ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಹಿರಿಯಡ್ಕ, ಜೂ.29: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ರವಿ ಪೂಜಾರಿ ಎಂಬವರು ಜೂ.28ರಂದು ರಾತ್ರಿ ಪಾಪುಜೆ ಸಮೀಪದ ಪಿಳಿಚಂಡಿ ಬಾಕ್ಯಾರು ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನೇರಂಬಳ್ಳಿ ನಿವಾಸಿ ಅನಂತ ದೇವಾಡಿಗ(65) ಎಂಬವರು ಜೂ.27ರಿಂದ ಜೂ.29ರ ಮಧ್ಯಾವದಿಯಲ್ಲಿ ಕೋಣಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





