Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಆರೋಪ : ಉಪ...

ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಆರೋಪ : ಉಪ ವಿಭಾಗ ಅಧಿಕಾರಿಗಳ ಮುಂದೆ ಅರಣ್ಯವಾಸಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 July 2021 5:10 PM IST
share
ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಆರೋಪ : ಉಪ ವಿಭಾಗ ಅಧಿಕಾರಿಗಳ ಮುಂದೆ ಅರಣ್ಯವಾಸಿಗಳ ಆಕ್ರೋಶ

ಭಟ್ಕಳ: ಅರಣ್ಯ ಸಿಬ್ಬಂದಿಗಳಿಂದ ಕಾನೂನು ಬಾಹಿರ, ದೌರ್ಜನ್ಯ, ಕಿರುಕುಳ ನಿಯಂತ್ರಿಸಿ. ಇಲ್ಲದಿದ್ದಲ್ಲಿ ಅರಣ್ಯ ಅತಿಕ್ರಮಣದಾರರ ಸಹನೆಯನ್ನು ಪರೀಕ್ಷಿಸುವುದು ಸೂಕ್ತವಲ್ಲ. ಕಾನೂನು ಉಚ್ಛ ನ್ಯಾಯಾಲಯಗಳ ಮತ್ತು ಮುಖ್ಯಮಂತ್ರಿಗಳ ನಿರ್ದೇಶನವನ್ನು ನಿರ್ಲಕ್ಷಿಸುವ ಅರಣ್ಯ ಅಧಿಕಾರಿ ಗಳ ವಿರುದ್ಧ ಕಾನೂನು ಕ್ರಮ ಜರುಗಲಿ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ. 

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವದ ನೀಯೋಗವು ಇಂದು ಭಟ್ಕಳ ಉಪವಿಭಾಗಾಧಿ ಕಾರಿ ಮಮತಾದೇವಿ ಅವರನ್ನು ಭೇಟಿಯಾಗಿ ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ಕಿರುಕುಳದ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದರು.  

ಅರಣ್ಯ ಹಕ್ಕು ಕಾಯಿದೆ ಉರ್ಜಿತವಿರುವಾಗ ಅರಣ್ಯ ಅತಿಕ್ರಮಣದಾರರ ಮೂಲಭೂತ ಮತ್ತು ಜೀವನಾವಶ್ಯಕ ಕಾರ್ಯಚಟುವಟಿಕೆಗೂ ಅರಣ್ಯ ಸಿಬ್ಬಂದಿಗಳು ಆತಂಕ ಮಾಡುತ್ತಿರುವುದು ಖಂಡನಾರ್ಹ. ಉಚ್ಛ ನ್ಯಾಯಾಲಯವು ಸಹಿತ ಅರಣ್ಯ ವಾಸಿಗಳಿಗೆ ಮಂಜೂರಿ ಪ್ರಕ್ರೀಯೆ ಸಂದರ್ಭ ದಲ್ಲಿ  ಆತಂಕ, ಒಕ್ಕಲೆಬ್ಬಿಸುವ ಕ್ರೀಯೆ ಜರುಗಿಸಬಾರದೆಂಬ ನಿರ್ದೇಶನವೂ ಸಹಿತ ಉಲ್ಲಂಘಿಸಿರುವುದು ಖೇದಕರ ಎಂಬ ವಿಷಯ ಚರ್ಚೆ ಸಂದರ್ಭದಲ್ಲಿ ಪ್ರಸ್ತಾಪಿಸಲಾಯಿತು.

ಜೀವನಾಶ್ಯಕ ಮತ್ತು ಮೂಲಭೂತ ವ್ಯವಸ್ಥೆಗೆ ಆತಂಕ ಪಡಿಸದಂತೆ ನಿರ್ಧೇಶನ ನೀಡಬೇಕೆಂದು ಸಭೆಯಲ್ಲಿ ಅಗ್ರಹಿಸಲಾಯಿತು.
ಇತ್ತೀಚಿಗೆ ಅರಣ್ಯ ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಪಟ್ಟ ಸ್ಥಳಗಳಿಗೆ ಹೋರಾಟಗಾರರ ವೇದಿಕೆಯ ನಿಯೋಗವು ಭೇಟಿಕೊಟ್ಟು ಪರಿಶೀಲನೆ ನಡೆಸಿತು.

ಚರ್ಚೆಯ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಪಾಂಡುರಂಗ ನಾಯ್ಕ, ರಿಝ್ವಾನ್, ಅಬ್ದುಲ್ ಖಯ್ಯೂಂ ಕೋಲಾ, ತಂಝೀಮ್ ಅಧ್ಯಕ್ಷ ಎಸ್.ಎಂ. ಸೈಯ್ಯದ್ ಪರ್ವೆಝ್, ತೌಫಿಕ್ ಬ್ಯಾರಿ, ಮುಖಂಡರಾದ ಇನಾಯತುಲ್ಲಾ ಶಾಬಂದ್ರಿ, ಸೈಯದ್ ಅಲಿ ಮಾಲಿಕಿ, ಫರಿದಾ ಬಾನು, ಕಂಬಳಿ ಆಚಾರಿ, ಮಹಮ್ಮದ ಶಬ್ಬೀರ್, ಸಲೀಂ ಶಬ್ಬೀರ್ ನಥಾರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಅರಣ್ಯವಾಸಿಗಳ ತೀವ್ರ ಆಕ್ರೋಶ: ಅರಣ್ಯವಾಸಿಗಳಿಗೆ ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳದ ಕುರಿತು ಸಾಕ್ಷ್ಯ ಚಿತ್ರ, ವಿಡಿಯೋ, ಪೋಟೋಗಳನ್ನ ಪ್ರದರ್ಶಿಸಿ ಅರಣ್ಯ ಸಿಬ್ಬಂದಿಗಳ ಕಾನೂನು ಬಾಹಿರ ಕೃತ್ಯದ ಕುರಿತು ನೊಂದ ಅರಣ್ಯವಾಸಿಗಳು ಅರಣ್ಯಸಿಬ್ಬಂದಿಗಳ ದುರ್ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರದಲ್ಲಿ ಚರ್ಚೆಗೆ ಅವಕಾಶ: ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ , ಮಾನಸಿಕ ಮತ್ತು ದೈಹಿಕ ಹಿಂಸೆ ಉಂಟಾಗುವ ಹಿನ್ನೆಲೆಯಲ್ಲಿ  ಅರಣ್ಯ ಅಧಿಕಾರಿಗಳಿಂದ ಹೋರಾಟಗಾರರೊಂದಿಗೆ ಅರಣ್ಯ ಅಧಿಕಾರಿಗಳು ಮುಕ್ತ ಚರ್ಚೆಗೆ ಅವಕಾಶ ನೀಡಬೇಕೆಂಬ ನಿಯೋಗದ ಬೇಡಿಕೆಗೆ ಅತೀ ಶೀಘ್ರದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಕ್ತ ಚರ್ಚೆಗೆ ಅವಕಾಶ ಮಾಡಿ ಕೊಡಲಾಗುವುದೆಂದು ಉಪವಿಭಾಗ ಅಧಿಕಾರಿ ಮಮತಾದೇವಿ ಆಶ್ವಾಸನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X