Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಷರತ್ತಿನ ಹೊರತು ಟ್ರಾಯ್‌ನ ಶುಲ್ಕ...

ಒಂದು ಷರತ್ತಿನ ಹೊರತು ಟ್ರಾಯ್‌ನ ಶುಲ್ಕ ಆದೇಶದ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 Jun 2021 10:15 PM IST
share
ಒಂದು ಷರತ್ತಿನ ಹೊರತು ಟ್ರಾಯ್‌ನ ಶುಲ್ಕ ಆದೇಶದ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್

 ಮುಂಬೈ,ಜೂ.30: ಒಂದು ಚಾನೆಲ್‌ನ ದರವು ಗುಚ್ಛದಲ್ಲಿನ ಅತ್ಯಂತ ಹೆಚ್ಚಿನ ದರದ ಚಾನೆಲ್‌ನ ಮೂರನೇ ಒಂದಕ್ಕಿಂತ ಹೆಚ್ಚಿರಬಾರದು ಎಂಬ ಕಳೆದ ವರ್ಷದ ಟ್ರಾಯ್‌ನ ಶುಲ್ಕ ಆದೇಶದಲ್ಲಿನ ಷರತ್ತನ್ನು ರದ್ದುಗೊಳಿಸಿರುವ ಬಾಂಬೆ ಉಚ್ಚ ನ್ಯಾಯಾಲಯವು ಉಳಿದಂತೆ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಬುಧವಾರ ಎತ್ತಿಹಿಡಿದಿದೆ.

ಟಿವಿ ಪ್ರಸಾರಕರ ಪ್ರಾತಿನಿಧಿಕ ಸಂಸ್ಥೆ ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್,ಫಿಲ್ಮ್ ಆ್ಯಂಡ್ ಟೆಲಿವಿಷನ್ ಪ್ರೊಡ್ಯೂಸರ್ಸ್‌ ಗಿಲ್ಡ್ ಆಫ್ ಇಂಡಿಯಾ,ಝೀ ಎಂಟರಟೇನಮೆಂಟ್ ಲಿ. ಮತ್ತು ಸೋನಿ ಪಿಕ್ಚರ್ಸ್ ನೆಟ್‌ವರ್ಕ್‌ನಂತಹ ಹಲವಾರು ಪ್ರಸಾರಕರು ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಅಮ್ಜದ್ ಸಯ್ಯದ್ ಮತ್ತು ಅನುಜಾ ಪ್ರಭುದೇಸಾಯಿ ಅವರ ಪೀಠವು ಈ ತೀರ್ಪನ್ನು ನೀಡಿದೆ.

 2020,ಜ.1ರಂದು ಟ್ರಾಯ್ ಹೊರಡಿಸಿದ್ದ ನೂತನ ಶುಲ್ಕ ನಿಯಮಗಳಂತೆ ನೆಟ್‌ವರ್ಕ್ ಸಾಮರ್ಥ್ಯ ಶುಲ್ಕ (ಎನ್‌ಸಿಎಫ್) ವನ್ನು ತಗ್ಗಿಸಲಾಗಿತ್ತು ಮತ್ತು ಇದು ಬಳಕೆದಾರರಿಗೆ ಲಾಭದಾಯಕವಾಗಿತ್ತು. ಹಿಂದೆ 130 ರೂ.ಗಳಿಗೆ ಎಲ್ಲ ಉಚಿತ ಚಾನೆಲ್‌ಗಳು ಲಭ್ಯವಾಗುತ್ತಿದ್ದು,ಬಳಕೆದಾರರು ಹೆಚ್ಚುವರಿ ಚಾನೆಲ್‌ಗಳನ್ನು ವೀಕ್ಷಿಸಲು ಹೆಚ್ಚಿನ ಹಣವನ್ನು ಪಾವತಿಸಬೇಕಿತ್ತು. ಆದರೆ ನೂತನ ಶುಲ್ಕ ನಿಯಮಗಳಡಿ ಬಳಕೆದಾರರು 130 ರೂ.ಗಳನ್ನು ಪಾವತಿಸಿದರೆ 200 ಚಾನೆಲ್‌ಗಳು ಲಭ್ಯವಾಗುತ್ತಿದ್ದವು. ಪ್ರತಿ ಚಾನೆಲ್‌ನ ಶುಲ್ಕಗಳಲ್ಲಿ ಬದಲಾವಣೆಗಳನ್ನು ಮಾಡಲೂ ಟ್ರಾಯ್ ಆದೇಶಿಸಿತ್ತು.

ನೂತನ ನಿಯಮಗಳು ನಿರಂಕುಶ ಮತ್ತು ಅಸಮಂಜಸವಾಗಿವೆ ಮತ್ತು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರರು ವಾದಿಸಿದ್ದರು.

ಉದ್ಯಮ ಪಾಲುದಾರರು ತೀರ್ಪನ್ನು ಅಧ್ಯಯನ ಮಾಡುವಂತಾಗಲು ಮತ್ತು ತಮ್ಮ ಭವಿಷ್ಯದ ಕ್ರಮವನ್ನು ಕೈಗೊಳ್ಳುವಂತಾಗಲು ಕೆಲಸಮಯ ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಟ್ರಾಯ್‌ಗೆ ನಿರ್ದೇಶಿಸಿ ಕಳೆದ ವರ್ಷದ ಆಗಸ್ಟ್ ಮತ್ತು ಅಕ್ಟೋಬರ್‌ನಲ್ಲಿ ಉಚ್ಚ ನ್ಯಾಯಾಲಯವು ನೀಡಿದ್ದ ಆದೇಶಗಳನ್ನು ವಿಸ್ತರಿಸುವಂತೆ ಅರ್ಜಿದಾರರು ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ತನ್ನ ಆದೇಶಗಳ ಅವಧಿಯನ್ನು ಆರು ವಾರಗಳ ಕಾಲ ವಿಸ್ತರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X