ಉಡುಪಿ ಜಿಲ್ಲೆಯಲ್ಲಿ 149 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜೂ.30: ಜಿಲ್ಲೆಯಲ್ಲಿ ಬುಧವಾರ ಕೊರೋನ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 149ಕ್ಕೇರಿದೆ. ಸತತ ಎರಡನೇ ದಿನವೂ ಜಿಲ್ಲೆಯಲ್ಲಿ ಯಾರೂ ಕೋವಿಡ್‌ಗೆ ಬಲಿಯಾಗಿಲ್ಲ. ದಿನದಲ್ಲಿ 88 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 940 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 149 ಮಂದಿಯಲ್ಲಿ 73 ಮಂದಿ ಪುರುಷರು ಹಾಗೂ 76 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 67, ಕುಂದಾಪುರ ತಾಲೂಕಿನ 52 ಹಾಗೂ ಕಾರ್ಕಳ ತಾಲೂಕಿನ 30 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 15 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 134 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಮಂಗಳವಾರ 88 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,106ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2380 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 66,439 ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,83,236 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆಯಲ್ಲಿದ್ದ ಒಬ್ಬರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈಗ ಒಟ್ಟು ಮೂವರು ಚಿಕಿತ್ಸೆಯಲ್ಲಿದ್ದಾರೆ.
6,107 ಮಂದಿಗೆ ಕೋವಿಡ್ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 6,107 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 5,143 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 964 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 4472 ಮಂದಿ ಮೊದಲ ಡೋಸ್ ಹಾಗೂ 106 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 669 ಮಂದಿ ಮೊದಲ ಡೋಸ್ ಹಾಗೂ 855 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ. ಐವರು ಆರೋಗ್ಯ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 4,17,812 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 1,13,906 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.







