ಭಟ್ಕಳ: ದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಚಾಲನೆ ನೀಡಲಯಿತು. ಭಟ್ಕಳ ಎಜ್ಯುಕೇಶನ್ ಟ್ರಸ್ಟನ ಅಧ್ಯಕ್ಷರಾದ ಡಾ. ಸುರೇಶ್ ನಾಯಕ್ ಮಾತನಾಡಿ "ಈ ಕೋವಿಡ್ ಪಿಡುಗನ್ನು ತೊಲಗಿಸಲು ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳುವುದೇ ಅತ್ಯುತ್ತಮ ಪರಿಹಾರ ಕಾರಣ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಿ" ಎಂದು ಕರೆ ನೀಡಿದರು.
ವೈದ್ಯರಾದ ಡಾ. ಪಲ್ಲವಿ ಮಾತನಾಡಿ, ಎಲ್ಲರೂ ಪಾಲಿಸಲೇಬೇಕಾದ ಕೋವಿಡ್ ಮುಂಜಾಗೃತಾ ಕ್ರಮಗಳ ಕುರಿತು ವಿವರಿಸಿ, ಅರಿವು ಮೂಡಿಸುವುದರೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.
ಈ ಸಂಧರ್ಭದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ್, ಪ್ರಾಂಶುಪಾಲರಾದ ಶ್ರೀನಾಥ್ ಪೈ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story





