ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ
ಉಡುಪಿ, ಜು.1: ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೇ ಭಾಷೆಗಳ ಪುಸ್ತಕ ಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜುಲೈ 30ರೊಳಗೆ ಕಾಫಿರೈಟ್ ಮಾಡಿಸಿರಬೇಕು. ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಲೇಖಕರು, ಲೇಖಕ ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ಅನುಮತಿ ಪತ್ರದೊಂದಿಗೆ ಪುಸ್ತಕದ ಸಾಫ್ಟ್ ಕಾಫಿಯನ್ನು ಸಿಡಿ ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ - www.dpl.karnataka.gov.in- ಅಥವಾ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





