Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ...

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ29 Jun 2021 6:52 PM IST
share
ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜೂ.29: ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಂಗಳವಾರ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಅಥವಾ ಮಂಗಳವಾರ ದಿಲ್ಲಿಗೆ ಪ್ರವಾಸ ಹೋಗಲಿದ್ದು, ಆ ವೇಳೆ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಸಲು ಮನವಿ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಲಸಿಕೆಯೇ ಇಲ್ಲ ಎಂದು ಎಲ್ಲೂ ಹೇಳಿಲ್ಲ. ಒಂದು ದಿನವೂ ಲಸಿಕೆ ಕೊರತೆಯಿಂದ ಲಸಿಕಾಕರಣ ಸ್ಥಗಿತಗೊಂಡಿಲ್ಲ. ಪ್ರತಿ ದಿನ 2 ರಿಂದ 3 ಲಕ್ಷ ಲಸಿಕೆ ನೀಡಲಾಗುತ್ತಿದೆ. ಸುಮಾರು 5 ಲಕ್ಷ ಲಸಿಕೆ ರಾಜ್ಯದಲ್ಲಿ ದಾಸ್ತಾನು ಇದೆ. ಕೇಂದ್ರದಿಂದ ಲಸಿಕೆ ಬಂದ ಕೂಡಲೇ ಹಂಚಿಕೆ ಮಾಡಲಾಗುತ್ತದೆ ಎಂದು ಸುಧಾಕರ್ ಸ್ಪಷ್ಟನೆ ನೀಡಿದರು.

ಮೈಸೂರಿನಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಆದರೆ ಮರಣ ಪ್ರಮಾಣ ಶೇ.3.85ರಷ್ಟು ಇದೆ. ಇದಕ್ಕಾಗಿ ಡೆತ್ ಆಡಿಟ್ ಮಾಡಲಾಗುತ್ತಿದೆ. ದೊಡ್ಡ ಆಸ್ಪತ್ರೆಗಳಲ್ಲಿ ತಂಡ ರಚಿಸಿ ಡೆತ್ ಆಡಿಟ್ ಮಾಡಲು ಸೂಚಿಸಲಾಗಿದೆ. ಪಿರಿಯಾಪಟ್ಟಣ ಹಾಗೂ ಬನ್ನೂರಿನಲ್ಲಿ ಹಾಟ್ ಸ್ಪಾಟ್ ಇದ್ದು, ಅಲ್ಲಿ ಕಂಟೇನ್‍ಮೆಂಟ್ ವಲಯವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುರುತಿಸಿದ 20 ಹಾಟ್ ಸ್ಪಾಟ್‍ಗಳಲ್ಲಿ ಮೂರು ಮೈಸೂರು ಜಿಲ್ಲೆಗೆ ಸೇರಿದೆ. ಆಸ್ಪತ್ರೆ ಕಾವಲ್, ಹನಗೋಡು, ಸಿಎಲ್ ಡಿ ಯಲ್ಲಿ ಕಂಟೇನ್ ಮೆಂಟ್ ವಲಯ ಮಾಡಬೇಕೆಂದು ಸೂಚಿಸಲಾಗಿದೆ. 11 ತಜ್ಞರು ಹಾಗೂ 31 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಜಿಲ್ಲೆಗೆ ನೀಡಿ ಖಾಲಿ ಹುದ್ದೆ ತುಂಬಲಾಗಿದೆ. ಜೊತೆಗೆ ಒಂದು ವರ್ಷ ಸರಕಾರಿ ಕಾರ್ಯನಿರ್ವಹಿಸುವ ಎಂಬಿಬಿಎಸ್ ವೈದ್ಯರ ನೇಮಕಾತಿ ಪೈಕಿ 174 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಈ ವೈದ್ಯರು ಕೆಲಸ ಮಾಡಲಿದ್ದಾರೆ. ಮಕ್ಕಳ ವಿಭಾಗದ ಐಸಿಯು ಬಗ್ಗೆ ಇವರಿಗೆ ತರಬೇತಿ ನೀಡಲಾಗುತ್ತದೆ. ಸಂಭವನೀಯ ಮೂರನೇ ಅಲೆ ಬಂದಾಗ ಮಕ್ಕಳಿಗೆ ಹೆಚ್ಚು ಸೋಂಕು ಬಂದರೆ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕು ಹತೋಟಿಗೆ ಬರುತ್ತಿದೆ. 61ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಲಸಿಕೆ ಸ್ವಲ್ಪ ಕೊರತೆ ಇದ್ದು, ಹೆಚ್ಚು ಲಸಿಕೆ ನೀಡಲು ಕ್ರಮ ವಹಿಸಲಾಗುವುದು. ಮೈಸೂರಿನಲ್ಲಿ ಜಿನೋಮ್ ಸೀಕ್ವೆನ್ಸ್ ಲ್ಯಾಬ್ ಆರಂಭವಾಗಲಿದೆ. ಹೊಸ ವೈರಾಣು, ಡೆಲ್ಟಾ ಪ್ಲಸ್ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಶಿಕ್ಷಣ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಸಭೆ ಬಳಿಕ ಸಚಿವರು ನನಗೂ ತಿಳಿಸಿದ್ದಾರೆ. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ನಲ್ಲಿ ಸಾಮಾನ್ಯ ಪದ್ಧತಿಯಲ್ಲಿ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿಯಾಗುತ್ತಾರೆ. ಇಲ್ಲವಾದರೆ, ವಿರೋಧ ಪಕ್ಷದ ನಾಯಕರೇ ಮುಖ್ಯಮಂತ್ರಿಯಾಗುತ್ತಾರೆ. ಇವೆರಡೇ ಪ್ರತೀತಿಯಲ್ಲಿದೆ ಎಂದು ಸುಧಾಕರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X