ಕುಂಜೂರು : ವನಮಹೋತ್ಸವ ಕಾರ್ಯಕ್ರಮ

ಪಡುಬಿದ್ರಿ: ಶ್ರೀ ದುರ್ಗಾ ಸೇವಾ ಸಮಿತಿ ಕುಂಜೂರು ಮತ್ತು ಶ್ರೀ ದುರ್ಗಾ ಮಿತ್ರವೃಂದ ಕುಂಜೂರು ಇವರ ಜಂಟಿ ಆಶ್ರಯದಲ್ಲಿ ಈಸ್ಟ್ ವೆಸ್ಟ್ ನರ್ಸರಿ ಪಣಿಯೂರು ಮತ್ತು ವೆಸ್ಟ್ ಕೋಸ್ಟ್ ನರ್ಸರಿ ಮೂಳೂರು ಇವರ ಸಹಯೋಗದೊಂದಿಗೆ ಕುಂಜೂರಿನಲ್ಲಿ ವನಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವಳದಲ್ಲಿ ಹೂವಿನ ಗಿಡಗಳನ್ನು ಈಸ್ಟ್ ವೆಸ್ಟ್ ನರ್ಸರಿ ಮತ್ತು ವೆಸ್ಟ್ ಕೋಸ್ಟ್ ನರ್ಸರಿಯ ಮಾಲಕರಾದ ಎಂ.ಎ. ಮೂಸಾ ಹಾಗೂ ಅನಿಲ್ ಸೋನ್ಸ್ ಅವರು ವಿತರಿಸಿ ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಕೆ. ಎಲ್. ಕುಂಡಂತಾಯ ಮಾತನಾಡಿ, ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ತುಳುನಾಡಿನ ಧಾರ್ಮಿಕ ಕೇಂದ್ರಗಳಲ್ಲಿ ಪರಸ್ಪರ ಸೌಹಾರ್ದ ಮನಸ್ಸುಗಳನ್ನು ಜೋಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಆಶಿಸಿದರು.
ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ದೇವರಾಜ ರಾವ್ ನಡಿಮನೆ, ದೇಗುಲದ ಅರ್ಚಕರಾದ ಚಕ್ರಪಾಣಿ ಉಡುಪ, ರಾಮಕೃಷ್ಣ ಉಡುಪ, ರಘುಪತಿ ಉಡುಪ, ಎಲ್ಲೂರು ಗ್ರಾ. ಪಂ. ಸದಸ್ಯ ಯಶವಂತ ಶೆಟ್ಟಿ, ಉದ್ಯಮಿ ಸತೀಶ್ ಕುಂಡಂತಾಯ, ಶ್ರೀ ದುರ್ಗಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುದರ್ಶನ್ ವೈ. ಎಸ್. ಕೋಶಾಧಿಕಾರಿ ಶ್ರೀವತ್ಸ ರಾವ್, ಜೊತೆ ಕಾರ್ಯದರ್ಶಿ ರಾಕೇಶ್ ಕುಂಜೂರು, ದೇಗುಲದ ಪ್ರಬಂಧಕ ರಾಘವೇಂದ್ರ ಶೆಟ್ಟಿ, ನಾಗರಾಜ ರಾವ್ ಪಣಿಯೂರು, ಶ್ರೀಧರ ಮಂಜಿತ್ತಾಯ, ವಿಶ್ವನಾಥ ಉಡುಪ, ಗೋವಿಂದ ಉಡುಪ, ಗೋವಿಂದ ದೇವಾಡಿಗ, ದಿನೇಶ್ ಕುಂಜೂರು, ಸಾಧು ಶೆಟ್ಟಿ ತೆಂಕರಲಾಕ್ಯಾರು, ಶ್ರೀ ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಪದಾಧಿಕಾರಿಗಳಾದ ಪ್ರಕಾಶ್ ಆಚಾರ್ಯ, ಚರಣ್ ದೇವಾಡಿಗ, ಭಾರ್ಗವ ಕುಂಡಂತಾಯ, ರಾಜ ಶೆಟ್ಟಿ, ರತ್ನಾಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ದುರ್ಗಾ ಸೇವಾ ಸಮಿತಿಯ ಜೊತೆ ಕಾರ್ಯದರ್ಶಿ ರಾಕೇಶ್ ಕುಂಜೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







