Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ...

ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ ಫೋಟೋ ಹಾಕಿ ಮರಣಪತ್ರ ನೀಡಿ: ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ1 July 2021 10:29 PM IST
share
ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ ಫೋಟೋ ಹಾಕಿ ಮರಣಪತ್ರ ನೀಡಿ: ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ

ಮೈಸೂರು,ಜು.1: ಲಸಿಕೆ ಪಡೆದವರಿಗೆ ಪ್ರಧಾನಮಂತ್ರಿ ಭಾವಚಿತ್ರವಿರುವ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ ರೀತಿ ಪ್ರಧಾನಮಂತ್ರಿ ಫೋಟೊ ಹಾಕಿ ಮರಣಪತ್ರ ನೀಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ ನಾಥ್  ವಾಗ್ದಾಳಿ ನಡೆಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  "ಲಸಿಕೆ ನೀಡುತ್ತಿರುವುದು ನಮ್ಮ ತೆರಿಗೆ ಹಣದಲ್ಲಿ ಹೀಗಿರುವಾಗ ನಿಮ್ಮ ಫೋಟೊ ಏಕೆ?. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ ರೀತಿ ಪ್ರಧಾನಮಂತ್ರಿ ಫೋಟೊ ಹಾಕಿ ಮರಣಪತ್ರ ನೀಡಿ. ಸ್ವಾತಂತ್ರ್ಯ ಬಂದ ನಂತರ ಹುಟ್ಟಿದ ನಮಗೆಲ್ಲಾ ಚಿಕ್ಕ ವಯಸ್ಸಿನಲ್ಲಿ ಕೆಲವು ಲಸಿಕೆ ನೀಡಿದ್ದಾರೆ. ಆಗ ಯಾವ ಪ್ರಧಾನಿಯೂ ತಮ್ಮ ಫೋಟೊ ಹಾಕಿಸಿಕೊಂಡು ಸರ್ಟಿಫಿಕೇಟ್ ನೀಡಿಲ್ಲ. ಇದೀಗ ಬಿಜೆಪಿ ಸರ್ಕಾರ ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಸರ್ಟಿಫಿಕೇಟ್ ನೀಡುತ್ತಿದೆ. ಕೊರೋನದಿಂದ ಸಾವನ್ನಪ್ಪಿದವರಿಗೂ ಇದೇ ರೀತಿ ಸರ್ಟಿಫಿಕೇಟ್ ನೀಡಿ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಜನರಿಗೆ ಗೊತ್ತಾಗಲಿ" ಎಂದು ಲೇವಡಿ ಮಾಡಿದರು.

ಮೂರನೇ ಅಲೆ ಮಕ್ಕಳಿಗೆ ಹರಡಲಿದೆ ಎಂದು ತಜ್ಞರು ಹೇಳಿದ್ದಾರೆ. ಎರಡನೇ ಅಲೆಯಲ್ಲಿ ನನ್ನ ಇಡೀ ಕುಟುಂಬ ಕೋವಿಡ್ ಗೆ ತುತ್ತಾಗಿ ನೊಂದಿದ್ದೇವೆ. ಕೊರೋನವನ್ನು ತಡೆಯುವಲ್ಲಿ ಮತ್ತು ನಿರ್ವಹಣೆ ಮಾಡುವಲ್ಲಿ ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ವೈದ್ಯರು ಮತ್ತು ಪತ್ರಕರ್ತರಿಗೆ ಈ ಸರ್ಕಾರ ವಿಶೇಷ ಪ್ಯಾಕೇಜ್ ನೀಡಲಿಲ್ಲ. ವೈದ್ಯರು ಮತ್ತು ಪತ್ರಕರ್ತರ ದಿನಾಚರಣೆ ಅಂಗವಾಗಿ ಈಗಲಾದರೂ ಇವರಿಗೆ ವಿಶೇಷ ಪ್ಯಾಕೇಜ್ ನೀಡಿ ಎಂದು ಡಾ.ಪುಷ್ಪಾ  ಅಮರ ನಾಥ್ ಒತ್ತಾಯಿಸಿದರು.

ರಾಜ್ಯದಲ್ಲಿ ಇದೀಗ ಲಸಿಕೆ ಕೊರತೆ ಎದುರಾಗಿದೆ. ಎಲ್ಲರಿಗೂ ಲಸಿಕೆ ಸಿಗುವಂತಾಗಬೇಕು. ಅದರಲ್ಲೂ ಗರ್ಭಿಣಿಯರಿಗೂ ಲಸಿಕೆ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಕೂಡಲೆ ಗರ್ಭಿಣಿಯರಿಗೂ ಲಸಿಕೆ ನೀಡಬೇಕು. ಜೊತೆಗೆ ಮಕ್ಕಳಿಗೂ ಲಸಿಕೆ ನೀಡಬೇಕು. ವಿದೇಶಗಳಲ್ಲಿ ಜನರಿಗೆ ಲಸಿಕೆ ನೀಡಿ ಪ್ರಾಣಿಗಳಿಗೂ ಲಸಿಕೆ ನೀಡುತ್ತಿದ್ದಾರೆ. ಆದರೆ ಭಾರತದಲ್ಲಿ ಪ್ರಾಣಿಗಳಿಗಿರಲಿ ಮನುಷ್ಯರಿಗೆ ಲಸಿಕೆ ಇಲ್ಲ. ಹೇಳಿಕೊಳ್ಳೋಕೆ ಭಾರತೀಯ ಜನತಾ ಪಕ್ಷ ಆದರೆ ಇದು ಭಾರತೀಯ ಜನರ ವಿರೋಧ ಪಕ್ಷ. ಪೊಲೀಯೋ ಲಸಿಕೆ ಮಾದರಿಯಲ್ಲಿ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಬೇಕು. ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲಸಿಕೆ ಅಭಿಯಾನ ಮಾಡಬೇಕು. ಲಸಿಕೆಗಾಗಿಯೇ ವಿಶೇಷ ಅಧಿವೇಶನ ಮಾಡಬೇಕು ಎಂದು ಡಾ.ಪುಷ್ಪಾ ಅಮರ ನಾಥ್ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X