ವೀಕೆಂಡ್ ಕರ್ಫ್ಯೂ: ದ.ಕ. ಜಿಲ್ಲೆಯಲ್ಲಿ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಫೈಲ್ ಫೋಟೊ
ಮಂಗಳೂರು, ಜು.2: ದ.ಕ. ಜಿಲ್ಲೆಯಲ್ಲಿ ಶುಕ್ರವಾರದಿಂದ ಅನ್ವಯಿಸಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಅನ್ಲಾಕ್ಗೆ ಆದೇಶ ಮಾಡಲಾಗಿದ್ದರೂ, ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ಆದರೆ ಅಗತ್ಯ ವಸ್ತುಗಳ ಅಂಗಡಿಗಳು ಶನಿವಾರ ಮತ್ತು ರವಿವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆದಿರಲಿವೆ. ಉಳಿದ ಯಾವುದೇ ಅಂಗಡಿಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ದಿನಸಿ, ತರಕಾರಿ, ಹಾಲು, ಹಣ್ಣು ಹಂಪಲು, ಮೀನು, ಮಾಂಸ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





