Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡೆಲ್ಟಾ ಪ್ಲಸ್ ಸೋಂಕು; ಕೇರಳದಿಂದ...

ಡೆಲ್ಟಾ ಪ್ಲಸ್ ಸೋಂಕು; ಕೇರಳದಿಂದ ಆಗಮಿಸುವವರ ಕುರಿತು ವಿಶೇಷ ಕಣ್ಗಾವಲು ವಹಿಸುವಂತೆ ರಾಜ್ಯ ಸರಕಾರ ಆದೇಶ

ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ವಿನಾಯಿತಿ

ವಾರ್ತಾಭಾರತಿವಾರ್ತಾಭಾರತಿ1 July 2021 10:49 PM IST
share

ಮಂಗಳೂರು, ಜು.1: ಕೇರಳ ರಾಜ್ಯದಲ್ಲಿ ಕೋವಿಡ್‌ನ ರೂಪಾಂತಗರಿ ಡೆಲ್ಟಾ ಪ್ಲಸ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ಆಗಮಿಸುವವರ ಕುರಿತು ವಿಶೇಷ ಕಣ್ಗಾವಲು ವಹಿಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ. ವಿಮಾನ, ರೈಲು, ಬಸ್, ಟ್ಯಾಕ್ಸಿ, ಸ್ವಂತ ವಾಹನಗಳ ಮೂಲಕ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷೆಯ ವರದಿಯನ್ನು ಹೊಂದಿರತಕ್ಕದ್ದು. ಇದು ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ವಿಮಾನಯಾನಗಳೀಗೂ ಅನ್ವಯ ವಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಪರಿಶೀಲಿಸಬೇಕು ಎಂದು ಆದೇಶಲ್ಲಿ ಉಲ್ಲೇಖಿಸಲಾಗಿದೆ.

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ದ.ಕ. ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳಿಗೆ (ಚಾಲಕರು, ಕ್ಲೀನರ್, ಪ್ರಯಾಣಿಕರು, ) ಚೆಕ್‌ಪೋಸ್ಟ್‌ಗಳಲ್ಲಿ ನಿಗಾವಹಿಸಬೇಕು.

ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದಿನನಿತ್ಯ ಭೇಟಿ ನೀಡುವ ವಿದ್ಯಾರ್ಥಿಗಳು/ಸಾರ್ವಜನಿಕರು ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು, ಕೋವಿಡ್ ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿನಾಯಿತಿ: ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರುವವರು, ಸಾಂವಿಧಾನಿಕ ಕಾರ್ಯಕಾರಿಗಳು-ವೈದ್ಯಕೀಯ ಸಿಬ್ಬಂದಿ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ತುರ್ತು ಸಂದರ್ಭದಲ್ಲಿ (ಕುಟುಂಬದಲ್ಲಿ ಮರಣ ಸಂಭವಿಸಿದ ಪಕ್ಷದಲ್ಲಿ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ) ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಸ್ವಾಬ್ ಮಾದರಿಗಳನ್ನು ಪರೀಕ್ಷೆಗಾಗಿ ರಾಜ್ಯದಲ್ಲಿಯೇ ಸಂಗ್ರಹಿಸತಕ್ಕದ್ದು. ಇಂತಹ ಪ್ರಯಾಣಿಕರ ಹೆಸರು, ವಿಳಾಸ, ಸಂಪರ್ಕ ಸಂಖ್ಯೆಯ ಪೂರ್ಣ ವಿವರಗಳನ್ನು ಗುರುತಿನ ಚೀಟಿಯ ಆಧಾರದಲ್ಲಿ ಪಡೆಯತಕ್ಕದ್ದು. ಇವರೆಲ್ಲರಿಗೂ ರಾಜ್ಯ ಪ್ರವೇಶಿಸಲು ವಿನಾಯಿತಿ ನೀಡಬಹುದಾಗಿದೆ. ಆರ್‌ಟಿಪಿಸಿಆರ್ ಪರೀಕ್ಷೆಯ ವರದಿಯ ಆಧಾರದಲ್ಲಿ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X