ಜುಲೈ 2ರಂದು ವಿದೇಶಕ್ಕೆ ಪ್ರಯಾಣಿಸುವವರಿಗೆ ಮಾತ್ರ ಲಸಿಕೆ
ಉಡುಪಿ, ಜು.1: ಜಿಲ್ಲೆಯಲ್ಲಿ ಜುಲೈ 2ರಂದು ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್ಎಸ್) ಆಸ್ಪತ್ರೆ ಯಲ್ಲಿ ಜು.7ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (50 ಡೋಸ್) ಲಭ್ಯವಿರುತ್ತದೆ.
ಉಳಿದಂತೆ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಜಿಲ್ಲೆಯಲ್ಲಿ 18ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story