Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯದಲ್ಲಿ...

ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯದಲ್ಲಿ ಹೆಚ್ಚಳ: ಸಚಿವ ಶಿವರಾಮ್ ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ1 July 2021 9:36 PM IST
share
ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯದಲ್ಲಿ ಹೆಚ್ಚಳ: ಸಚಿವ ಶಿವರಾಮ್ ಹೆಬ್ಬಾರ್

ಬೆಂಗಳೂರು, ಜು.1: ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಹೆಚ್ಚಳ ಮಾಡಲಾಗಿದ್ದು, ಪಿಂಚಣಿ ಸೌಲಭ್ಯವನ್ನು 2 ಸಾವಿರದಿಂದ 3 ಸಾವಿರ ರೂಪಾಯಿಗೆ ಏರಿಸಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

ಗುರುವಾರ ನಗರದ ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.  

ಕುಟುಂಬ ಪಿಂಚಣಿಯನ್ನು 1 ಸಾವಿರದಿಂದ 2 ಸಾವಿರ ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಹೆರಿಗೆ ಸೌಲಭ್ಯಗಳನ್ನು 20 ಸಾವಿರದಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.  ಮಂಡಳಿ ವತಿಯಿಂದ ಹೆಣ್ಣು ಮಗುವಿಗೆ ನೀಡಲಾಗುತ್ತಿದ್ದ 30 ಸಾವಿರ ರೂಪಾಯಿಯನ್ನು 35 ಸಾವಿರ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ತಿಳಿಸಿದರು.

ನರ್ಸರಿ ವಾರ್ಷಿಕ ಸಹಾಯ ಧನವನ್ನು 3 ಸಾವಿರದಿಂದ 5 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. 1 ರಿಂದ 4ನೆ ತರಗತಿಯ ಮಕ್ಕಳಿಗೆ 3 ರಿಂದ 5 ಸಾವಿರ, 5 ರಿಂದ 8 ನೆ ತರಗತಿಯ ಮಕ್ಕಳಿಗೆ 5 ಸಾವಿರ ದಿಂದ 8 ಸಾವಿರ, 9 ರಿಂದ 10 ನೆ ತರಗತಿಯ ಮಕ್ಕಳಿಗೆ 10 ರಿಂದ 12 ಸಾವಿರ, ಪ್ರಥಮ ಪಿಯುಸಿ ಮಕ್ಕಳಿಗೆ 10 ಸಾವಿರದಿಂದ 15 ಸಾವಿರ, ಐಟಿಐಯವರಿಗೆ 12 ಸಾವಿರದಿಂದ 20 ಸಾವಿರ, ಪದವಿ ವಿಧ್ಯಾರ್ಥಿಗಳಿಗೆ 15 ಸಾವಿರದಿಂದ 25 ಸಾವಿರ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 25 ಸಾವಿರದಿಂದ 40 ಸಾವಿರ ಏರಿಸಲಾಗಿದೆ, ಡಿಪೆÇ್ಲಮಾ ವಿದ್ಯಾರ್ಥಿಗಳಿಗೆ 15 ಸಾವಿರದಿಂದ 20 ಸಾವಿರ, ಎಮ್‍ಬಿಬಿಎಸ್ ವಿದ್ಯಾರ್ಥಿಗಳಿಗೆ 30 ಸಾವಿರದಿಂದ 50 ಸಾವಿರ ಎಮ್.ಡಿ ವಿದ್ಯಾರ್ಥಿಗಳಿಗೆ 45 ರಿಂದ 70 ಸಾವಿರ ಪಿಎಚ್.ಡಿ ವಿದ್ಯಾರ್ಥಿಗಳಿಗೆ 25 ರಿಂದ 50 ಸಾವಿರಗಳಷ್ಟು ಸಹಾಯ ಧನವನ್ನು ಹೆಚ್ಚಿಸಲಾಗಿದೆ ಎಂದರು.

ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಹಾಗೂ ಐಐಟಿಗಳಲ್ಲಿ ವ್ಯಾಸಂಗ ಮಾಡುವ ಕಟ್ಟಡ ಕಾರ್ಮಿಕರ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚದಲ್ಲಿ ಮಂಡಳಿ ಭರಿಸಲಿದೆ, ಪ್ಯಾರಾ ಮೆಡಿಕಲ್, ಬಿಎಡ್ ಕೋರ್ಸ್‍ಗಳನ್ನು ಹೊಸದಾಗಿ ಸೇರಿಸಲಾಗಿದೆ, ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 30 ಸಾವಿರ ಹಾಗೂ ಇತರೆ ವೃತ್ತಿಪರ ಕೋರ್ಸ್‍ಗಳಿಗೆ ಸಹಾಯ ಧನವನ್ನು ನೀಡಲಾಗುವುದು ಎಂದು ತಿಳಿಸಿದರು.

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯ ಧನವನ್ನು 10 ಸಾವಿರದಿಂದ 20 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ವಿವಾಹ ಸಹಾಯಧನವನ್ನು 50 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಳ ಮಾಡಲಾಗಿದೆ. ಈ ಎಲ್ಲ ನೂತನ ಪರಿಷ್ಕøತ ಸಹಾಯ ಧನವನ್ನು ಇಂದಿನಿಂದಲ್ಲೆ ಜಾರಿಗೊಳಿಸುವಂತೆ ಮಾನ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಸುಮಾರು 8 ಲಕ್ಷಕ್ಕೂ ಅಧಿಕ ಕಾರ್ಮಿಕ ಈ ಸೌಲಭ್ಯ ಸಹಾಯವನ್ನು ಪಡೆಯಲ್ಲಿದ್ದಾರೆ ಮಂಡಳಿಯು ವಾರ್ಷಿಕವಾಗಿ ಸುಮಾರು 100 ಕೋಟಿ ರೂಪಾಯಿಗಳನ್ನು ಈ ಎಲ್ಲಾ ಯೋಜನೆಗಳಿಗೆ ವೆಚ್ಚ ಮಾಡಲಿದ್ದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ವತಿಯಿಂದ ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ವಿಶೇಷ ಅದಾಲತ್ ಮೂಲಕವಾಗಿ ಸಹಾಯ ಧನವನ್ನು ಪಡೆಯುವುದಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲರ ಅರ್ಜಿಯನ್ನು ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕಾರ್ಮಿಕ ಆಯುಕ್ತ ಅಕ್ರಂ ಪಾಷಾ ಸೇರಿ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X