ದ.ಕ. ಜಿಲ್ಲೆ : ಕೋವಿಡ್‌ಗೆ 13 ಬಲಿ; 302 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜು. 2: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಗುರುವಾರ 13 ಮಂದಿ ಬಲಿಯಾಗಿದ್ದಾರೆ. ಜೊತೆಗೆ 302 ಮಂದಿಗೆ ಸೋಂಕು ತಗುಲಿದ್ದು, 721 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರವು ಶೇ.3.26ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 93,439ಕ್ಕೆ ಏರಿಕೆಯಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 1222ಕ್ಕೆ ಏರಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 88,315 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3,902 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
15,808 ಮಂದಿಗೆ ಲಸಿಕೆ
ದ.ಕ. ಜಿಲ್ಲೆಯಲ್ಲಿ ಶುಕ್ರವಾರ 15,808 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ಮಂಗಳೂರು-9209, ಪುತ್ತೂರು-1401, ಸುಳ್ಯ-752, ಬೆಳ್ತಂಗಡಿ-2862, ಬಂಟ್ವಾಳ-1594 ಮಂದಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರ ಪೈಕಿ 7057 ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗೆ ಇದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 8,41,150 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.







