Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ...

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ

ವಾರ್ತಾಭಾರತಿವಾರ್ತಾಭಾರತಿ1 July 2021 9:27 PM IST
share
ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ

ಬೆಂಗಳೂರು, ಜು. 1: `ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದೆಂಬ ಎಚ್ಚರವೂ ಇಂದು ಅಗತ್ಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ `ಮಂಗಳೂರು ಸಮಾಚಾರ' ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೆ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ' ಎಂದು ನುಡಿದರು.

`ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಕೋವಿಡ್ 2ನೆ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5ಲಕ್ಷ ರೂ.ಗಳ ನೆರವು ನೀಡಲಾಗಿದೆ' ಎಂದ ಅವರು, `ರಾಜ್ಯ ಸರಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ' ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಿಎಂ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ

ಬೆಂಗಳೂರು, ಜು. 1: `ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದೆಂಬ ಎಚ್ಚರವೂ ಇಂದು ಅಗತ್ಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ `ಮಂಗಳೂರು ಸಮಾಚಾರ' ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೆ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ' ಎಂದು ನುಡಿದರು.

`ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಕೋವಿಡ್ 2ನೆ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5ಲಕ್ಷ ರೂ.ಗಳ ನೆರವು ನೀಡಲಾಗಿದೆ' ಎಂದ ಅವರು, `ರಾಜ್ಯ ಸರಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ' ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಿಎಂ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X