Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ಸಿಬ್ಬಂದಿಯ ರೋಗ ನಿರೋಧಕ...

ಕೆಎಸ್ಸಾರ್ಟಿಸಿ ಸಿಬ್ಬಂದಿಯ ರೋಗ ನಿರೋಧಕ ಶಕ್ತಿ ವೃದ್ಧಿಗೆ 'ಸಿಂಹ ಕ್ರಿಯಾ ಯೋಗ'

ವಾರ್ತಾಭಾರತಿವಾರ್ತಾಭಾರತಿ30 Jun 2021 10:28 PM IST
share
ಕೆಎಸ್ಸಾರ್ಟಿಸಿ ಸಿಬ್ಬಂದಿಯ ರೋಗ ನಿರೋಧಕ ಶಕ್ತಿ ವೃದ್ಧಿಗೆ ಸಿಂಹ ಕ್ರಿಯಾ ಯೋಗ

ಬೆಂಗಳೂರು, ಜೂ. 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸಿಬ್ಬಂದಿಗೆ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸಲು ಹಾಗೂ ಶ್ವಾಸಕೋಶವನ್ನು ಕಾಪಾಡಿಕೊಳ್ಳಲು ಈಶಾ ಫೌಂಡೇಶನ್ ಆಶ್ರಯದಲ್ಲಿ `ಸಿಂಹ ಕ್ರಿಯಾ ಯೋಗ' ನಾಳೆ(ಜು.1)ಯಿಂದ ನಡೆಯುವ ಆನ್‍ಲೈನ್ ಕಾರ್ಯಕ್ರಮಕ್ಕೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಚಾಲನೆ ನೀಡಿದರು.

ಬುಧವಾರ ಶಾಂತಿನಗರದಲ್ಲಿರುವ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿವಯೋಗ ಸಿ.ಕಳಸದ, `ನಿಗಮದ ಸಿಬ್ಬಂದಿ ಶ್ರಮಜೀವಿಗಳು. ಹಗಲು-ರಾತ್ರಿಯನ್ನದೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ, ಸಾವಿರಾರು ವರುಷಗಳ ಇತಿಹಾಸವನ್ನು ಹೊಂದಿರುವ ಯೋಗ ಕಾರ್ಯಕ್ರಮವು ದೈಹಿಕ, ಮಾನಸಿಕ ಹಾಗೂ ಭೌತಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ' ಎಂದು ಹೇಳಿದರು.

ಈಶಾ ಫೌಂಡೇಶನ್ ಸದರಿ ಯೋಗ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿಯಾಗಿದ್ದು, ಮನೆಯಲ್ಲಿಯೇ ಮಾಡಬಹುದಾದ ಸರಳ ಕ್ರಿಯೆ ಇದಾಗಿದೆ. ಕಾರ್ಯಕ್ರಮವು ಕನ್ನಡದಲ್ಲಿಯೇ ರೂಪಿಸಲಾಗಿದ್ದು, ಸಿಬ್ಬಂದಿಗಳಿಗೆ ಯಾವುದೇ ಪ್ರಶ್ನೆಗಳಿಗೂ ಕಾರ್ಯಕ್ರಮದ ಕೊನೆಯಲ್ಲಿ ಉತ್ತರಿಸಲಾಗುವುದು. ನಾಳೆಯಿಂದ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಹಾಗೂ ಸಂಜೆ 6 ಗಂಟೆಗೆ 30 ನಿಮಿಷಗಳ ಅವಧಿ ಒಂದು ವಾರ ಕಾಲ ಫೌಂಡೇಷನ್ ಯೋಗ ಹೇಳಿಕೊಡಲಿದೆ' ಎಂದು ಅವರು ತಿಳಿಸಿದರು.

`ಸಂಸ್ಥೆಯ ಎಲ್ಲ ಅಧಿಕಾರಿ/ಸಿಬ್ಬಂದಿಗಳ ವಾಟ್ಸಾಪ್ ಗುಂಪುಗಳಲ್ಲಿ ಕಾರ್ಯಕ್ರಮದ ಯೂಟ್ಯೂಬ್ ಲಿಂಕ್ ಅನ್ನು ರವಾನಿಸಿ, ಸಮಸ್ತ ಸಿಬ್ಬಂದಿಗೂ ಕುಟುಂಬದವರು ಅವರಿಗೆ ಅನುಕೂಲವಾದ ಸಮಯದಲ್ಲಿ ಭಾಗವಹಿಸಿ ಸದರಿ ಕಾರ್ಯಕ್ರಮವನ್ನು  ಸದುಪಯೋಗಪಡಿಸಿಕೊಳ್ಳಬೇಕು. ಕೊವಿಡ್‍ನಿಂದಾಗಿ ಜನರ ಜೀವನಶೈಲಿ ಬದಲಾವಣೆಯಾಗಬೇಕಾಗಿರುವುದು ಅನಿವಾರ್ಯ. ಅದರಲ್ಲಿಯೂ ಯೋಗ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಈಶಾ ಫೌಂಡೇಶನ್ ನಮ್ಮ ಸಿಬ್ಬಂದಿಗಳಿಗಾಗಿ ಸಿದ್ಧಪಡಿಸಿರುವ ಈ ಯೋಗ ಕಾರ್ಯಕ್ರಮವು ಸಿಬ್ಬಂದಿಗಳ ಆರೋಗ್ಯ ಸ್ನೇಹಿ ಉಪಕ್ರಮವಾಗಿದೆ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಫೌಂಡೇಶನ್‍ನ ರಾಧಿಕಾ ಶ್ರೀನಾಥ್, ನಿಗಮದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X