ದ.ಕ. ಜಿಲ್ಲೆ: ಕೋವಿಡ್‌ಗೆ 14 ಬಲಿ, 285 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜು.1: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಗುರುವಾರ 14 ಮಂದಿಗೆ ಬಲಿಯಾಗಿದ್ದಾರೆ. ಜೊತೆಗೆ 285 ಮಂದಿಗೆ ಸೋಂಕು ತಗು ಲಿದ್ದು, 599 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರವು ಶೇ.3.26ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 93,137ಕ್ಕೆ ಏರಿಕೆಯಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 1209ಕ್ಕೆ ಏರಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 87,594 ಮಂದಿ ಗುಣಮುಖರಾಗಿದ್ದಾರೆ. 4,334 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
11,216 ಮಂದಿಗೆ ಲಸಿಕೆ
ದ.ಕ. ಜಿಲ್ಲೆಯಲ್ಲಿ ಗುರುವಾರ 11,216 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಮಂಗಳೂರು-5695, ಪುತ್ತೂರು-2224, ಸುಳ್ಯ-1479, ಬೆಳ್ತಂಗಡಿ-1330, ಬಂಟ್ವಾಳ-488 ಮಂದಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರ ಪೈಕಿ 3,817 ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗೆ ಇದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 8,25,332 ಮಂದಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ 6,80,139 ಮಂದಿ ಮೊದಲ ಡೋಸ್ ಪಡೆದಿದ್ದರೆ, ಇನ್ನುಳಿದ 1,45,193 ಮಂದಿ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.







