ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ವೀಕ್ಷಕರ ನೇಮಕ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.30: ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿ ವೀಕ್ಷಕರ ನೇಮಕ ಮಾಡಲಾಗುತ್ತದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವ ನಗರಲದಲ್ಲಿರುವ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, 'ಈ ವಿಚಾರವಾಗಿ ಜಿಲ್ಲಾಧ್ಯಕ್ಷರು, ಶಾಸಕರುಗಳಿಗೆ ಸೂಚನೆ ನೀಡಿದ್ದು, ಅವರ ಅಭಿಪ್ರಾಯ ಪಡೆಯಲಾಗುವುದು. ಒಂದೆರಡು ದಿನಗಳಲ್ಲಿ ವೀಕ್ಷಕರ ನೇಮಕ ಮಾಡಲಾಗುತ್ತದೆ' ಎಂದರು
ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುತ್ತೇನೆ' ಎಂದರು.
'ನಾನು ಕೂಡ ಕೆಲವು ಕಡೆ ಹೋಗುತ್ತೇನೆ. ಅದಕ್ಕೆ ಮೊದಲು ಒಂದಷ್ಟು ವಿಚಾರಗಳನ್ನು ಅಂತಿಮಗೊಳಿಸಲಾಗುವುದು' ಎಂದು ಡಿಕೆಶಿ ತಿಳಿಸಿದರು.
Next Story





