Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ...

ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರ ಸ್ಮರಣೆಗೆ ಆರೋಗ್ಯ ಸೌಧದಲ್ಲಿ ಸ್ಮಾರಕ: ಸಚಿವ ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ1 July 2021 9:03 PM IST
share
ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರ ಸ್ಮರಣೆಗೆ ಆರೋಗ್ಯ ಸೌಧದಲ್ಲಿ ಸ್ಮಾರಕ: ಸಚಿವ ಸುಧಾಕರ್

ಬೆಂಗಳೂರು, ಜು. 1: `ಕೋವಿಡ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿವರ್ಷ ಸ್ಮರಿಸಲು ಬೆಂಗಳೂರಿನ ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು' ಎಂದು ಹೇಳಿದರು.

ದಿಲ್ಲಿಯಲ್ಲಿ ಸೈನಿಕ ಸ್ಮಾರಕವಿದ್ದು, ಅಲ್ಲಿ ಯೋಧರಿಗೆ ಎಲ್ಲರೂ ಗೌರವ ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲಿ ಸ್ಮಾರಕ ನಿರ್ಮಿಸಿ ಯಾವಾಗಲೂ ಅವರನ್ನು ಸ್ಮರಿಸಬೇಕು. ಈ ಕಷ್ಟ ಕಾಲದಲ್ಲಿ ಶ್ರಮಿಸುತ್ತಿರುವ ಎಲ್ಲ ವೈದ್ಯರಿಗೆ ಸರಕಾರದ ಪರವಾಗಿ ಧನ್ಯವಾದ ಎಂದ ಅವರು, ಅನೇಕ ವರ್ಷಗಳಿಂದ ಭತ್ತೆಗೆ ಹೋರಾಟ ನಡೆದಿತ್ತು. ನಮ್ಮ ಸರಕಾರ ಶೇ.30, 40ರ ವರೆಗೂ ಭತ್ಯೆ ಹೆಚ್ಚಳ ಮಾಡಿದೆ. ಐತಿಹಾಸಿಕವಾಗಿ 1,763 ವೈದ್ಯರನ್ನು ನೇರ ನೇಮಕ ಮಾಡಲಾಗಿದೆ. ಜೊತೆಗೆ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರನ್ನು ನೇಮಿಸಲಾಗಿದೆ. 1 ಸಾವಿರಕ್ಕೂ ಅಧಿಕ ವೈದ್ಯರು ಮೆಡಿಕಲ್ ಕಾಲೇಜುಗಳಿಗೆ ನೇಮಕವಾಗಿದ್ದಾರೆ. ಎಲ್ಲ ಸೇರಿ 4 ಸಾವಿರ ವೈದ್ಯರ ನೇಮಕ ನಡೆದಿದೆ' ಎಂದರು.

ಹಲ್ಲೆ ನಡೆಸಿದರೆ ಜೈಲುವಾಸ: ರೋಗಿಗಳ ಕಡೆಯವರು ವೈದ್ಯರು, ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5ರಿಂದ 7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಡಾ.ಸುಧಾಕರ್ ಎಚ್ಚರಿಕೆ ನೀಡಿದರು.

ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ. ಡಾ.ಬಿ.ಸಿ.ರಾಯ್ ರವರ ದೂರದೃಷ್ಟಿಯಿಂದಾಗಿ ಅನೇಕ ಆಸ್ಪತ್ರೆ ಮೂಲಸೌಕರ್ಯ ಸೃಷ್ಟಿಯಾಗಿದೆ. ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘ' ಎಂದು ಸ್ಮರಿಸಿದರು.

ಹೆಚ್ಚು ವೈದ್ಯರು ಬರುವ ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಸೇವೆ ನೀಡಬೇಕು. ಕಾನೂನು, ಕೋರ್ಟ್ ಆದೇಶದ ಮೂಲಕವೇ ಕಡ್ಡಾಯ ಗ್ರಾಮೀಣ ಸೇವೆ ಮಾಡುವುದಲ್ಲ. ಎಲ್ಲಕ್ಕಿಂತ ದೊಡ್ಡ ಕೋರ್ಟ್ ನಮ್ಮ ಅಂತಃಕರಣ. ಇದೇ ವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಲಸಿಕೆ ಕೊರತೆ ಇದ್ದಲ್ಲಿ ಎರಡೂಕಾಲು ಕೋಟಿ ಜನರಿಗೆ ಲಸಿಕೆ ನೀಡಲು ಹೇಗೆ ಸಾಧ್ಯ? ಕಾಂಗ್ರೆಸ್‍ನವರು ಇದರಲ್ಲಾದರೂ ರಾಜಕೀಯ ಮಾಡುವುದು ನಿಲ್ಲಿಸಲಿ. ಅಂಕಿ-ಅಂಶ ಇದ್ದರೆ ಮಾತ್ರ ಮಾತಾಡಿ. ಇಂದು ಕೋವಿಶೀಲ್ಡ್ 9 ಲಕ್ಷ ಲಸಿಕೆ ಕೇಂದ್ರದಿಂದ ಪೂರೈಕೆಯಾಗುತ್ತಿದೆ. ಉನ್ನತ ಶಿಕ್ಷಣ ತರಗತಿ ಆರಂಭಿಸಬೇಕಿದೆ. ಅದಕ್ಕಾಗಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಜು.5ಕ್ಕೆ ದಿಲ್ಲಿಗೆ ತೆರಳಲಿದ್ದು, ಲಸಿಕೆ ಪೂರೈಕೆ ಬಗ್ಗೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಲಾಗುವುದು'

-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X