಬೇಕು. ಜ್ವರ, ಮೈ ಕೈ ನೋವು, ಕೀಲು ನೋವು, ತೀವ್ರವಾದ ತಲೆನೋವು, ವಾಕರಿಕೆ ಮತ್ತು ವಾಂತಿ ಇತ್ಯಾದಿ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸಬಾರದು. ಸದ್ಯ ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದ್ದು ಜನತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸುವಲ್ಲಿ ಆದ್ಯತೆ ನೀಡಲಾಗಿದೆ ಎಂದರು.

ಕಳೆದ ವರ್ಷ 1397 ಮಲೇರಿಯಾ ಪ್ರಕರಣ
ಕಳೆದ ವರ್ಷ ದ.ಕ. ಜಿಲ್ಲೆಯಲ್ಲಿ 1397 ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದವು. ಈ ವರ್ಷ ಜೂ.26ರವರೆಗೆ 277 ಪ್ರಕರಣಗಳು ಪತ್ತೆಯಾಗಿವೆ. 10 ವರ್ಷಗಳ ಹಿಂದೆ ಜಿಲ್ಲೆಯಲ್ಲಿ 16 ಸಾವಿರಕ್ಕೂ ಅಧಿಕ ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಬಳಿಕ ಹೆಚ್ಚಿನ ಜಾಗೃತಿ ಕಾರ್ಯದಿಂದಾಗಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಜನತೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಕಳೆದ ವರ್ಷ 239 ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು, ಈ ವರ್ಷ ಇದುವರೆಗೆ 121ಪ್ರಕರಣಗಳು ಕಂಡುಬಂದಿವೆ. ಈ ವರ್ಷ ಯಾವುದೇ ಚಿಕುನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ನಗರ ವ್ಯಾಪ್ತಿಯಲ್ಲಿಯೇ ಡೆಂಗ್, ಮಲೇರಿಯಾ ಪ್ರಕರಣಗಳು ಕಂಡುಬರುತ್ತಿವೆ. ಮಂಗಳೂರು ನಗರದಲ್ಲಿ ಈ ವರ್ಷ 266 ಮಲೇರಿಯಾ ಪ್ರಕರಣ, 24 ಡೆಂಗ್ ಪ್ರಕರಣಗಳು ಪತ್ತೆಯಾಗಿವೆ ಎಂದವರು ವಿವರಿಸಿದರು.

ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಭಂಡಾರಿ ಮಾತನಾಡಿ, ನಿಂತಿರುವ 5 ಎಂಎಲ್ ನೀರಿನಲ್ಲಿಯೂ ಸೊಳ್ಳೆಗಳು ಹುಟ್ಟುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ನೀರುನಿಲ್ಲದಂತೆ ಎಚ್ಚರವಹಿಸಬೇಕು. ಜನ ಜಾಗೃತಿಯಿಂದ ಮಾತ್ರ ಬದಲಾವಣೆ ಸಾಧ್ಯ ಎಂದರು.

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಆರೋಗ್ಯಕರ ಸಮಾಜ ನಿರ್ಮಾಣ ನಮ್ಮ ಜವಾಬ್ದಾರಿ: ಡಾ.ಕುಮಾರ್
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಸ್ತುತ ಕೊರೋನದ ನಡುವೆ ಮಲೇರಿಯಾ, ಡೆಂಗ್  ಭೀತಿ ಉಂಟಾಗಿದೆ. ಜನತೆ ಈ ಬಗ್ಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಈ ಪ್ರಕರಣಗಳು ಇಳಿಮುಖವಾಗುತ್ತಿರುವುದು ಸಮಾಧಾನದ ಸಂಗತಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X