Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಪರಿಹಾರ ನೀಡಲು ಕಮಿಷನ್: ಹೈಕೋರ್ಟ್...

ಕೊರೋನ ಪರಿಹಾರ ನೀಡಲು ಕಮಿಷನ್: ಹೈಕೋರ್ಟ್ ಗೆ ಕಾನೂನು ಸೇವಾ ಪ್ರಾಧಿಕಾರದ ವರದಿ

ವಾರ್ತಾಭಾರತಿವಾರ್ತಾಭಾರತಿ30 Jun 2021 11:50 PM IST
share

ಬೆಂಗಳೂರು, ಜೂ.30: ಕೋವಿಡ್‍ನಿಂದ ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರಕಾರ ಘೋಷಿಸಿರುವ 2 ಸಾವಿರ ರೂಪಾಯಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಬರುವ ಕಾರ್ಮಿಕರಿಂದ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ರೂಪದಲ್ಲಿ ತಲಾ 150 ರಿಂದ 250 ರೂಪಾಯಿವರೆಗೆ ವಸೂಲು ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್‍ಎಲ್‍ಎಸ್‍ಎ) ಹೈಕೋರ್ಟ್‍ಗೆ ವರದಿ ನೀಡಿದೆ.

ಗೃಹ ಕಾರ್ಮಿಕರಿಗೂ ಕೋವಿಡ್ ಪರಿಹಾರ ನೀಡಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕಿ ಅರ್ಜಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಕೆಎಸ್‍ಎಲ್‍ಎಸ್‍ಎ ಈ ಲಿಖಿತ ಮಾಹಿತಿ ಸಲ್ಲಿಸಿದೆ.

ಕಾರ್ಮಿಕರಿಗೆ ನೆರವು ನೀಡಲು ಸರಕಾರ ಘೋಷಿಸಿರುವ ಪ್ಯಾಕೇಜ್ ಪರಿಹಾರ ಹಣ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿರುವ ಕುರಿತು ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಕೆಎಸ್‍ಎಲ್‍ಎಸ್‍ಎಗೆ ಹಲವು ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ರಾಮನಗರ, ಮೈಸೂರು, ಬೆಳಗಾವಿ, ಶಿವಮೊಗ್ಗ ಮತ್ತು ಬೀದರ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳಿಗೆ ಈ ಸಂಬಂಧ ವಿಚಾರಣೆ ನಡೆಸುವಂತೆ ಸೂಚಿಸಿದ್ದೆವು. ಆ ಪ್ರಕಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಪರಿಶೀಲಿಸಿ ವರದಿ ಸಲ್ಲಿಸಿವೆ. ಈ ವೇಳೆ ಕಾರ್ಮಿಕರಿಂದ ಕಮಿಷನ್‍ಗೆ ಬೇಡಿಕೆ ಇಟ್ಟಿರುವುದು ಕಂಡು ಬಂದಿದೆ. ಹೀಗಾಗಿ ಅಸಂಘಟಿತ ವಲಯದ ಕಾರ್ಮಿಕರು ಸರಕಾರದ ನೆರವು ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಅರ್ಜಿ ಸಲ್ಲಿಸುವುದಕ್ಕೆ ಸೂಕ್ತವಾದ ವ್ಯವಸ್ಥೆ ರೂಪಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ವರದಿ ಪರಿಶೀಲಿಸಿದ ಪೀಠ, 2 ಸಾವಿರದಂತಹ ಸಣ್ಣ ಮೊತ್ತದ ಪರಿಹಾರ ಪಡೆಯಲು ಕಾರ್ಮಿಕರು ಈ ಪರಿ ಕಷ್ಟಪಡಬೇಕೇ. ನೋಂದಣಿ ಪ್ರಕ್ರಿಯೆಯೂ ಕ್ಲಿಷ್ಟವಾಗಿದ್ದು, ಅರ್ಹ ಫಲಾನುಭವಿ ಕಾರ್ಮಿಕರು ಸೌಲಭ್ಯದಿಂದ ವಂಚಿತರಾಗುವ ಅಪಾಯವಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಕಾರ್ಮಿಕ ಇಲಾಖೆಯು ಈ ಸಂಬಂಧ ಕೂಡಲೇ ಗಮನಹರಿಸಬೇಕು. ಮುಂದಿನ ವಿಚಾರಣೆ ವೇಳೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದು ವಿವರಣೆ ನೀಡಬೇಕು ಎಂದು ನಿರ್ದೇಶಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X